ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣಕ್ಕೆ ಮೆಟ್ರೊ ರೈಲು ಸಂಚಾರ ಸೇವೆವನ್ನು ವಿಸ್ತರಿಸಲು, ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಎನ್. ನಾಗರಾಜು (ಎಂಟಿಬಿ)
ಮನವಿ ಮಾಡಿದ್ದಾರೆ.ಬೆಂಗಳೂರಿನಲ್ಲಿಂದು ನಡೆದ ಮೈಸೂರು-ಕೆಂಗೇರಿ ವಿಸ್ತರಿತ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾದ ಹರ್ ದೀಪ್ ಸಿಂಗ್ ಪುರಿ ಅವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರ ಮೂಲಕ ಸಚಿವ ಎನ್. ನಾಗರಾಜು(ಎಂಟಿಬಿ) ಮನವಿ ಸಲ್ಲಿಸಿದರು.
ಹೊಸಕೋಟೆ ಪಟ್ಟಣ ಬೆಂಗಳೂರು ಹೊರವಲಯದಲ್ಲಿ ಅಂದರೆ ಬಿಬಿಎಂಪಿ ವ್ಯಾಪ್ತಿಯಿಂದ 10 ಕಿಮೀ ದೂರದಲ್ಲಿದೆ ಅಷ್ಟೇ. ಭಾರತದ ಸಿಲಿಕಾನ್ ವ್ಯಾಲಿ ವೈಟ್ ಫೀಲ್ಡ್ ಐಟಿ ಪಾರ್ಕ್ ಗೆ ಹೊಸಕೋಟೆ ಪಟ್ಟಣ ತೀರ ಹತ್ತಿರದಲ್ಲಿದೆ.ವೈಟ್ ಫೀಲ್ಡ್ ಸುತ್ತ-ಮುತ್ತ ನೂರಾರು ಐಟಿ ಕಂಪನಿಗಳು ಬೀಡು ಬಿಟ್ಟಿವೆ. ವಾಣಿಜ್ಯ ಕಟ್ಟಡಗಳು, ಬೃಹತ್ ಕಟ್ಟಡಗಳು ಇದ್ದು ಲಕ್ಷಾಂತರ ಅಪಾರ್ಟ್‌ಮೆಂಟ್ ಗಳು ಇವೆ. ಪರಿಣಾಮ ಹೊಸಕೋಟೆ ಪಟ್ಟಣದ ಸುತ್ತ- ಮುತ್ತ ತೀವ್ರ ಸಂಚಾರದ ಒತ್ತಡ ನಿರ್ಮಾಣವಾಗಿದೆ.
ಅಲ್ಲದೆ,ಹೊಸಕೋಟೆ ಪಟ್ಟಣವು ಮಾಲೂರು ಕೈಗಾರಿಕಾ ಪ್ರದೇಶ,ನಂದಗುಡಿ ಕೈಗಾರಿಕಾ ಪ್ರದೇಶ ಮತ್ತು ಕೋಲಾರ ಕೈಗಾರಿಕಾ ಪ್ರದೇಶಗಳ ಹೆಬ್ಬಾಗಿಲು.ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬದಲಿ ರಸ್ತೆಯು ಹೊಸಕೋಟೆ ತಾಲ್ಲೂಕಿನ ಮೂಲಕ ಹಾದು ಹೋಗುತ್ತದೆ.
ಹೊಸಕೋಟೆ ಪಟ್ಟಣದಲ್ಲಿನ ಜೀವನ ಮಟ್ಟ ಬೆಂಗಳೂರು ನಗರಕ್ಕಿಂತ ಕಡಿಮೆ ಇರುವುದರಿಂದ ಬೆಂಗಳೂರಿನ ಉದ್ಯೋಗಿಗಳು ಬೆಂಗಳೂರು ಹೊರವಲಯ ಹಾಗೂ ಹೊಸಕೋಟೆ ಪಟ್ಟಣದಲ್ಲಿ ಭಾರೀ ಸಂಖ್ಯೆಯಲ್ಲಿ ವಾಸವಾಗಿದ್ದು, ಅವರು ಬೆಂಗಳೂರಿಗೆ ತೆರಳಲು ಮೆಟ್ರೊ ರೈಲು ಸಂಚಾರ ಕಲ್ಪಿಸಿದರೆ ರಸ್ತೆ ಮಾರ್ಗದ ಮೇಲೆ ಇರುವ ಅತೀ ದೊಡ್ಡ ಒತ್ತಡವನ್ನು ತಪ್ಪಿಸಬಹುದು. ಹಾಗಾಗಿ, ಮೆಟ್ರೊ ರೈಲು ಮಾರ್ಗವನ್ನು ಹೊಸಕೋಟೆ ಪಟ್ಟಣದವರೆಗೆ ವಿಸ್ತರಿಸುವಂತೆ ಮನವಿ ಮಾಡುತ್ತೇನೆ ಎಂದು ಸಚಿವರಾದ ಎನ್. ನಾಗರಾಜು (ಎಂಟಿಬಿ) ಅವರು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..