ಜಾತಿ ಗಣತಿ ವರದಿಯನ್ನು ಒಪ್ಪದ ಬಿಜೆಪಿ ನಾಯಕರು, ಕುಂಟು ನೆಪಗಳನ್ನು ಹೇಳುತ್ತಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಜಾತಿ ಗಣತಿ ವರದಿಯನ್ನು ಒಪ್ಪಿಕೊಳ್ಳುವುದಕ್ಕೆ ತಯಾರಿಲ್ಲದ ಬಿಜೆಪಿ ನಾಯಕರು, ಅದು ಸೋರಿಕೆ ಯಾಗಿದೆ, ವೈಜ್ಞಾನಿಕವಾಗಿಲ್ಲ ಎಂಬ ಕುಂಟು ನೆಪಗಳನ್ನು ಹೇಳುತ್ತಿದ್ದಾರೆ.

ಸೋರಿಕೆ ಬಗ್ಗೆ ಖಚಿತ ಮಾಹಿತಿ ಮುಖ್ಯಮಂತ್ರಿಗಳ ಬಳಿ ಇದ್ದರೆ ಅದರ ಬಗ್ಗೆ ತನಿಖೆ ನಡೆಸಲಿ ಎಂದು‌ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ‌.

ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಸೋರಿಕೆ ಆಗಿದೆಯೆನ್ನಲಾದ ಜಾತಿಗಣತಿ ವರದಿಯ ಅಂಶಗಳೇ ಮೂಲ ವರದಿಯಲ್ಲಿ ಇವೆ ಎನ್ನುವುದನ್ನು ಬಿಜೆಪಿ ಅಷ್ಟೊಂದು ವಿಶ್ವಾಸದಿಂದ ಹೇಗೆ ಹೇಳಲು ಸಾಧ್ಯ? ಸರ್ಕಾರದ ಬಳಿ ಇರಬೇಕಾದ ಮೂಲ ವರದಿ ಬಿಜೆಪಿಯ ರಾಜ್ಯ ಕಚೇರಿಯಲ್ಲಿದೆಯೇ ಮುಖ್ಯಮಂತ್ರಿಗಳ ಕಚೇರಿಯಿಂದ ಅದು ಸೋರಿಕೆಯಾಗಿದೆಯೇ?

ಜಾತಿಗಣತಿ ವರದಿಯನ್ನು ನಮ್ಮ ಸರ್ಕಾರದ ಅವಧಿಯಲ್ಲಿಯೇ ಪೂರ್ಣಗೊಳಿಸಿ ಸ್ವೀಕರಿಸಬೇಕೆಂಬುದು ನನ್ನ ಉದ್ದೇಶವಾಗಿತ್ತು. ಅಂಕಿಅಂಶಗಳ ಮಾಹಿತಿ ಸಂಗ್ರಹವಾಗಿದ್ದರೂ ವಿಶ್ಲೇಷಣೆಯ ಕೆಲಸ ಪೂರ್ಣಗೊಂಡಿರದ ಕಾರಣ  ಸಾಧ್ಯವಾಗಿರಲಿಲ್ಲ. 

ಜಾತಿ ಗಣತಿ ವರದಿಯನ್ನು ನಮ್ಮ ಪಕ್ಷದ ನಾಯಕರು ವಿರೋಧಿಸಿದ್ದರು ಎನ್ನುವುದು ಕಪೋಲ ಕಲ್ಪಿತ ಆರೋಪ. ಯಾರು? ಯಾವಾಗ? ವಿರೋಧಿಸಿದ್ದರು ಎನ್ನುವುದನ್ನು ಬಿಜೆಪಿ ನಾಯಕರು ಬಹಿರಂಗ ಪಡಿಸಬೇಕು.

ಜಾತಿ ಗಣತಿ ವರದಿ ಸೋರಿಕೆಯಾಗಿದ್ದರೂ ಅದರ ಪಾವಿತ್ರ್ಯವೇನು ಕಳೆದುಹೋಗುವುದಿಲ್ಲ. ಸೋರಿಕೆಯಿಂದಾಗಿ ಅಪರಾಧಿಗಳು ಓಡಿಹೋಗಲು ಅದೇನು ಅಪರಾಧದ ತನಿಖಾ ವರದಿಯೇ? ಅದೊಂದು ಸಮೀಕ್ಷಾ ವರದಿ.ಪರಿಶೀಲನೆ ನಡೆಯಬೇಕಾಗಿರುವುದು ಸಮೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ. ಅದರ ಬಗ್ಗೆ ಚರ್ಚೆ ನಡೆಯಲಿ.

ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರವನ್ನು ಮರಳಿ ರಾಜ್ಯ ಸರ್ಕಾರಕ್ಕೆ ನೀಡುವ ಸಂವಿಧಾನದ 127ನೇ ತಿದ್ದುಪಡಿ ಮಸೂದೆಯನ್ನು ಸಂಸತ್ ನಲ್ಲಿ ನಮ್ಮ ಪಕ್ಷದ ಸದಸ್ಯರು ಬೆಂಬಲಿಸಿರುವುದು ನಿಜ. ಆ ತಿದ್ದುಪಡಿ ಕಾಂಗ್ರೆಸ್ ಪಕ್ಷದ ಬೇಡಿಕೆಯ ಒತ್ತಡದಿಂದಾಗಿಯೇ ಮಂಡಿಸಲಾಗಿತ್ತು.

ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ನೆಪದಲ್ಲಿ ಸಂವಿಧಾನಕ್ಕೆ 123ನೇ ತಿದ್ದುಪಡಿ ಮಾಡಿ ಹಿಂದುಳಿದ ಜಾತಿಗಳನ್ನು ಗುರುತಿಸುವ ರಾಜ್ಯದ ಅಧಿಕಾರವನ್ನು ಕಿತ್ತುಕೊಳ್ಳುವ ಕೇಂದ್ರದ ಬಿಜೆಪಿ ಸರ್ಕಾರದ ಹುನ್ನಾರವನ್ನು 2017ರಲ್ಲಿಯೇ ನಮ್ಮ ಪಕ್ಷ ವಿರೋಧಿಸಿತ್ತು.

ಸಂವಿಧಾನದ 123ನೇ ತಿದ್ದುಪಡಿ ಮೂಲಕ ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾವನ್ನು ರಾಜ್ಯಗಳಿಂದ ಕಿತ್ತುಕೊಂಡದ್ದನ್ನು ಕೇಂದ್ರ ಬಿಜೆಪಿ ಸರ್ಕಾರ 127ನೇ ತಿದ್ದುಪಡಿ ಮೂಲ ಮರಳಿ ನೀಡಿದೆ. 

ಇದೇನು ಹಿಂದುಳಿದ ಜಾತಿಗಳಿಗೆ ಮಾಡಿರುವ ಉಪಕಾರ ಅಲ್ಲ. ಮಾಡಿರುವ ತಪ್ಪನ್ನು ಒಪ್ಪಿ ಸರಿಪಡಿಸಿದೆಯಷ್ಟೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ನಿರುದ್ಯೋಗಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾ‌ನ

ನಿರುದ್ಯೋಗಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾ‌ನ

ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ,

[ccc_my_favorite_select_button post_id="119740"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!