ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಮುಂದುವರೆದಿರುವ ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಪ್ರಸ್ತುತ ಘೋಷಣೆಯಾಗಿರುವ ದೊಡ್ಡಬಳ್ಳಾಪುರ ನಗರಸಭೆ ಸಾರ್ವತ್ರಿಕ ಚುನಾವಣೆಯ ಪ್ರಚಾರದ ವೇಳೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ಸೂಚಿಸಿದ್ದಾರೆ.
ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿದ ಅವರು, ಪ್ರಚಾರದ ವೇಳೆ ಅಭ್ಯರ್ಥಿಯೂ ಸೇರಿ ಗರಿಷ್ಠ ಐದು ಜನ ಬೆಂಬಲಿಗರೊಂದಿಗೆ ಮುಖಗವಸು (Face Mask) ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮನೆ ಮನೆಗೆ ಭೇಟಿ ನೀಡಿ, ಪ್ರಚಾರ ನಡೆಸಬಹುದಾಗಿದೆ.
ಪ್ರಚಾರಕ್ಕೆ ಆಟೋದಲ್ಲಿ ಮೈಕ್ ಬಳಸಿ ಪ್ರಚಾರ ಮಾಡಲು ನಿರ್ಬಂಧ ಇರುವುದಿಲ್ಲ. ಆದರೆ ಗುಂಪು ಗುಂಪಾಗಿ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ಪ್ರಚಾರದ ಸಂದರ್ಭದಲ್ಲಿ ಮುಖಗವಸು (Face Mask) ಅನ್ನು ಕಡ್ಡಾಯವಾಗಿ ಧರಿಸತಕ್ಕದ್ದು.
ಈ ಎಲ್ಲಾ ಸೂಚನೆಗಳನ್ನು ಹೊರತುಪಡಿಸಿ ನಿಯಮ ಮೀರಿದರೆ, ಕಾನೂನು ಕ್ರಮಕೈಗೊಳ್ಳಲಾಗುವುದೆಂದು ಶಿವರಾಜ್ ಅವರು ಎಚ್ಚರಿಕೆ ನೀಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..