ದೊಡ್ಡಬಳ್ಳಾಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಆ. 28 ಮತ್ತು 29 ರಂದು ನಡೆಯುವ ಸಾಮಾನ್ಯ ಪರೀಕ್ಷೆಗೆ (ಸಿಇಟಿ), ಪದವಿ ಪೂರ್ವ ಶಿಕ್ಷಣ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 9 ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ದತೆಗಳನ್ನು ಕೈಗೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳಾದ ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸು ಪದವಿ ಪೂರ್ವ ಕಾಲೇಜು (288), ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು (720), ಸರ್ಕಾರಿ ಪದವಿ ಪೂರ್ವ ಕಾಲೇಜು (216), ಹೊಸಕೋಟೆಯ ಸರ್ಕಾರಿ ಬಾಲಕಿಯ ಪದವಿ ಪೂರ್ವ ಕಾಲೇಜು (408), ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು (360),ಮಾರುತಿ ಪದವಿ ಪೂರ್ವ ಕಾಲೇಜು(408), ಮಹದೇವ ಪದವಿ ಪೂರ್ವ ಕಾಲೇಜು (360) ಹಾಗೂ ನೆಲಮಂಗಲದ ಬಸವೇಶ್ವರ ಬಾಲಕಿಯ ಪದವಿ ಪೂರ್ವ ಕಾಲೇಜು (720), ಎಸ್.ಜೆ.ಎಂ ಸರ್ಕಾರಿ ಪದವಿ ಪೂರ್ವ ಕಾಲೇಜು(312) ಸೇರಿ ಒಟ್ಟು 3792ವಿದ್ಯಾರ್ಥಿಗಳು ಬರೆಯಲಿದ್ದಾರೆ.
ಕಳೆದ ಸಾಲಿಗಿಂತ ಈ ಬಾರಿ 1704 ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.
ಕೊವಿಡ್-19 ಹಿನ್ನೆಲೆಯಲ್ಲಿ ಪ್ರತಿ ಸಿಇಟಿ ಪರೀಕ್ಷಾ ಕೇಂದ್ರದಲ್ಲೂ ವಿದ್ಯಾರ್ಥಿಗಳಿಗೆ ಶುಚಿತ್ವ ಸೇರಿದಂತೆ ಹಲವು ವ್ಯವಸ್ಥೆ ಮಾಡಲಾಗಿದ್ದು, ಕೊವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ವಿದ್ಯಾರ್ಥಿಗಳಿಗೆ ಸ್ಯಾನಿಟೈಜರ್ ವ್ಯವಸ್ಥೆ ಇರುತ್ತದೆ. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರುವಂತೆ ಸೂಚಿಸಲಾಗಿದೆ.
ಮೊದಲ ದಿನ ಬೆಳಿಗ್ಗೆ 10.30ಕ್ಕೆ ಜೀವಶಾಸ್ತ್ರ ವಿಷಯ ಹಾಗೂ ಮಧ್ಯಾಹ್ನ 2.30ಕ್ಕೆ ಗಣಿತ ವಿಷಯಗಳ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದ ಸುತ್ತ ನಿಷೇತ ಸ್ಥಳವೆಂದು ಘೋಷಿಸಿ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಾಜಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..