ವಿಶಾಖಪಟ್ಟಣ: ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಆಂಧ್ರಪ್ರದೇಶದ ಕರಾವಳಿ ಭಾಗ, ಕೇರಳ, ತಮಿಳುನಾಡು ಹಾಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೇರಳದ ಆರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಹೆದ್ದಾರಿಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ.
ಅಸ್ಸಾಂನ ಹಲವು ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. 11 ಜಿಲ್ಲೆಗಳಲ್ಲಿ ಕನಿಷ್ಠ 1.33 ಲಕ್ಷ ಮಂದಿಯ ಜೀವನ ಅಸ್ತವ್ಯಸ್ತವಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……