ದೊಡ್ಡಬಳ್ಳಾಪುರ: ಮೇಜರ್ ಧ್ಯಾನ್ ಚಂದ್ ಅವರು ಕ್ರೀಡಾಪಟುಗಳಿಗೆ ಸ್ಪೂರ್ತಿ. ರಾತ್ರಿ ಚಂದ್ರನ ಬೆಳಕಿನಲ್ಲಿಯೂ ಕ್ರೀಡಾಭ್ಯಾಸ ಮಾಡುತ್ತಿದ್ದ ಕಾರಣ ಧ್ಯಾನ್ ಸಿಂಗ್ ಅವರು ಮುಂದೆ ಧ್ಯಾನ್ ಚಂದ್ ಎಂದೇ ಪ್ರಸಿದ್ಧಿಯಾದರು. ಅವರಂತೆ ಪ್ರತಿಯೊಬ್ಬ ಕ್ರೀಡಾಪಟುಗಳು ಶ್ರದ್ಧೆಯಿಂದ ಕ್ರೀಡಾಭ್ಯಾಸ ಮಾಡಬೇಕು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕಿ ಡಾ.ಬಿ.ಕೆ.ಅಶ್ವಿನಿ ಸಲಹೆ ನೀಡಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಆವರಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.
ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಸತತ ಮೂರು ಒಲಿಂಪಿಕ್ಸ್ ನಲ್ಲಿ ಪದಕ ಗಳಿಸಿದ ಭಾರತದ ಹಾಕಿ ತಂಡದ ಭಾಗವಾಗಿದ್ದರು. ಅವರ ಹೆಸರಿನಲ್ಲಿ ಪ್ರತಿ ವರ್ಷ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ಖೇಲ್ ರತ್ನ ಪ್ರಶಸ್ತಿಯನ್ನು ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಕರಣ ಮಾಡಿ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಿಂದ ಪ್ರಶಸ್ತಿ ನೀಡುವ ಮೂಲಕ ಧ್ಯಾನ್ ಚಂದ್ ಅವರ ಸಾಧನೆಗೆ ಹೆಚ್ಚಿನ ಗೌರವ ನೀಡಿದೆ ಅಶ್ವಿನಿ ತಿಳಿಸಿದರು.
ಈ ವೇಳೆ ಮೇಜರ್ ಧ್ಯಾನ್ ಚಂದ್ ಅವರ ಜೀವನ ಚರಿತ್ರೆಯನ್ನು ಮಕ್ಕಳಿಗೆ ತಿಳಿಸಿ, ಈ ಕುರಿತಾಗಿ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಭಾರಿ ಉಪಪ್ರಾಂಶುಪಾಲರಾದ ಕೆ.ವಿ.ವೆಂಕಟರೆಡ್ಡಿ, ಶಿಕ್ಷಕರಾದ ಮಂಜುನಾಥ ಜಟ್ಟಯ್ಯ, ಇಂದಿರಾ, ದೈಹಿಕ ಶಿಕ್ಷಣ ಶಿಕ್ಷಕ ಸಿದ್ದಲಿಂಗಯ್ಯ ಹಾಗೂ ಶಾಲೆಯ ಸಿಬ್ಬಂದಿ ಹಾಜರಾಗಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..