ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ರಾಣೇಬೆನ್ನೂರು ತಾಲೂಕಿನ ಜಲಜೀವನ ಮಿಷನ್ ಯೋಜನೆಯಡಿ ಕರೂರು, ಚಳಗೇರಿ, ಅರೆಮಲ್ಲಾಪುರ ಹಾಗೂ ಕವಲೆತ್ತು ಗ್ರಾಮಗಳ ಎಲ್ಲಾ ಮನೆಗಳಿಗೆ ಕಾರ್ಯಾತ್ಮಕ ನಲ್ಲಿ ನೀರು ಸಂಪರ್ಕ ಕಾಮಗಾರಿಗಳಿಗೆ ಭೂಮಿಪೂಜೆ ಕಾರ್ಯಕ್ರಮ ಆಗಸ್ಟ್ 28 ರಂದು ಮಧ್ಯಾಹ್ನ 1 ಗಂಟೆಗೆ ರಾಣೇಬೆನ್ನೂರು ಎ.ಪಿಎಂಸಿ ಸಮುದಾಯ ಭವನದಲ್ಲಿ ನಡೆಯಲಿದೆ.
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ನೆರವೇರಿಸಲಿದ್ದು, ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಕರ್ನಾಟಕ ವಿಧಾನ ಪರಿಷತ್ತ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ, ಕೃಷಿ ಸಚಿವ ಬಿ.ಸಿ.ಪಾಟೀಲ, ಶಾಸಕರು ಹಾಗೂ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷ ನೆಹರು ಓಲೇಕಾರ ಅವರ ಘನ ಉಪಸ್ಥಿತಿಯಲ್ಲಿ ಶಾಸಕ ಅರುಣಕುಮಾರ ಗುತ್ತೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಲೋಕಸಭಾ ಸದಸ್ಯ ಶಿವಕುಮಾರ ಚ.ಉದಾಸಿ, ವಿಧಾನ ಪರಿಷತ್ ಶಾಸಕರಾದ ಶ್ರೀನಿವಾಸ ಮಾನೆ, ಎಸ್.ವ್ಹಿ.ಸಂಕನೂರ, ಪ್ರದೀಪ್ ಶೆಟ್ಟರ, ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ವಿಧಾನ ಪರಿಷತ್ ಶಾಸಕ ಆರ್.ಶಂಕರ್, ಚಳಗೇರಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪ್ರಮೀಲಾ ಕರಿಯಲ್ಲಪ್ಪ ಬಸವಂತಣ್ಣನವರ, ಕರೂರು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನೀಲಮ್ಮ ಎಮ್.ಪೂಜಾರ, ಅರೆಮಲ್ಲಾಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿಂಗಪ್ಪ ಕನ್ನಪ್ಪ ವಗ್ಗಪ್ಪನವರ, ಕವಲೆತ್ತು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇಣುಕಾ ನಾಗರಾಜ ಶಿಳ್ಳಿಕ್ಯಾತರ ಅವರು ಪಾಲ್ಗೊಳ್ಳಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..