ಬೆಂ.ಗ್ರಾ.ಜಿಲ್ಲೆ: ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜು (ಎಂಟಿಬಿ) ಇಂದು ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವೊಲ್ವೊ ಸಂಸ್ಥೆಯ ಸಹಯೋಗದೊಂದಿಗೆ ನಾರಾಯಣ ಹೆಲ್ತ್ ಸಂಚಾರಿ ಕೋವಿಡ್ ಲಸಿಕಾ ವಾಹನ (Vaccination on wheels)ಕ್ಕೆ ಚಾಲನೆ ನೀಡಿದರು.
ವೊಲ್ವೊ ಸಂಸ್ಥೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನಾಲ್ಕು ತಾಲ್ಲೂಕುಗಳಿಗೆ ತಲಾ ಐದು ಸಾವಿರ ಕೋವಿಡ್-19 ಲಸಿಕೆ ವಿತರಣೆ ಮಾಡಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವ ಎನ್.ನಾಗರಾಜು (ಎಂಟಿಬಿ) ಅವರು ತಿಳಿಸಿದರು.
ಈ ವೇಳೆ, ವೊಲ್ವೊ ಸಂಸ್ಥೆಯ ಹಿರಿಯ ಅಧಿಕಾರಿ ಪಿ.ವಿ.ರಾವ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..