ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ: ಮತದಾರರಿಂದ ಹಣದ ಬೇಡಿಕೆ ಆರೋಪ…! / ಆತಂಕದಲ್ಲಿ ಅಭ್ಯರ್ಥಿಗಳು.

ದೊಡ್ಡಬಳ್ಳಾಪುರ: ಪ್ರತಿ ಚುನಾವಣೆಯಲ್ಲಿ ಸ್ಪರ್ಧಿಗಳು ಮತದಾರನ ಓಲೈಕೆ ಸುದ್ದಿ, ಚುನಾವಣಾ ಆಯೋಗದ ಕ್ರಮ, ಮತ್ತಿತರ ಸುದ್ದಿಗಳೆ ನಮಗೆ ಕಾಣಿಸುವುದು. ಆದರೆ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆಯಲ್ಲಿ ಹಣ ನೀಡಿದವರು ಮಾತ್ರ ಚುನಾಯಿತರಾಗುವುದು ಎಂದು ಬಹಿರಂಗವಾಗಿ ಮತದಾರರೇ ಅಭ್ಯರ್ಥಿಗಳನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆಂಬ ಆತಂಕಕಾರಿ ಆರೋಪ ಕೇಳಿ ಬಂದಿದೆ.

ಸೆ.3 ರಂದು ನಡೆಯಲಿರುವ ನಗರಸಭೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್-31, ಬಿಜೆಪಿ-30, ಜೆಡಿಎಸ್-28, ಸಿಪಿಐ(ಎಂ)-2, ಬಿಎಸ್‍ಪಿ-3 , ಕನ್ನಡ ಪಕ್ಷ-5, ಕೆ.ಆರ್.ಎಸ್-2, ಉತ್ತಮ ಪ್ರಜಾಕೀಯ ಪಕ್ಷ-1, ಎಸ್.ಡಿ.ಪಿ.ಐ-2, ಹಾಗೂ ಪಕ್ಷೇತರರು 15  ಸೇರಿ 119 ಮಂದಿ ಕಣದಲ್ಲಿದ್ದಾರೆ.

ಎರಡುವರೆ ವರ್ಷಗಳ ನಂತರ ಜನಪ್ರತಿನಿದಿಗಳ ಕೈಗೆ ಅಧಿಕಾರ ಸಿಗಲಿದೆ., ರಾಷ್ಟ್ರೀಯ ಪಕ್ಷಗಳ ವಿರುದ್ಧ ಜೆಡಿಎಸ್, ಸಿಪಿಐ, ಬಿಎಸ್‍ಪಿ, ಕನ್ನಡ ಪಕ್ಷ, ಕೆ.ಆರ್.ಎಸ್, ಉತ್ತಮ ಪ್ರಜಾಕೀಯ ಪಕ್ಷ, ಎಸ್.ಡಿ.ಪಿ.ಐ, ಹಾಗೂ ಪಕ್ಷೇತರರು ಸ್ಪರ್ಧೆಗಿಳಿದಿದ್ದು ಚುನಾವಣೆ ಕಾವು ತೀವ್ರವಾಗಿದೆ‌. 

ಪ್ರತೀ ಚುನಾವಣೆಯಲ್ಲಿ ಮತದಾರರ ಸೆಳೆಯಲು ಸ್ಪರ್ಧಿಗಳು ನಾನಾ ರೀತಿಯ ಕಾರ್ಯತಂತ್ರ ನಡೆಸುತ್ತಾರೆ. ಆದರೆ ಈ ಚುನಾವಣೆಯಲ್ಲಿ ಮತದಾರರೇ ಸ್ಪರ್ದಿಗಳು ಚುನಾಯಿತರಾಗಬೇಕಾದರೆ ಹಣ ವೆಚ್ಚ ಮಾಡಬೇಕು ಎಂದು ಹಲವು ವಾರ್ಡ್ ಗಳಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂಬ ಅಳಲು ಸ್ಪರ್ದಿಸಿರುವ ಅಭ್ಯರ್ಥಿಗಳದ್ದಾಗಿದೆ.

ಚುನಾವಣೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ಸಂಕಲ್ಪ, ಆದರೆ ಮತದಾನ ಮಾಡಲು ಹಣದ ಬೇಡಿಕೆ ಇಡುತ್ತಿರುವುದು ಇಡೀ ವ್ಯವಸ್ಥೆಗೆ ಆತಂಕ ಎದುರಾಗಿದೆ. ಚುನಾವಣೆ ಸಂದರ್ಭದಲ್ಲಿ ಮತದಾರನ ಸೆಳೆಯಲು ಅಭ್ಯರ್ಥಿಗಳು ವಿವಿಧ ಆಮಿಷ ಒಡ್ಡುವುದು ಕೇಳಿ ಬರುತ್ತವೆ. ಆದರೆ ಮತದಾರ ಹಣ ನೀಡಿದರೆ ಮಾತ್ರ ಮತ ನೀಡುತ್ತೇವೆ ಎನ್ನುವ ಮಟ್ಟಕ್ಕೆ ಇಳಿದಿರುವುದು ಅಭ್ಯರ್ಥಿಗಳನ್ನು ಆತಂಕಕ್ಕೆ ತಳ್ಳಿದೆ.

ಈ ಕುರಿತು ಹೆಸರೇಳಲು ಇಚ್ಚಿಸದ ಯುವ ಅಭ್ಯರ್ಥಿ ಹರಿತಲೇಖನಿಯೊಂದಿಗೆ ಮಾತನಾಡಿ, ಉತ್ತಮ ಕೆಲಸ ಮಾಡಬೇಕು, ನಗರವನ್ನು ಅಭಿವೃದ್ಧಿ ಮಾಡಬೇಕು ಎಂದು ಚುನಾವಣೆಗೆ ಸ್ಪರ್ಧಿಸಿದೆ. ಇಷ್ಟು ದಿನ ಅಧಿಕಾರಿಗಳು ಭ್ರಷ್ಟರು, ರಾಜಕಾರಣಿಗಳು ಭ್ರಷ್ಟರು ಎಂದು ಹೋರಾಟ ನಡೆಸುತ್ತಿದೆ ಆದರೆ ಮತದಾರನೆ ಭ್ರಷ್ಟನಾಗಿದ್ದಾನೆ ಎಂಬ ಅನುಮಾನ ಕಾಡುತ್ತಿದೆ. ಶೇ.75 ರಷ್ಟು ಜನ ಹಣ ನೀಡಿದರೆ ಮಾತ್ರ ಗೆಲ್ಲಲು ಸಾಧ್ಯ ಎಂದು ಬಹಿರಂಗವಾಗಿ ಹೇಳುತ್ತಿದ್ದು, ವ್ಯವಸ್ಥೆ ಹಾಳಾಗಿದೆಯಾ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಹರಿತಲೇಖನಿಗೆ ದೊರೆತಿರುವ ಮಾಹಿತಿ ಅನ್ವಯ ಈ ಚುನಾವಣೆಯಲ್ಲಿ ಗೆಲ್ಲಲು ಒಬ್ಬ ಅಭ್ಯರ್ಥಿ ಕನಿಷ್ಠ 25 ಲಕ್ಷ ಮೀಸಲಿಡಬೇಕು ಎನ್ನುವ ಸುದ್ದಿ ಹರಿದಾಡುತ್ತಿದೆ. ಮತ ಯಾಚನೆಗೆ ಓಡಾಡುವ ಪುರಯಷರಿಗೆ ಇಷ್ಟು, ಮಹಿಳೆಯರಿಗೆ ಇಷ್ಟು ಎಂದು ನೀಡಲೇ ಬೇಕಿದೆ. ಉಳಿದಂತೆ ಮದ್ಯದ ಅಮಲು ಪ್ರತಿ ನಿತ್ಯ ಏರಿಸಲೇ ಬೇಕಿದೆಯಂತೆ. ಅಲ್ಲದೆ ಒಂದು ಓಟಿಗೆ ಒಂದು ಸಾವಿರ ಎಂಬ ಅಘೋಷಿತ ವೆಚ್ಚಕ್ಕೆ ಗೆಲುವಿಗಾಗಿ ಪಣ ತೊಟ್ಟಿರುವ ಅಭ್ಯರ್ಥಿಗಳು ಸಿದ್ದರಾಗಿದ್ದಾರೆಂದು ಸುದ್ದಿ ಹರಿದಾಡುತ್ತಿತ್ತು, ಪ್ರತಿಷ್ಟಿತ ವಾರ್ಡ್ಗಳಲ್ಲಿ ಇದರ ವೆಚ್ಚ ಹೆಚ್ಚಾಗಲಿದೆ ಎನ್ನಲಾಗುತ್ತಿದೆ.

ಪಾರದರ್ಶಕ ಚುನಾವಣೆ ನಡೆಸಲು ಅಧಿಕಾರಿಗಳು ಹಲವು ಕ್ರಮಕೈಗೊಂಡಿದ್ದಾರಾದರೂ, ರಂಗೋಲಿ ಕೆಳಗೆ ಅಕ್ರಮ ನಡೆಸುವ ಜನರ ತಡೆಯುವುದು ಕಷ್ಟವಾಗಿದೆ. ಈ ನಿಟ್ಟಿನಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಮತದಾನದ ಪಾವಿತ್ರತೆಯನ್ನು ಅರಿವುಂಟು ಮಾಡಬೇಕೆಂದು ಪ್ರಜ್ಞಾವಂತರು ಒತ್ತಾಯಿಸಿದ್ದಾರೆ‌. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!