ದೊಡ್ಡಬಳ್ಳಾಪುರ: ತಾಲೂಕಿನ ವಿವಿಧೆಡೆಗಳಲ್ಲಿ ಭಾನುವಾರ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿಯಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಕೋವಿಡ್-19 ಹಿನ್ನಲೆಯಲ್ಲಿ ಹಾಗೂ ನಗರಸಭೆ ಚುನಾವಣೆಯ ನೀತಿ ಸಂಹಿತೆ ಕಾರಣದಿಂದಾಗಿ ಯಾವುದೇ ಜನಪ್ರತಿನಿಧಿಗಳಿಲ್ಲದೇ ಸರಳವಾಗಿ ಆಚರಿಸಲಾಯಿತು.
ಶ್ರೀ ಕೃಷ್ಣ ಭಾವಚಿತ್ರಕ್ಕೆ ಪುಷ್ಮನಮನ ಸಲ್ಲಿಸಿ ಮಾತನಾಡಿದ ತಹಸೀಲ್ದಾರ್ ಟಿ.ಎಸ್.ಶಿವರಾಜ್, ಶ್ರೀ ಕೃಷ್ಣ ಗುರು – ಹಿರಿಯರಲ್ಲಿ ಭಕ್ತಿ, ಬಾತೃತ್ವ, ಸ್ನೇಹ,ನಂಬಿಕೆ, ಸಂಬಂಧಗಳ ಮಹತ್ವ ಪ್ರಪಂಚಕ್ಕೆ ಸಾರಿದ ಸರ್ವಕಾಲಿಕ ಶ್ರೇಷ್ಠ ವ್ಯಕ್ತಿ. ದುಷ್ಟ ಶಿಕ್ಷಣ ಶಿಕ್ಷ ರಕ್ಷಣ ಸರ್ವಕಾಲಕ್ಕೂ ಪ್ರಸ್ತುತ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಕಚೇರಿ ಸಿಬ್ಬಂದಿ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……