ರೈತರು ಮತ್ತು ಬಡವರಿಗೆ ಸ್ಪಂದನವೇ ಸರ್ಕಾರದ ಗುರಿ / ಉದ್ಯೋಗ ಸೃಜನೆಗೆ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ: ರೈತರು, ಬಡ ಜನರಿಗೆ  ಸ್ಪಂದಿಸುವುದೇ ಸರ್ಕಾರದ ಧ್ಯೇಯವಾಗಿದೆ. ಹಾವೇರಿ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. ಶಿಗ್ಗಾಂವಿಯಲ್ಲಿ ಮೆಗಾ ಜವಳಿ ಪಾರ್ಕ್, ಹಾವೇರಿಯಲ್ಲಿ ಒಂದು ಸಾವಿರ ಎಕರೆಯ ಕೈಗಾರಿಕಾ ಟೌನ್‍ಶಿಪ್ ಸ್ಥಾಪಿಸಿ ಉದ್ಯೋಗ ಸೃಜನೆಗೆ ಒತ್ತು ನೀಡಲಾಗುವುದು.ಶಹರದ ಕೊಳಚೆ ಪ್ರದೇಶಗಳಲ್ಲಿ ಕೊವಿಡ್ ಲಸಿಕಾಕರಣಕ್ಕೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜಂಗಮನಕೊಪ್ಪದ ಕೆಎಂಎಫ್ ಘಟಕದಲ್ಲಿ ನೂತನ ಡೇರಿ ಹಾಗೂ ಯುಹೆಚ್‍ಟಿ ಹಾಲು  ಪ್ಯಾಕಿಂಗ್ ಘಟಕದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದೂವರೆ ಗಂಟೆಗಳ ಅವಧಿಯಲ್ಲಿ ರೈತರ ಮಕ್ಕಳಿಗೆ ಶಿಷ್ಯವೇತನ ಘೋಷಿಸಿದೆ. ಈ ಮಹತ್ವಾಕಾಂಕ್ಷೆಯ ಈ ಯೋಜನೆಗೆ ಸೆ.5 ರಂದು ಕೇಂದ್ರ ಕೃಷಿ ಸಚಿವರು ಚಾಲನೆ ನೀಡುವರು ಇದಕ್ಕಾಗಿ ಒಂದು ಸಾವಿರ ಕೋಟಿ ರೂ.ಮೀಸಲಿಡಲಾಗಿದೆ. 20  ಲಕ್ಷ ಮಕ್ಕಳಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಶೇ.90 ರಿಂದ 95 ರಷ್ಟು ಜನರ ಹಂಚಿನ ಮನೆಗಳಿದ್ದರೆ, ಮನೆಯಲ್ಲಿ ಯಾರಾದರೊಬ್ಬವರು ವಿದ್ಯಾವಂತರಿದ್ದು ಕೃಷಿಯ ಜೊತೆಗೆ ಪೂರಕ ಉದ್ಯೋಗ,ನೌಕರಿಗಳನ್ನು ಮಾಡುವವರ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿರುವುದನ್ನು ಗಮನಿಸಿ ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಈ ಯೋಜನೆಯನ್ನು ದೇಶದಲ್ಲೇ ಪ್ರಥಮವಾಗಿ ಜಾರಿಗೊಳಿಸಲಾಗಿದೆ ಎಂದರು.

ಹೊಸ ಶಿಕ್ಷಣ ನೀತಿ: ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ತರಲು ಶಿಕ್ಷಣ, ನೈತಿಕ ಮೌಲ್ಯಗಳು ಹಾಗೂ ಕೌಶಲ್ಯಕ್ಕೆ ಆದ್ಯತೆ ನೀಡಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲಿಯೇ ಮೊಟ್ಟಮೊದಲು ಜಾರಿಗೊಳಿಸಿದ ಶ್ರೇಯಸ್ಸು ಕರ್ನಾಟಕ ರಾಜ್ಯದ್ದಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ಸಲುವಾಗಿ ದೆಹಲಿಯಲ್ಲಿ ಉನ್ನತಮಟ್ಟದ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು.

ಆಗಸ್ಟ್ 30 ರಂದು  ತಜ್ಞರ ಸಭೆ ನಡೆಸಿ ಶಾಲೆಗಳ ಪುನರಾರಂಭ ಹಾಗೂ ಕೋವಿಡ್ ಸಂಭಾವ್ಯ ಮೂರನೇ ಅಲೆ ತಡೆಯ ಕ್ರಮಗಳ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು.

ಹಾವೇರಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಉದ್ಯೋಗ ಸೃಜನೆಯ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ದೆಹಲಿಯ ಮೆಗಾ ಟೆಕ್ಸ್‍ಟೈಲ್ ಪಾರ್ಕಿಗೆ ಭೇಟಿ ನೀಡಲಾಗಿದೆ. ಅದೇ ಮಾದರಿಯಲ್ಲಿ ಉದ್ಯೋಗ ಸೃಜನೆಯ ಕ್ರಮವಾಗಿ ಶಿಗ್ಗಾಂವಿ, ಸವಣೂರ, ಹಿರೇಕೆರೂರು, ಬ್ಯಾಡಗಿಯಲ್ಲಿ ಜವಳಿ ಪಾರ್ಕ್ ಸ್ಥಾಪನೆ, ಹಾವೇರಿಯಲ್ಲಿ  ಈಗಾಗಲೇ ಯೋಜಿಸಲಾದ ಸುಮಾರು ಒಂದು ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣಕ್ಕೆ ವೇಗ ನೀಡಲಾಗುವುದು ಎಂದರು.

ರಾಜ್ಯವನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲು ಚಿಂತನೆ ನಡೆದಿದೆ. ಎಲ್ಲಾ ಹಳ್ಳಿಗಳಿಗೂ ಉತ್ತಮ ಗುಣಮಟ್ಟದ ಇಂಟರ್‍ನೆಟ್,ಬ್ರಾಡ್‍ಬ್ಯಾಂಡ್ ಸೌಲಭ್ಯ ಒದಗಿಸಿದರೆ ಆಡಳಿತದಲ್ಲಿ ಚುರುಕುತನ, ಸರಕಾರದ ಸೌಲಭ್ಯಗಳ ವಿತರಣೆ, ರೈತರ ಚಟುವಟಿಕೆಗಳಿಗೂ ಅನುಕೂಲವಾಗಲಿದೆ ಎಂದರು.

ಕೋವಿಡ್ ನಿರ್ವಹಣೆಯಲ್ಲಿ ಬಿಗಿಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮುಂದಿನ ತಿಂಗಳು ರಾಜ್ಯಕ್ಕೆ ಸುಮಾರು ಒಂದು ಕೋಟಿ ಡೋಸ್ ಲಸಿಕೆ ನಿರೀಕ್ಷಿಸಲಾಗುತ್ತಿದೆ.ಈಗಾಗಲೇ 80 ಲಕ್ಷ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಅಕ್ಟೋಬರ್ ಹೊತ್ತಿಗೆ ರಾಜ್ಯದ ಪ್ರತಿಯೊಬ್ಬರಿಗೂ ಮೊದಲ ಡೋಸ್ ಲಸಿಕೆ ಪೂರ್ಣಗೊಳಿಸುವ ಗುರಿ ಇದೆ. ಕೋವಿಡ್ ಸಂಭಾವ್ಯ ಮೂರನೇ ಅಲೆ ತಡೆಗೆ ಲಸಿಕಾಕರಣವೇ ಮುಖ್ಯವಾಗಿದೆ. ನಗರದ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಲಸಿಕೆ ನೀಡಲು ವಿಶೇಷ ಕಾರ್ಯಾಚರಣೆ ಹಾಕಿಕೊಳ್ಳಲಾಗುವುದು ಎಂದರು.

ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಜಾರಿಗೆ ಬಂದ ಪ್ರತಿ ಕ್ಷೇತ್ರದ ಕೆರೆಗಳನ್ನು ತುಂಬಿಸುವ ಯೋಜನೆಯು ಅನುಷ್ಠಾನಗೊಳ್ಳುತ್ತಿದೆ.ಹಿರೇಕೆರೂರು ತಾಲೂಕಿನಲ್ಲಿ ಈಗಾಗಲೇ ಕೆರೆ ತುಂಬಿಸಿ ಲೋಕಾರ್ಪಣೆ ಮಾಡಲಾಗಿದೆ.ಬ್ಯಾಡಗಿ,ಹಾನಗಲ್ ತಾಲೂಕುಗಳಲ್ಲಿ ತಲಾ ಎರಡು ಕೆರೆಗಳನ್ನು ತುಂಬಿಸುವ ಕಾರ್ಯ ಮುಂದಿನ 6-7 ತಿಂಗಳಲ್ಲಿ ಪೂರ್ಣವಾಗಲಿದೆ.ಶಿಗ್ಗಾಂವ ಸವಣೂರು ತಾಲೂಕುಗಳಲ್ಲಿ ಬರುವ ಅಕ್ಟೋಬರ್‍ನಲ್ಲಿ ಲೋಕಾರ್ಪಣೆ ಮಾಡಲಾಗುವುದು. ತುಂಗಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಯಲ್ಲಿ ಬರುವ ಎಲ್ಲಾ ಅಚ್ಚುಕಟ್ಟು ಪ್ರದೇಶದ ಕಾಮಗಾರಿಗಳನ್ನು ಮುಂದಿನ ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆಯಡಿ ಹಾವೇರಿ ಜಿಲ್ಲೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ಹಾಗೂ ಮಾವು ಆಯ್ಕೆ ಮಾಡಲಾಗಿದೆ. ಜಿಲ್ಲೆಯ ಮೆಣಸಿನಕಾಯಿ ಹಾಗೂ ಮಾವು   ಬೆಳೆಯ ಉತ್ಪಾದನೆ ಹೆಚ್ಚಳ ಹಾಗೂ ಸಂಸ್ಕರಣ ಚಟುವಟಿಕೆಗಳಿಗೆ ನಬಾರ್ಡ್‍ನಿಂದ ಹಣಕಾಸಿನ ನೆರವು ನೀಡಲಾಗುವುದು ಎಂದರು.

ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಮಗಾರಿ ನಡೆದಿದ್ದು ಮುಂಬರುವ 18 ತಿಂಗಳಲ್ಲಿ ಆಡಳಿತ ಮತ್ತು ಬೋಧನಾ ವಿಭಾಗ ಪೂರ್ಣಗೊಳಿಸಿ ಎಂಬಿಬಿಎಸ್ ಪ್ರವೇಶ ಪ್ರಾರಂಭಿಸಲಾಗುವುದು. ಜಂಗಮನಕೊಪ್ಪದ ಮೆಗಾ ಡೇರಿಯೂ ಕೂಡ ಒಂದೂವರೆ ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಜನತೆಯ ಆಶೋತ್ತರಗಳ ಈಡೇರಿಕೆಗೆ ಸರ್ಕಾರ ಪ್ರಾಮಾಣಿಕವಾಗಿ ಸ್ಪಂದಿಸಲಿದೆ. ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದ್ದು ಶೀಘ್ರವೇ ಆಯುಕ್ತರನ್ನು ನೇಮಿಸಿ, ಅನುದಾನ ಒದಗಿಸಲಾಗುವುದು ಎಂದರು.

ಕೃಷಿ ಸಚಿವ ಬಿ.ಸಿ.ಪಾಟೀಲ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ(ಬೈರತಿ), ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ, ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಶಾಸಕ ನೆಹರು ಓಲೇಕಾರ, ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ಶಂಕರ ಮುಗದ  ಹಾಗೂ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್‌ ಶಾಸಕರು ಕೂಡ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. D.K.Shivakumar

[ccc_my_favorite_select_button post_id="110593"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ

ಬಾಶೆಟ್ಟಿಹಳ್ಳಿ ಬಳಿ ಸುಮಾರು 35-40 ವರ್ಷ ವಯಸ್ಸಿನ ಗಂಡಸಿನ ಅಪರಿಚಿತ ಮೃತ ದೇಹ (Unknown body) ಪತ್ತೆ ಪ್ರಕರಣದ ಕುರಿತಂತೆ, ಮೃತನ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="110603"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!