ಮುಂಬೈ: ಅಫ್ಘಾನಿಸ್ತಾನದಿಂದ ಬರುವ ಮುಸ್ಲಿಂ ಪ್ರಜೆಗಳಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್‍ನ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ನಾಗ್ಪುರ-ವಾರ್ಧಾ ಪ್ರದೇಶದ ಮೂರು ದಿನಗಳ ಭೇಟಿಗಾಗಿ ವಿಮಾನ ನಿಲ್ದಾಣಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಭಾರತವು ತಾಲಿಬಾನ್ ಉದ್ದೇಶದ ಕೇಂದ್ರಬಿಂದುವಾಗಿರುವುದರಿಂದ ದೇಶವು ಬಹಳ ದೊಡ್ಡ ಅಪಾಯ ಎದುರಿಸುತ್ತಿದೆ. ಆದ್ದರಿಂದ ದೇಶವು ತಾಲಿಬಾನೀಕರಣ ಆಗುವುದನ್ನು ತಡೆಯಬೇಕಿದೆ ಎಂದಿದ್ದಾರೆ.
ಅಫ್ಘಾನಿಸ್ತಾನದ ಮುಸ್ಲಿಂರಿಗೆ ಆಶ್ರಯ ಕಲ್ಪಿಸ ಬಾರದು. ಆದರೆ ಅಲ್ಲಿಂದ ಬರುವ ಹಿಂದೂ ಮತ್ತು ಸಿಖ್ ನಿರಾಶ್ರಿತರಿಗೆ ಭಾರತವು ಗಡಿಯನ್ನು ತೆರೆದಿರಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..