ದೊಡ್ಡಬಳ್ಳಾಪುರ: ಸೆಪ್ಟೆಂಬರ್ 3ರಂದು ನಡೆಯಲಿರುವ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ, ಖಾಸಗಿ ಉದ್ದಿಮ, ಖಾಸಗಿ ಕಂಪನಿ ಇತ್ಯಾದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸೆ.3ರಂದು ವೇತನ ಸಹಿತ ರಜೆ ನೀಡಿ ರಾಜ್ಯ ಚುನಾವಣೆ ಆಯೋಗದ ಅಧೀನ ಕಾರ್ಯದರ್ಶಿ ಅವರು ಆದೇಶ ಹೊರಡಿಸಿದ್ದಾರೆಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ನಗರಸಭೆ ವ್ಯಾಪ್ತಿಯವರು ಬೆರೆಡೆ ತೆರಳಿ ಉದ್ಯೋಗ ನಡೆಸುತ್ತಿರುವುದರಿಂದ ಮತದಾನ ನಡೆಸಲು ಅನಾನುಕೂಲವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಈ ಕ್ರಮ ಕೈಗೊಂಡಿದೆ.
ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಸ್‌ಮೆಂಟ್‌ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಸೆ.3 ರಂದು ಕರ್ನಾಟಕ ಪೌರಸಭೆ (ಕೌನ್ಸಿಲರ್ ಚುನಾವಣೆ) ನಿಯಮಗಳು ಹಾಗೂ ಇತರೆ ಕಾನೂನುಗಳಡಿಯಲ್ಲಿ ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..