ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಎರಡನೇ ಅಲೆಯ ನಿಮಿತ್ತ ರಾಜ್ಯ ಸರ್ಕಾರವು ವಿದ್ಯುತ್ ಮಗ್ಗ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರಿಗೆ ರೂ. 3000/- ಗಳ ಪರಿಹಾರವನ್ನು ಘೋಷಿಸಿದ್ದು, ಕಳೆದ ಸಾಲಿನಲ್ಲಿ ನೋಂದಾಯಿಸಲಾದ ಆರ್.ಆರ್. ಸಂಖ್ಯೆಗಳ ನೋಂದಣಿಗೆ 2021ರ ಆಗಸ್ಟ್ 31 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯ ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ವ್ಯಾಪ್ತಿಯೊಳಗೆ ವಿದ್ಯುತ್ ಮಗ್ಗ ನೇಯ್ಗೆ, ಟ್ವಿಸ್ಟಿಂಗ್, ವೈಂಡಿಂಗ್, ವಾಪಿರ್ಂಗ್, ಝರಿ ವೈಂಡಿಂಗ್, ವಾರ್ಪ್ ನಾಟಿಂಗ್ ಮತ್ತು ಸೈಜಿಂಗ್ ಚಟುವಟಿಕೆಯಲ್ಲಿ ತೊಡಗಿರುವ ಎಲ್ಲಾ ನೇಕಾರರು, ಕೆಲಸಗಾರರು ತಮ್ಮ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಗ್ಗ ನೇಕಾರ ಸಹಕಾರ ಸಂಘಗಳು ಅಥವಾ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು 2021ರ ಆಗಸ್ಟ್ 31 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಗಾಮೆರ್ಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ-561203 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..