ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ದುರ್ಗೆನಹಳ್ಳಿ ಗ್ರಾಮದ ಶಾಲೆ ಮುಂಭಾಗದಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ.
ಬುಧವಾರ ತಡರಾತ್ರಿ ಘಟನೆ ನಡೆದಿದ್ದು, ರಾತ್ರಿ ವೇಳೆ ಮರ ಮುರಿದು ಬಿದ್ದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮರ ತಂತಿಗಳ ಮೇಲೆ ಉರುಳಿದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಶಾಲಾ ಆವರಣ ವಾಗಿದ್ದರಿಂದ ರಾತ್ರಿ ವೇಳೆ ಘಟನೆ ಸಂಭವಿಸಿದ ಪರಿಣಾಮ, ನಡೆಯಬಹುದಾಗಿದ್ದ ಬೃಹತ್ ಅನಾಹುತವೋಂದು ತಪ್ಪಿದೆ ಎಂದು ಗ್ರಾಮಸ್ಥರು ಶಾಲಾ ಶಿಕ್ಷಕರು ನಿಟ್ಟುಸಿರು ಬಿಟ್ಟಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..