ದೊಡ್ಡಬಳ್ಳಾಪುರ ನಗರಸಭೆಯ ಚುಕ್ಕಾಣಿ ಹಿಡಿಯುವವರಿಗೆ ಸಮಸ್ಯೆಗಳ ಸವಾಲುಗಳು / ನಗರದ ಸಮಗ್ರ ಅಭಿವೃದ್ದಿಯ ಪ್ರಣಾಳಿಕೆ ನಿರೀಕ್ಷೆ

ದೊಡ್ಡಬಳ್ಳಾಪುರ: ನಗರಸಭೆ ಚುನಾವಣೆ ಘೋಷಣೆಯಾಗಿದ್ದು, ಪ್ರಕ್ರಿಯೆಗಳು ನಡೆಯುತ್ತಿವೆ. ಎರಡುವರೆ ವರ್ಷಗಳ ನಂತರ ಜನಪ್ರತಿನಿಗಳ ಕೈಗೆ ಅಧಿಕಾರ ಸಿಗಲಿದೆ.

ನಗರಸಭೆಯ ಸಾಮಾನ್ಯ ಹೊಣೆಗಾರಿಕೆ ಹೊರತುಪಡಿಸಿ, ಯಾವುದೇ ಅಭಿವೃದ್ದಿಗಳಾಗುತ್ತಿಲ್ಲ ಎನ್ನುವುದು ನಾಗರಿಕರ ದೂರಾಗಿದ್ದು, ಅಭ್ಯರ್ಥಿಗಳು ನಗರದ ಅಭಿವೃದ್ದಿಯ ಸಮಗ್ರ ದೃಷ್ಟಿಕೋನ ಇರುವ ಚುನಾವಣಾ ಪ್ರಣಾಳಿಕೆ ನೀಡಿ ಭರವಸೆಗಳನ್ನು ಈಡೇರಿಸಬೇಕಿದೆ.

ಸ್ವಚ್ಛತೆಗೆ ಆದ್ಯತೆ: ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಕಸ ಸಂಗ್ರಹಣೆ ವಾಹನಗಳ ಮೂಲಕ ಕಸ ಸಂಗ್ರಹ ಮಾಡಲಾಗುತ್ತಿದ್ದು, ನಗರದ ಹೊರವಲಯದ ವಡ್ಡರಪಾಳ್ಯದ ನಗರಸಭೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಸ ವಿಂಗಡಿಸಲಾಗುತ್ತಿದೆ. ಮೂಲದಲ್ಲಿಯೇ ಹಸಿ ಕಸ, ಒಣ ಕಸ, ಇತರೆ ತ್ಯಾಜ್ಯಗಳನ್ನು ಬೇರ್ಪಡಿಸಿ ನೀಡುವಂತೆ ನಗರಸಭೆ ಆದೇಶವಿದ್ದರೂ ಇನ್ನೂ ಹಲವಾರು ಕಡೆ ಕಸ ಸಂಗ್ರಹಣೆ ವಾಹನಗಳಿಗೆ ನೀಡದೇ ಕಸವನ್ನು ರಸ್ತೆ ಬದಿಗಳಲ್ಲಿಯೇ ಸುರಿಯಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಆಧುನಿಕ ವಿಧಾನ ಬಳಸಿ ಕಸ ವಿಂಗಡನೆ ಮಾಡಲು  ಒತ್ತು ನೀಡಬೇಕಿದೆ. ಮಳೆಗಾಲದಲ್ಲಿ ಸೊಳ್ಳೆಗಳಿಂದ ಡೆಂಗ್ಯೂ, ಚಿಕೂನ್ ಗುನ್ಯಾ ಮೊದಲಾದ ರೋಗಗಳು ಹರಡುವುದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ನಗರವನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸಿ ಸೊಳ್ಳೆ, ನೊಣಗಳ ನಿವಾರಣೆ ಔಷಗಳನ್ನು ಸಿಂಪಡಿಸಬೇಕಿದೆ. ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿಯಂತ್ರಿಸಬೇಕಿದೆ.

ರಸ್ತೆ, ಚರಂಡಿಗಳ ಅವ್ಯವಸ್ಥೆ: ನಗರದಲ್ಲಿ ನಲ್ಲಿ ನೀರಿನ ಸಂಪರ್ಕ, ಕೇಬಲ್ ಅಳವಡಿಕೆ ಮೊದಲಾದ ಕಾರಣಗಳಿಂದಾಗಿ ಅಗೆದಿರುವ ರಸ್ತೆಗಳು ಇನ್ನೂ ದುರಸ್ತಿಯಾಗದೇ ವಾಹನ ಸವಾರರು ಪರದಾಡುವಂತಾಗಿದೆ. ಮಳೆ ಬಂದರೆ ರಸ್ತೆಗಳಲ್ಲಿ ಹೊಂಡಗಳು ನಿರ್ಮಾಣವಾಗುತ್ತವೆ. ಕೆಲವಡೆ ಕೆಸರು ಗದ್ದೆಗಳಂತಾಗಿವೆ. ಇನ್ನು ಹಲವಾರು ವಾರ್ಡ್‍ಗಳಲ್ಲಿ ಚರಂಡಿಗಳು ಕಟ್ಟಿಕೊಂಡು, ಅವ್ಯವಸ್ಥೆಗಳಾಗಿವೆ. ಮಳೆ ಬಂದರೆ ರಸ್ತೆಯಲ್ಲಿಯೇ ನೀರು ಹರಿಯುತ್ತದೆ. ಒಳ ಚರಂಡಿಗಳಂತೂ ಒಂದಲ್ಲ ಒಂದು ದಿನ ಕಟ್ಟಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಲೇ ಇವೆ.

ನೆನೆಗುದಿಗೆ ಬಿದ್ದ ರಸ್ತೆ ವಿಸ್ತರಣೆ: ನಗರ ತೀವ್ರಗತಿಯಲ್ಲಿ ಬೆಳೆಯುತ್ತಿದ್ದು, ಸಹಸ್ರಾರು ವಾಹನಗಳು ಸಂಚರಿಸುತ್ತಿವೆ. ವಾಹನ ದಟ್ಟಣೆ ಹಾಗೂ ಜನಸಂದಣಿಯಿಂದಾಗಿ, ರಸ್ತೆಗಳ ಅಗಲೀಕರಣ ಅನಿವಾರ್ಯವಾಗಿದೆ. ಈ ನಡುವೆ ನಗರದ ಹೊರವಲಯದ ರಸ್ತೆಗಳು ಮಾತ್ರ ವಿಸ್ತರಣೆಯಾಗುತ್ತಿದ್ದು, ನಗರದಲ್ಲಿನ ರಸ್ತೆಗಳು ವಿಸ್ತರಣೆಯಾಗಬೇಕಿದೆ ಎನ್ನುವುದು ನಾಗರಿಕರ ಒತ್ತಾಯವಾಗಿದೆ.

ಆಸ್ತಿ ಮಾಲೀಕರು ನ್ಯಾಯಾಲಯದ ಮೊರೆ ಹೋದ ಪರಿಣಾಮ ಹಾಗೂ ರಸ್ತೆ ವಿಸ್ತರಣೆಗೆ ಅಗತ್ಯ ಅನುದಾನದ ಕೊರತೆಯಿಂದಾಗಿ ನೆನೆಗುದಿಗೆ ಬಿದ್ದಿದೆ.

ಉತ್ತಮ ಪರಿಸರ ನಿರ್ಮಾಣಕ್ಕೆ ಆದ್ಯತೆ: ನಗರಸಭೆ ಬರೀ ಮೂಲ ಸೌಕರ್ಯಗಳನ್ನು ನೀಡಿದರೆ ಸಾಲದು, ಉತ್ತಮ ಪರಿಸರವನ್ನು ನಿರ್ಮಾಣ ಮಾಡುವ ಕಡೆ ಆದ್ಯತೆ ನೀಡಬೇಕಿದೆ. ನಗರದಲ್ಲಿ ಹಲವಾರು ಉದ್ಯಾನವನಗಳು ಸೂಕ್ತ ನಿರ್ವಹಣೆಯಿಲ್ಲದೇ ಸೊರಗುತ್ತಿವೆ. ಇಲ್ಲಿ ವೈವಿದ್ಯಮಯ ಗಿಡಗಳನ್ನು ಬೆಳೆಸಬೇಕಿದೆ. ನಗರದ ಸುತ್ತಲೂ 500ಕ್ಕೂ ಹೆಚ್ಚು ಜೀವ ವೈವಿದ್ಯತೆಗಳಿದ್ದು ಇವುಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕಿದೆ ಎನ್ನುತ್ತಾರೆ ಪರಿಸರ ಪ್ರೇಮಿಗಳು.

ನಗರಕ್ಕೆ ನೀರು ಸರಬರಾಜು ಮಾಡಲು ಜಕ್ಕಲಮಡುಗು ಜಲಾಶಯ ಹಾಗೂ ಕೊಳವೆ ಬಾವಿಗಳೇ ಆಧಾರವಾಗಿವೆ.ಕೆರೆ,ಕುಂಟೆ ಕಲ್ಯಾಣಿ ಮೊದಲಾಗಿ ನೀರಿನ ಮೂಲಗಳನ್ನು ಸಂರಕ್ಷಿಸಲು ಆದ್ಯತೆ ನೀಡಬೇಕಿದ್ದು, ನೀರಿನ ಸಮಸ್ಯೆ ಬಗೆಹರಿಸಬೇಕಿದೆ. 

ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳು: ನಗರದಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸಲು, ಪೈಪ್‍ಲೈನ್ ಅಳವಡಿಸಲಾಗಿ ಮೂರು ವರ್ಷ ಕಳೆದರೂ ಇನ್ನೂ ಸಂಪರ್ಕ ನೀಡಿಲ್ಲ.  ಮನೆ ಮುಂದಿನ ಪೈಪ್‍ಗಳು ಹಾಳಾಗುತ್ತಿವೆ.

ಕೃಷ್ಣ ರಾಜ ಮಾರುಕಟ್ಟೆಯಲ್ಲಿ ಹೊಸ ತರಕಾರಿ ಅಂಗಡಿಗಳ ನಿರ್ಮಾಣ, ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಬಸ್ ನಿಲ್ದಾಣ ಸೇರಿದಂತೆ ನಗರದ ವಿವಿಧೆಡೆ ಸಿಸಿ ಕ್ಯಾಮರಾಗಳ ಅಳವಡಿಕೆ ಹಾಗೂ ನಿರ್ವಹಣೆ, ಈಜುಕೊಳ ನಿರ್ಮಾಣ ಮೊದಲಾದ ಕಾಮಗಾರಿಗಳು ಆಗಬೇಕಿವೆ. ನಗರದ ಹೊರವಲಯದ ಅಕ್ರಮ ಬಡಾವಣೆಗಳಿಗೆ ಕಡಿವಾಣ, ನಗರ ಹಾಗೂ ಗ್ರಾಮಗಳ ಗಡಿ ವಿಂಗಡನೆ ವೈಜ್ಞಾನಿಕವಾಗಿ ಕೈಗೊಳ್ಳಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

"ಧರ್ಮಸ್ಥಳ ಸತ್ಯ ಯಾತ್ರೆಗೆ" (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

[ccc_my_favorite_select_button post_id="113258"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನ: Cmsiddaramaiah

[ccc_my_favorite_select_button post_id="113214"]
ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ!| Video ನೋಡಿ

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿ ನುಗ್ಗಿರುವ ಘಟನೆ ನಗರದ ಹೊರವಲಯದಲ್ಲಿನ Doddaballapura ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

[ccc_my_favorite_select_button post_id="113161"]
ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit & Run) ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ

[ccc_my_favorite_select_button post_id="113236"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!