ದೊಡ್ಡಬಳ್ಳಾಪುರ: ಸೆ.3ರಂದು ನಡೆಯಲಿರುವ ನಗರಸಭೆ ಚುನಾವಣೆಗೆ ನಾಮ ಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಇಂದು ಕ್ರಮಬದ್ದವಾಗಿದ್ದ 135 ನಾಮಪತ್ರಗಳ ಪೈಕಿ, 16 ಅಭ್ಯರ್ಥಿಗಳು ತಮ್ಮ ನಾಮ ಪತ್ರಗಳನ್ನು ಹಿಂದಕ್ಕೆ ಪಡೆದಿದ್ದು, ಅಂತಿಮವಾಗಿ ನಗರ ಸಭೆಯ 31 ಸ್ಥಾನಗಳಿಗಾಗಿ 119 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ..
ನಾಮಪತ್ರ ಹಿಂಪಡೆದ ನಂತರ ಕಾಂಗ್ರೆಸ್-31, ಬಿಜೆಪಿ-30, ಜೆಡಿಎಸ್-28, ಸಿಪಿಐ(ಎಂ)-2, ಬಿಎಸ್ಪಿ-3 , ಕನ್ನಡ ಪಕ್ಷ-5, ಕೆ.ಆರ್.ಎಸ್-2, ಉತ್ತಮ ಪ್ರಜಾಕೀಯ ಪಕ್ಷ-1, ಎಸ್.ಡಿ.ಪಿ.ಐ-2, ಹಾಗೂ ಪಕ್ಷೇತರರು ಸೇರಿ15 ಮಂದಿ ಅಂತಿಮ ಕಣದಲ್ಲಿ ಇದ್ದಾರೆ.
ಬಿಜೆಪಿಯ 28ನೇ ವಾರ್ಡ್ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, 31 ಸ್ಥಾನಗಳಲ್ಲಿ ಬಿಜೆಪಿ 30 ಸ್ಥಾನಗಳಲ್ಲಿ ಸ್ಪರ್ಧೆ ನಡೆಸುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……