ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ: ಹಿಂದಿನ ಮತದಾರರ ಪಟ್ಟಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ಸಜ್ಜು

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಗೆ ಬರುವ 11ನೇ ವಾರ್ಡ್‌ ನಲ್ಲಿ ಅವೈಜ್ಞಾನಿಕ ಮತದಾರರ ಪಟ್ಟಿಯನ್ನು ಮಾಡಿರುವ ಪರಿಣಾಮ 1,544 ಜನ ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದು, ಈ ಹಿಂದಿನ ಮತದಾರರ ಪಟ್ಟಿಯನ್ನೇ ನಗರಸಭೆ ಚುನಾವಣೆಯಲ್ಲೂ ಜಾರಿ ಮಾಡಬೇಕು ಎಂದು ಒತ್ತಾಯಿಸಿ ಆ.30ರಂದು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಮತದಾರರಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು ಎಂದು ಕರೇನಹಳ್ಳಿ ನಾಗರಿಕ ಹಿತರಕ್ಷಣಾ ಸಮಿತಿ ಮುಖಂಡರು ತಿಳಿಸಿದ್ದಾರೆ.

ಕರೇನಹಳ್ಳಿಯಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿಯ ಮುಖಂಡರಾದ ದ್ರುವಕುಮಾರ್, ಪಿ.ಎ.ವೆಂಕಟೇಶ್, 11ನೇ ವಾರ್ಡ್ ಕರೇನಹಳ್ಳಿ-1 ಗಡಿ ವಿಂಗಡನೆ ಅವೈಜ್ಞಾನಿಕವಾಗಿದ್ದು, ನಗರಸಭೆಗೆ ಸೇರಬೇಕಿದ್ದ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಿದ್ದು, ಇಲ್ಲಿ 1010 ಮತದಾರರಿದ್ದಾರೆ. 

ಈ ಹಿಂದೆ ವಾರ್ಡ್‍ನಲ್ಲಿ 2544 ಮತದಾರರಿದ್ದರು. ಅಧಿಕಾರಿಗಳು ಯಾವುದೇ ಪರಿಶೀಲನೆ ನಡೆಸದೇ ಬೇಕಾಬಿಟ್ಟಿ ಮಾಡಿದ ಅವೈಜ್ಞಾನಿಕ ಗಡಿ ವಿಂಗಡನೆಯಿಂದಾಗಿ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಿದ್ದು, 1,544 ಜನ ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ.

ಒಂದೊಂದು ಬಾರಿ ಒಂದೊಂದು ರೀತಿ ಮತದಾರರ ಪಟ್ಟಿ ಮಾಡಿ ಪ್ರತಿ ಚುನಾವಣೆಯಲ್ಲಿಯೂ ಇಲ್ಲಿ ಮತದಾರರ ಪಟ್ಟಿಯದ್ದೇ ಗೊಂದಲವಾಗುತ್ತಿದೆ. ಈ ಕುರಿತು ಕರೇನಹಳ್ಳಿ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. 

ಮತದಾರರ ಪಟ್ಟಿ ಪರಿಷ್ಕರಣೆ ಮಾಡುವ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ಸೂಚನೆಯ ಪ್ರತಿಯನ್ನು ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ನೀಡುವ ಮೂಲಕ ನಮ್ಮ ಮನವಿ ಸಲ್ಲಿಸಲಾಗಿದೆ. ಪಕ್ಷಾತೀತವಾಗಿ ಇಲ್ಲಿನ ಎಲ್ಲಾ ರಾಜಕೀಯ ಮುಖಂಡರು ಈ ಬಗ್ಗೆ ಒತ್ತಾಯಿಸುತ್ತಿದ್ದಾರೆ. ಆದರೂ ಮತದಾರರು ಮತದಾನದಿಂದ ವಂಚಿತರಾಗಿರುವ ಬಗ್ಗೆ ಅಕಾರಿಗಳು ಕ್ರಮ ಕೈಗೊಂಡಿಲ್ಲ. ಮತದಾರರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿ ಆ.30ರಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟಿಸಲಾಗುವುದು ಎಂದರು.

ಒಂದು ಕುಟಂಬದಲ್ಲಿ ಗಂಡ -‌ಹೆಂಡತಿ, ಅಪ್ಪ – ಮಗ ಮೊದಲಾಗಿ ಗ್ರಾಮ ಪಂಚಾಯಿತಿಯಲ್ಲಿ ಒಬ್ಬರದು, ನಗರಸಭೆಗೆ ಒಬ್ಬರದು ಮತಗಳು ಸೇರಿಕೊಂಡಿವೆ. 

ದರ್ಗಾಗೋಗಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿಯೂ ನಮ್ಮನ್ನು ಪರಿಗಣಿಸಿಲ್ಲ. ನಗರಸಭೆಯಲ್ಲಿಯೂ ನಮ್ಮ ಮತವಿಲ್ಲ. ಈಗ ಮತದಾನದಿಂದ ವಂಚಿತರನ್ನಾಗಿ ಮಾಡುವವರು ಮುಂದೆ ನಮ್ಮ ಆಧಾರ್, ಪಡಿತರ ಚೀಟಿಗಳನ್ನು ತೆಗೆಯುತ್ತಾರೆ ಎನ್ನುವ ಆತಂಕ ಮೂಡಿದೆ. ಮತದಾರರ ಪಟ್ಟಿ ಪರಿಷ್ಕರಣೆ ಆಗುವವರಿಗೆ ಚುನಾವಣೆ ತಡೆ ಹಿಡಿಯಬೇಕು. ಈ ಕೂಡಲೇ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಿ, ನಮಗೆ ಮತದಾನದ ಹಕ್ಕು ನೀಡಬೇಕೆಂದು ನೆರೆದಿದ್ದ ಮತದಾರರು ಆಗ್ರಹಿಸಿದರು.

ಸಭೆಯಲ್ಲಿ ಕರೇನಹಳ್ಳಿ ನಾಗರಿಕ ಹಿತರಕ್ಷಣಾ ಸಮಿತಿಯ ಮಲ್ಲೇಶ್,ಲಕ್ಷ್ಮೀನಾರಾಯಣ್, ಕಮಲೂರು ಸೀನಪ್ಪ, ಅಶೋಕ್ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ರೈತನಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ರೈತನಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ಕೆರೆಯ ಮಣ್ಣು ಸಾಗಾಟ ಸಂಬಂಧ ರೈತರೊಬ್ಬರಿಗೆ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ (BJP MLA ) ಬಿ.ಪಿ.ಹರೀಶ್ (B.P. Harish) ವಿರುದ್ಧ ದಾವಣಗೆರೆಯ ಡಿಸಿಆರ್‌ಇ ಪೊಲೀಸ್ ಠಾಣೆಯಲ್ಲಿ

[ccc_my_favorite_select_button post_id="118506"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!