ಬೆಂಗಳೂರು: ವಕೀಲರ ಸಂಘದ ಆಶ್ರಯದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ವಕೀಲರು ಹಾಗೂ ಕೋರ್ಟ್ ಸಿಬ್ಬಂದಿಗಳ ಮಕ್ಕಳ ಪಾಲನೆಯ ಕೇಂದ್ರ ಆರಂಭಿಸಲಾಗಿದೆ.
ಮಕ್ಕಳ ಪಾಲನೆ ಕೇಂದ್ರವನ್ನು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕ, ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಅವರು ಉದ್ಘಾಟಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ ಅವರು ವಹಿಸಿದ್ದರು, ಸಮಾರಂಭದಲ್ಲಿ ಸತ್ರ ನ್ಯಾಯಾಧೀಶರಾದ ಅನಿಲ್ ಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..