ನೆಲಮಂಗಲ: ಹೆದ್ದಾರಿ ಬಳಿ ನಡೆದ ಪ್ರತ್ಯೇಕ ಎರಡು ಘಟನೆಗಳಲ್ಲಿ ಇಂಜಿನ್ ತಾಂತ್ರಿಕ ದೋಷದಿಂದ ಇಂಡಿಕಾ ಕಾರು ಹೊತ್ತಿ ಉರಿದ್ದಾರೆ. ಹೆದ್ದಾರಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಬೈಕ್ ಬೆಂಕಿಗಾಹುತಿಯಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಸವಾರರು ಪಾರಾಗಿದ್ದಾರೆ.
ನೆಲಮಂಗಲದ ತೊಣಚಿನಕುಪ್ಪೆ ಬಳಿ ಘಟನೆ ನಡೆದಿದ್ದು, ಬೆಂಗಳೂರಿನ ನಾಗರಭಾವಿಯಿಂದ ತುಮಕೂರಿಗೆ ತೆರಳುತ್ತಿದ್ದ ಇಂಡಿಕಾ ಕಾರಿನ ಇಂಜಿನ್ ನಲ್ಲಿ ತಾಂತ್ರಿಕ ದೋಷದ ಕಾರಣದಿಂದ ಬೆಂಕಿ ಕಾಣಿಸಿಕೊಂಡು ಕಾರು ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದಿದೆ. ಇನ್ನೂ ಕಾರಿನಲ್ಲಿದ್ದ ಚಿರಾಗ್, ನಾಗರಾಜು, ನಾಗೇಶ್ ಮತ್ತೋರ್ವ ಮಹಿಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಕ್ಷಣ ಸುದ್ದಿ ತಿಳಿದ ನೆಲಮಂಗಲ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯ ಜ್ವಾಲೆ ಹೆಚ್ಚಾಗಿ ರಸ್ತೆಯಲ್ಲಿದ್ದ ಅಕ್ಕಪಕ್ಕದ ವಾಹನಗಳಿಗೆ ಬೆಂಕಿ ತಾಗುವ ಮುನ್ನ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.
ರಾಷ್ಟ್ರೀಯ ಹೆದ್ದಾರಿಯಲ್ಲಿವಾಹನದಲ್ಲಿ ಬೆಂಕಿಯಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು ನಂತರ ನೆಲಮಂಗಲ ಸಂಚಾರಿ ಪೋಲೀಸರು ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ನೆಲಮಂಗಲ ಕುಣಿಗಲ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಗೆ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಡಿಕ್ಕಿಯಾಗಿ ಬೆಂಕಿ ಹತ್ತಿಕೊಂಡ ಘಟನೆ ನೆಲಮಂಗಲ ಹೊರವಲಯದ ಯಂಟಗಾನಹಳ್ಳಿ ಬಳಿ ನಡೆದಿದೆ.
ಶಿವಮೊಗ್ಗ ಮೂಲದ ಗಗನ್ ಎಂಬುವರಿಗೆ ಸೇರಿದ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ ಇದಾಗಿದ್ದು ವಾರದ ಹಿಂದೆಯಷ್ಟೇ ಖರೀದಿ ಮಾಡಿದ್ದರು ಎನ್ನಲಾಗಿದೆ.
ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿಕೊಂಡು, ಶಿವಮೊಗ್ಗಯಿಂದ ಬೆಂಗಳೂರಿಗೆ ವಾಪಸ್ಸಾಗುವ ವೇಳೆ ಅವಘಡ ಸಂಭವಿಸಿದ್ದು, ಸದ್ಯ ಬೈಕ್ ಸವಾರನಿಗೆ ಯಾವುದೇ ಪ್ರಾಣಪಾಯವಾಗಿಲ್ಲ.
ಈ ಪ್ರತ್ಯೇಕ ಎರಡೂ ಪ್ರಕರಣಗಳು ನೆಲಮಂಗಲ ಸಂಚಾರಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿರುತ್ತದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..