ನಂದಿ ಗಿರಿಧಾಮದ ಭೂಕುಸಿತ: ಶಾಶ್ವತ ರಸ್ತೆ ನಿರ್ಮಾಣದವರೆಗೂ ಪ್ರವಾಸಿಗರಿಗೆ ನಿಷೇಧ – ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ಮಂಗಳವಾರ ರಾತ್ರಿ ಸುರಿದ ಭಾರಿ ಪ್ರಮಾಣದ ಮಳೆಯಿಂದಾಗಿ ನಂದಿ ಗಿರಿಧಾಮದ ಬಳಿ ಭೂಕುಸಿತ ಉಂಟಾಗಿ ನಂದಿಗಿರಿಧಾಮಕ್ಕೆ ಸಾಗುವ ರಸ್ತೆಗೆ ಒಂದು ಸ್ಥಳದಲ್ಲಿ ಹಾನಿಯಾಗಿದ್ದು.ಶಾಶ್ವತವಾಗಿ ರಸ್ತೆ ಪುನರ್ ನಿರ್ಮಾಣ ಆಗೋವರೆಗೂ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ನಂದಿ ಗಿರಿಧಾಮದಲ್ಲಿ ಭೂಕುಸಿತವಾಗಿರುವ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.

ಹೆಚ್ಚಿನ ಪ್ರಮಾಣದಲ್ಲಿ ನಿನ್ನೆ ರಾತ್ರಿ ಮಳೆ ಸುರಿದ ಪರಿಣಾಮ ಬೆಟ್ಟದ ಮೇಲಿನಿಂದ  ನೀರು ಒಂದೇ ಭಾಗದಲ್ಲಿ ಇಳಿಜಾರಾಗಿ  ನಿರಂತರವಾಗಿ ಹರಿಯುವ ವೇಳೆ  ಒಂದೇ ಕಡೆ ನೀರು ಸಂಗ್ರಹಗೊಂಡಿದ್ದರ ಪರಿಣಾಮ ಅಲ್ಲಿದ್ದ ಮಣ್ಣು ಹಾಗೂ ಚಿಕ್ಕ ಗುಡ್ಡ ಇಳಿಮುಖವಾಗಿ ಕುಸಿದ ರಭಸ ಹಾಗೂ ಒತ್ತಡಕ್ಕೆ ನಂದಿಗಿರಿಧಾಮಕ್ಕೆ ಸಾಗುವ ರಸ್ತೆಗೆ ಒಂದು ಕಡೆ ಹಾನಿಯುಂಟಾಗಿದೆ. ಅಲ್ಲಿದ್ದ ಮರಗಿಡಗಳು ನಾಶವಾಗಿವೆ. ಭೂ ಕುಸಿತವಾದ ಕಾರಣ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.ಇಂದೇ ತಾತ್ಕಾಲಿಕ ರಸ್ತೆಯನ್ನು ನಿರ್ಮಾಣ ಮಾಡಿ ಬೆಟ್ಟದ ಮೇಲಿರುವ ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗುತ್ತಿದೆ.

ಮತ್ತೆ ಭೂ ಕುಸಿತ ಉಂಟಾಗದಂತೆ ತಡೆಗೋಡೆ ನಿರ್ಮಾಣ, ನೀರು ಹರಿಯಲು ವ್ಯವಸ್ಥೆ ಹಾಗೂ ಕಲ್ವರ್ಟ್ ನ್ನು  ಮುಂದಿನ ಹದಿನೈದು ರಿಂದ ಇಪ್ಪತ್ತು ದಿವಸಗಳ ಒಳಗಡೆ ನಿರ್ಮಿಸಿ ಶಾಶ್ವತವಾಗಿ ಸುರಕ್ಷಿತ ರಸ್ತೆಯನ್ನು ನಿರ್ಮಿಸಲಾಗುವುದು.

ರಸ್ತೆ ಕಾಮಗಾರಿ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯವರಿಗೆ ಈಗಾಗಲೇ ಸೂಚಿಸಿದ್ದೇನೆ ಅವರೂ ಸಹ ಈಗಾಗಲೇ ಕೆಲಸವನ್ನು ಆರಂಭಿಸಿದ್ದಾರೆ.ತಡೆಗೋಡೆ ಹಾಗೂ ಶಾಶ್ವತವಾಗಿ ರಸ್ತೆ ನಿರ್ಮಾಣವಾಗುವವರೆಗೂ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದರು.  

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಕಾರ್ಯಪಾಲಕ ಅಭಿಯಂತರ ತಿಮ್ಮರಾಯಪ್ಪ, ಜಿಲ್ಲಾ ಅರಣ್ಯಾಧಿಕಾರಿ ಅರ್ಸಲನ್, ನಂದಿಗಿರಿಧಾಮದ ವಿಶೇಷ ಅಧಿಕಾರಿ ಗೋಪಾಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]