ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹೊಸಕೋಟೆ ತಾಲ್ಲೂಕಿನಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನರ ಸಮಸ್ಯೆ ಹಾಗೂ ಅಗತ್ಯಗಳನ್ನು ಅರಿತು, ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಗೌರವಧನದ ಆಧಾರದಲ್ಲಿ ನೇಮಕ ಮಾಡಬೇಕಾಗಿದೆ.
ಹೊಸಕೋಟೆ ತಾಲ್ಲೂಕಿನ ಓರೋಹಳ್ಳಿ, ದೇವನಗೊಂದಿ ಹಾಗೂ ಕಂಬಳೀಪುರ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ನಡೆಯಲಿದ್ದು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸಲು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸವಿರುವ ಆಸಕ್ತ ವಿಕಲಚೇತನರು 2021ರ ಸೆಪ್ಟೆಂಬರ್ 15 ರೊಳಗೆ ಅರ್ಜಿ ಸಲ್ಲಿಸುವುದು.
ಗೌರವಧನ ಹುದ್ದೆಗೆ ಇರಬೇಕಾದ ಅರ್ಹತೆಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ: 03, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ: 080-29787442 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..