ಬೆಂ.ಗ್ರಾ.ಜಿಲ್ಲೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೋವಿಡ್ ತಡೆಗಟ್ಟಲು ಸಂಕಲ್ಪ ಮಾಡಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಆಗಸ್ಟ್ 27 ರಂದು ಕೋವಿಡ್-19 ಲಸಿಕಾಕರಣ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಲಸಿಕೆ ಪಡೆಯುವ ಮೂಲಕ ಕೋವಿಡ್ ವಿರುದ್ಧ ಹೋರಾಡಲು ಸಹಕರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.
ರಾಜ್ಯ ಮಟ್ಟದಿಂದ ಹೆಚ್ಚಿನ ಲಸಿಕೆ ಲಭ್ಯವಾಗುತ್ತಿರುವ ಹಿನ್ನೆಲೆ, ಜಿಲ್ಲೆಯ ಎಲ್ಲಾ ಕೋವಿಡ್-19 ಲಸಿಕಾಕರಣ ಕೇಂದ್ರಗಳಲ್ಲಿ ಆಗಸ್ಟ್ 27ರಂದು ಸಕ್ರಿಯವಾಗಿ ಕಾರ್ಯನಿರ್ವಹಿಸುವ ಮೂಲಕ, ಪ್ರತಿ ತಾಲ್ಲೂಕಿಗೆ 7500 ಲಸಿಕೆಗಳನ್ನು ನೀಡಲು ಗುರಿ ನಿಗದಿಪಡಿಸಲಾಗಿದೆ.
ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯವಿರುವಷ್ಟ್ಟು ಲಸಿಕೆಯ ಲಭ್ಯವಿದ್ದು, ಜಿಲ್ಲೆಯ ಸಾರ್ವಜನಿಕರು ಲಸಿಕೆ ಪಡೆಯುವ ಮೂಲಕ ಕೋವಿಡ್-19 ಮೂರನೇ ಅಲೆ ಎದುರಾಗದಂತೆ ತಡೆಯಲು ಸಹಕಾರ ನೀಡಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..