ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನದಲ್ಲಿ ತೆರಳಿತ್ತಿದ್ದ ಮಹಿಳೆಯ ಮೇಲೆ ಲಾರಿ ಹರಿದ ಪರಿಣಾಮ, ಮಹಿಳೆ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಮಾಕಳಿ ರೈಲ್ವೇ ನಿಲ್ದಾಣದ ಸಮೀಪದಲ್ಲಿರುವ, ಬೆಂಗಳೂರು – ಹಿಂದೂಪುರ ರಸ್ತೆಯ ತಿರುವಿನಲ್ಲಿ ಸಂಭವಿಸಿದೆ.
ಮೃತರನ್ನು ಹಿಂದೂಪುರ ಮೂಲದ ನಾಗಮಣಿ (28 ವರ್ಷ) ಎಂದು ಗುರುತಿಸಲಾಗಿದೆ. ಸ್ವಗ್ರಾಮದಿಂದ ಸಹೋದರನ ಮಿತ್ರನೋಂದಿಗೆ ದೊಡ್ಡಬಳ್ಳಾಪುರ ಸಮೀಪದ ಕಾರ್ಖಾನೆಗೆ ಕೆಲಸಕ್ಕೆ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ರಸ್ತೆಯಲ್ಲಿ ಉಬ್ಬಿನಲ್ಲಿ ದ್ವಿಚಕ್ರವಾಹನ ವಾಹನ ಎಗರಿದ್ದು, ಹಿಂಬದಿಯಲ್ಲಿದ್ದ ನಾಗಮಣಿ ರಸ್ತೆಗೆ ಬಿದ್ದ ಸಂದರ್ಭದಲ್ಲಿ, ಹಿಂದಿನಿಂದ ಬರುತ್ತಿದ್ದ ಲಾರಿಗೆ ಸಿಲುಕಿ ಸಾವನಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹರಿತಲೇಖನಿಗೆ ತಿಳಿಸಿದ್ದಾರೆ.
ಅದೃಷ್ಟವಶಾತ್ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಗೆ ಯಾವುದೇ ಹಾನಿಯಾಗಿಲ್ಲ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..