ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ: ಮತದಾನ ಪ್ರಾರಂಭದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ / ಮತಗಟ್ಟೆ ಕೇಂದ್ರ ಪರಿಶೀಲಿಸಿದ ತಹಶೀಲ್ದಾರ್ ಶಿವರಾಜ್, ಡಿವೈಎಸ್ಪಿ ಟಿ.ರಂಗಪ್ಪ

ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರ ನಗರಸಭೆಯ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಚುನಾವಣಾ ಪ್ರಚಾರವು ಮತದಾನ ಪ್ರಾರಂಭವಾಗುವ 48 ಗಂಟೆಗಳ ಮುಂಚೆ ಅಂದರೆ ಸೆಪ್ಟೆಂಬರ್ 1 ರಂದು ಬೆಳಿಗ್ಗೆ 7.00 ಗಂಟೆ ನಂತರ ರಾಜಕೀಯ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಪರವಾಗಿ ಇತರರು ಯಾವುದೇ ವಿಧದಲ್ಲಿ ಬಹಿರಂಗ ಚುನಾವಣಾ ಪ್ರಚಾರವನ್ನು ನಡೆಸುವುದು ನಿಷೇಧವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್ 1ರ ಬೆಳಿಗ್ಗೆ 7.00 ಗಂಟೆಯ ನಂತರ ಮತದಾರರಲ್ಲದ ಬೆಂಬಲಿಗರು ‌/  ರಾಜಕೀಯ ಪಕ್ಷದ ಪದಾಧಿಕಾರಿಗಳು‌/ ಮುಖಂಡರುಗಳು‌ / ಪಕ್ಷದ ಕಾರ್ಯಕರ್ತರು / ಮೆರವಣಿಗೆ ಕಾರ್ಯ ನಿರ್ವಹಿಸುವವರು / ಪ್ರಚಾರ ಕಾರ್ಯ ನಿರ್ವಹಿಸುವವರು ಮತ್ತಿತರರು ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ತಮ್ಮ ವಾಸ್ತವ್ಯ ಮುಂದುವರಿಸಿದಲ್ಲಿ ಚುನಾವಣೆಯ ಮುಕ್ತ ಮತ್ತು ನಿಷ್ಪಕ್ಷ ವಾತಾವರಣಕ್ಕೆ ಧಕ್ಕೆಯುಂಟಾಗುವ ಸಂಭವವಿರುವುದರಿಂದ, ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಯ ವಾರ್ಡಿನ ಮತದಾರರಲ್ಲದ ವ್ಯಕ್ತಿಗಳು ಆ ವ್ಯಾಪ್ತಿಯಿಂದ ಹೊರಗೆ ಹೋಗಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು, ಇಲ್ಲದಿದ್ದಲ್ಲಿ ಹೊರಗೆ ಕಳುಹಿಸುವ ಬಗ್ಗೆ ಅಗತ್ಯ ಕ್ರಮ ಜರುಗಿಸುವುದು.

ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಯ ವಾರ್ಡ್ ಗಳ ವ್ಯಾಪ್ತಿಯಲ್ಲಿರುವ ಕಲ್ಯಾಣ ಮಂಟಪ, ಸಮುದಾಯ ಭವನ, ಇತರ ಸ್ಥಳಗಳಲ್ಲಿ ಆ ನಗರ ಸ್ಥಳೀಯ ಸಂಸ್ಥೆ ವಾರ್ಡಿನ ವ್ಯಾಪ್ತಿಗೆ ಒಳಪಡದ ಮೇಲೆ ತಿಳಿಸಿದಂತಹ ವ್ಯಕ್ತಿಗಳು ಇದ್ದಾರೆಯೇ ಎಂಬ ಬಗ್ಗೆ ತಪಾಸಣೆ ಮಾಡಲಾಗುವುದು.

ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆ ವಾರ್ಡಿನ ವ್ಯಾಪ್ತಿಯಲ್ಲಿರುವ ಪ್ರವಾಸಿಗರ ವಸತಿ ಗೃಹಗಳಲ್ಲಿ ಮತ್ತು ಪ್ರವಾಸ ಮಂದಿರದಲ್ಲಿ ಮೇಲೆ ತಿಳಿಸಿದಂತಹ ವ್ಯಕ್ತಿಗಳು ಇದ್ದಾರೆಯೇ ಎಂಬ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸಲಾಗುವುದು ಹಾಗೂ ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಯ ವಾರ್ಡ್ ಗಳ ವ್ಯಾಪ್ತಿಯಲ್ಲಿ ಅನುಮಾನಸ್ಪದ ವಾಹನಗಳು ಹಾಗೂ ಜನರ ಸಂಚಾರದ ಮೇಲೆ ನಿಗಾವಹಿಸುವ ಮೂಲಕ ಯಾವುದೇ ರೀತಿಯಲ್ಲಿ ಚುನಾವಣೆ ನೀತಿ ಸಂಹಿತೆಯ ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.3ರಂದು ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್, ಡಿವೈಎಸ್ಪಿ ಟಿ.ರಂಗಪ್ಪ ಹಾಗೂ ಸಹಾಯ ಶಿರಸ್ತೆಧಾರ್ ಕಿರಣ್ ಕುಮಾರ್ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿನ ಮತಗಟ್ಟೆಯನ್ನು ಪರಿಶೀಲನೆ ನಡೆಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]