ತಬರನ ಕತೆಯಲ್ಲಿನ ತಬರನಂತೆ ಸರ್ಕಾರಿ ಕಚೇರಿಗಳಿಗೆ ಜನರ ಅಲೆದಾಟವನ್ನು ತಪ್ಪಿಸುವುದೇ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪ್ರಥಮ ಅದ್ಯತೆ: ಎಚ್.ಎಸ್.ಜಗದೀಶ್

ದೊಡ್ಡಬಳ್ಳಾಪುರ: 70ರ ದಶಕದಲ್ಲಿನ ‘ತಬರನ ಕತೆ’ಯಲ್ಲಿನ ತಬರನಂತೆ ಸರ್ಕಾರಿ ಕಚೇರಿಗಳಿಗೆ ಜನರ ಅಲೆದಾಟವನ್ನು ತಪ್ಪಿಸುವುದೇ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪ್ರಥಮ ಅದ್ಯತೆಯಾಗಿದೆ. ಈ ಕೆಲಸಕ್ಕೆ ಸಾರ್ವಜನಿಕರ ಸಹಕಾರವು ಮುಖ್ಯವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಎಚ್.ಎಸ್.ಜಗದೀಶ್ ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಎಸಿಬಿ ವತಿಯಿಂದ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದರು. 

ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಕುಂದುಕೊರತೆ ಸಭೆಯನ್ನು ಪ್ರತಿ ತಿಂಗಳು ತಾಲ್ಲೂಕು ಕೇಂದ್ರಗಳಲ್ಲಿ ನಡೆಸಲಾಗುವುದು. ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕವನ್ನು ಹೊಂದಿರುವ ಕಂದಾಯ, ಪೊಲೀಸ್, ಕೃಷಿ, ತೋಟಗಾರಿಕೆ ಸೆಋಇದಂತೆ ವಿವಿಧ ಇಲಾಖೆಗಳಲ್ಲಿ ಕಾನೂನು ಬದ್ದವಾದ ಜನರ ಕೆಲಸಗಳನ್ನು ಮಾಡಿಕೊಡಲು ವಿನಾಕಾರಣ ವಿಳಂಭ ಮಾಡುವುದು ಸಹ ಪರೋಕ್ಷವಾಗಿ ಭ್ರಷ್ಟಾಚಾರಕ್ಕೆ ದಾರಿಮಾಡಿಕೊಟ್ಟಂತೆಯೆ. ಹೀಗಾಗಿ ಸರ್ಕಾರಿ ಇಲಾಖೆಗಳಲ್ಲಿ ಕಾಲಮಿತಿಯ ಒಳಗೆ ತಮ್ಮ ಕೆಲಸಗಳು ಆಗದೇ ಇದ್ದಾಗ ಸಾರ್ವಜನಿಕರು ಸೂಕ್ತ ದಾಖಲೆಗಳೊಂದಿಗೆ ಎಸಿಬಿಗೆ ದೂರು ಸಲ್ಲಿಬೇಕು ಎಂದರು.

ಎಸಿಬಿ ಹೊಸ ಕಾನೂನುಗಳ ಪ್ರಕಾರ ಸರ್ಕಾರಿ ಅಧಿಕಾರಿಗಳಷ್ಟೇ ಅಲ್ಲದೆ ಖಾಸಗಿ ವ್ಯಕ್ತಿಗಳ ಮೂಲಕವು ಲಂಚಕ್ಕೆ ಬೇಡಿಕೆ ಇಟ್ಟರೆ ಅವರ ವಿರುದ್ಧವು ಸಹ ಕ್ರಮ ಕೈಗೊಳ್ಳಲು ಅವಕಾಶವಿದೆ. ಕಾನೂನಿನಲ್ಲಿ ಅವಕಾಶ ಇಲ್ಲದ ಕೆಲಸವನ್ನು ತಮ್ಮ ಪರವಾಗಿ ಮಾಡಿಕೊಡುವಂತೆ ಸರ್ಕಾರಿ ಅಧಿಕಾರಿಗಳ ಮೇಲೆ ಒತ್ತಡ ಹಾಕುವುದು ಸಹ ಅಪರಾಧವಾಗಿದೆ. ಸರ್ಕಾರಿ ಅಧಿಕಾರಿಗಳು ಸಹ ಸೂಕ್ತತ ದಾಖಲೆಗಳ ಮೂಲಕ ದೂರು ನೀಡಲು ಅವಕಾಶವಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಸಕಾಲ’ ಆಡಳಿತದ ಬಗ್ಗೆ ಸಾರ್ವಜನಿಕರು ತಿಳೀದಿಕೊಳ್ಳಬೇಕು ಎಂದರು.

ಕುಂದುಕೊರತೆ ಸಭೆಯಲ್ಲಿ ಖಾತೆ ಬದಲಾವಣೆ, ಕೆರೆ ಅಂಗಳದಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿರುವುದು, ಹುಲುಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಕಬಳಿಸಿರುವವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಇರುವುದು, ಒಂದೇ ಕುಟುಂಬಕ್ಕೆ 16 ಎಕರೆ ಭೂಮಿ ಮಂಜೂರು ಮಾಡಿರುವುದು, ಗ್ರಾಮಗಳಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರು ಎಸಿಬಿ ಅಧಿಕಾರಿಗಳಿಗೆ ಲಿಖಿತವಾಗಿ ದೂರುಗಳನ್ನು ಸಲ್ಲಿಸಿದರು. 

ಸಭೆಯಲ್ಲಿ ತಹಶೀಲ್ದಾರ್ ಟಿ‌.ಎಸ್.ಶಿವರಾಜ್, ಗ್ರೇಢ್-2 ತಹಶೀಲ್ದಾರ್ ಎಂ.ಎಸ್.ರಮೇಶ್, ಎಸಿಬಿ ಇನ್ಸ್ಪೆಕ್ಟರ್ ಕುಮಾರಸ್ವಾಮಿ, ರಾಘವೇಂದ್ರ, ದೊಡ್ಡಬಳ್ಳಾಪುರ ಸರ್ಕಲ್ ಇನ್ಸ್ ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

"ಧರ್ಮಸ್ಥಳ ಸತ್ಯ ಯಾತ್ರೆಗೆ" (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

[ccc_my_favorite_select_button post_id="113258"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನ: Cmsiddaramaiah

[ccc_my_favorite_select_button post_id="113214"]
ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ!| Video ನೋಡಿ

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿ ನುಗ್ಗಿರುವ ಘಟನೆ ನಗರದ ಹೊರವಲಯದಲ್ಲಿನ Doddaballapura ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

[ccc_my_favorite_select_button post_id="113161"]
ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit & Run) ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ

[ccc_my_favorite_select_button post_id="113236"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!