ಹೊಸಕೋಟೆ ಪಟ್ಟಣಕ್ಕೆ ಮೆಟ್ರೊ ರೈಲು ಸಂಚಾರ ವಿಸ್ತರಿಸಲು ಮನವಿ ಸಲ್ಲಿಸಿದ ಸಚಿವ ಎನ್.ನಾಗರಾಜು (ಎಂಟಿಬಿ)

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣಕ್ಕೆ ಮೆಟ್ರೊ ರೈಲು ಸಂಚಾರ ಸೇವೆವನ್ನು ವಿಸ್ತರಿಸಲು, ಪೌರಾಡಳಿತ, ಸಣ್ಣ ಕೈಗಾರಿಕೆ  ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಎನ್. ನಾಗರಾಜು (ಎಂಟಿಬಿ)

ಮನವಿ ಮಾಡಿದ್ದಾರೆ.ಬೆಂಗಳೂರಿನಲ್ಲಿಂದು ನಡೆದ ಮೈಸೂರು-ಕೆಂಗೇರಿ ವಿಸ್ತರಿತ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾದ ಹರ್ ದೀಪ್ ಸಿಂಗ್ ಪುರಿ ಅವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರ ಮೂಲಕ ಸಚಿವ ಎನ್. ನಾಗರಾಜು(ಎಂಟಿಬಿ) ಮನವಿ ಸಲ್ಲಿಸಿದರು.

ಹೊಸಕೋಟೆ ಪಟ್ಟಣ ಬೆಂಗಳೂರು ಹೊರವಲಯದಲ್ಲಿ ಅಂದರೆ ಬಿಬಿಎಂಪಿ ವ್ಯಾಪ್ತಿಯಿಂದ 10 ಕಿಮೀ ದೂರದಲ್ಲಿದೆ ಅಷ್ಟೇ. ಭಾರತದ ಸಿಲಿಕಾನ್ ವ್ಯಾಲಿ ವೈಟ್ ಫೀಲ್ಡ್ ಐಟಿ ಪಾರ್ಕ್ ಗೆ  ಹೊಸಕೋಟೆ ಪಟ್ಟಣ ತೀರ ಹತ್ತಿರದಲ್ಲಿದೆ.ವೈಟ್ ಫೀಲ್ಡ್ ಸುತ್ತ-ಮುತ್ತ ನೂರಾರು ಐಟಿ ಕಂಪನಿಗಳು ಬೀಡು ಬಿಟ್ಟಿವೆ. ವಾಣಿಜ್ಯ ಕಟ್ಟಡಗಳು, ಬೃಹತ್ ಕಟ್ಟಡಗಳು ಇದ್ದು ಲಕ್ಷಾಂತರ ಅಪಾರ್ಟ್‌ಮೆಂಟ್ ಗಳು ಇವೆ. ಪರಿಣಾಮ ಹೊಸಕೋಟೆ ಪಟ್ಟಣದ ಸುತ್ತ- ಮುತ್ತ ತೀವ್ರ ಸಂಚಾರದ ಒತ್ತಡ ನಿರ್ಮಾಣವಾಗಿದೆ.

ಅಲ್ಲದೆ,ಹೊಸಕೋಟೆ ಪಟ್ಟಣವು ಮಾಲೂರು ಕೈಗಾರಿಕಾ ಪ್ರದೇಶ,ನಂದಗುಡಿ ಕೈಗಾರಿಕಾ ಪ್ರದೇಶ ಮತ್ತು ಕೋಲಾರ ಕೈಗಾರಿಕಾ ಪ್ರದೇಶಗಳ ಹೆಬ್ಬಾಗಿಲು.ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬದಲಿ ರಸ್ತೆಯು ಹೊಸಕೋಟೆ ತಾಲ್ಲೂಕಿನ ಮೂಲಕ ಹಾದು ಹೋಗುತ್ತದೆ.

ಹೊಸಕೋಟೆ ಪಟ್ಟಣದಲ್ಲಿನ ಜೀವನ ಮಟ್ಟ ಬೆಂಗಳೂರು ನಗರಕ್ಕಿಂತ ಕಡಿಮೆ ಇರುವುದರಿಂದ  ಬೆಂಗಳೂರಿನ ಉದ್ಯೋಗಿಗಳು ಬೆಂಗಳೂರು ಹೊರವಲಯ ಹಾಗೂ ಹೊಸಕೋಟೆ ಪಟ್ಟಣದಲ್ಲಿ ಭಾರೀ ಸಂಖ್ಯೆಯಲ್ಲಿ ವಾಸವಾಗಿದ್ದು, ಅವರು ಬೆಂಗಳೂರಿಗೆ ತೆರಳಲು ಮೆಟ್ರೊ ರೈಲು ಸಂಚಾರ ಕಲ್ಪಿಸಿದರೆ ರಸ್ತೆ ಮಾರ್ಗದ ಮೇಲೆ ಇರುವ ಅತೀ ದೊಡ್ಡ ಒತ್ತಡವನ್ನು ತಪ್ಪಿಸಬಹುದು. ಹಾಗಾಗಿ, ಮೆಟ್ರೊ ರೈಲು ಮಾರ್ಗವನ್ನು ಹೊಸಕೋಟೆ ಪಟ್ಟಣದವರೆಗೆ ವಿಸ್ತರಿಸುವಂತೆ ಮನವಿ ಮಾಡುತ್ತೇನೆ ಎಂದು ಸಚಿವರಾದ ಎನ್. ನಾಗರಾಜು (ಎಂಟಿಬಿ) ಅವರು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!