ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರ ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಜಕ್ಕಲಮಡುಗು ಜಲಾಶಯ ಸೇರಿದಂತೆ, ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯ ಹಾಗೂ ಮಂಚೇನಹಳ್ಳಿ ಬಳಿಯ ದಂಡಿಗಾನಹಳ್ಳಿ ಕೆರೆಯು ಮಳೆ ನೀರಿನಿಂದ ತುಂಬಿ ಕೋಡಿ ಹರಿದಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಬಾಗೀನ ಅರ್ಪಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ಅಧ್ಯಕ್ಷರಾದ ಕೆ.ವಿ.ನಾಗರಾಜು, ನಗರಸಭಾ ಅಧ್ಯಕ್ಷ ಆನಂದರೆಡ್ಡಿ ಬಾಬು, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..