ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿ ಬೆಟ್ಟದ ತಪ್ಪಲಿನಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅರ್ಕಾವತಿ ನದಿ ಪಾತ್ರದಲ್ಲಿನ ಕೆರೆಗಳು ಕೋಡಿ ಬಿದ್ದಿವೆ.
ನಂದಿಬೆಟ್ಟದಲ್ಲಿ ಹುಟ್ಟುವ ಅರ್ಕಾವತಿ ನದಿ ಪಶ್ಚಿಮಾಭಿಮುಖವಾಗಿ ಭೂ ಸ್ಪರ್ಷಮಾಡುವ ಕೂಸಮ್ಮನ್ನ ಕೆರೆ, ಸೀಗೇಹಳ್ಳಿ ಕೆರೆ, ಸೇರಿದಂತೆ ಹಲವಾರು ಬೃಹತ್ ಕುಂಟೆಗಳು ತುಂಬಿ ಹರಿಯುತ್ತಿವೆ.
ಚನ್ನರಾಯಸ್ವಾಮಿ ಬೆಟ್ಟದಲ್ಲಿನ ಪುಟ್ಟ ಜಲಪಾತಗಳಂತು ಧುಮ್ಮಿಕ್ಕಿ ಹರಿಯುತ್ತಿವೆ. ಅರ್ಕಾವತಿ ನದಿ ಪಾತ್ರದಲ್ಲಿನ ದೊಡ್ಡ ಕೆರೆಗಳ ಪೈಕಿ ಒಂದಾಗಿರುವ ಮೇಳೆಕೋಟೆ ಕೆರೆಯನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಎರಡು ವರ್ಷಗಳ ಹಿಂದೆ ಹೂಳೆತ್ತಿ ಅಭಿವೃದ್ಧಿ ಪಡಿಸಲಾಗಿತ್ತು. ಮಳೆಯಿಂದಾಗಿ ಕೆರೆಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಕೊಡಿ ಬೀಳಲು ಒಂದು ಅಡಿಗಳಷ್ಟು ಮಾತ್ರ ಬಾಕಿ ಉಳಿದಿದೆ.
ಎರಡು ವರ್ಷಗಳ ಹಿಂದೆ ಅಂದಿನ ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ಅವರ ನೇತೃತ್ವದಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಕೆರೆಯ ಹೂಳು ತೆಗೆದು ಅಭಿವೃದ್ಧಿಪಡಿಸಿದ ನಂತರ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕೆರೆಯಲ್ಲಿ ನೀರು ಸಂಗ್ರಹವಾಗಿರುವುದು ಸಂತಸ ಮೂಡಿಸಿದೆ. ಕೆರೆಯ ಹೂಳು ತೆಗೆಯಲು ಸಹಕಾರ ನೀಡಿದ ಎಲ್ಲರು ಕೆರೆಯಲ್ಲಿನ ನೀರು ಸಂಗ್ರಹ ನೋಡಿ ಖುಷಿಪಡುತ್ತಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..