ನಿವೃತ್ತ ಅಧಿಕಾರಿಗಳನ್ನುಹೊರಗುತ್ತಿಗೆ ಆಧಾರದ ಮೇಲೆ ಪುನಃ ನೇಮಕ ಮಾಡುವುದಕ್ಕೆ ವಿರೋಧ / ಸಚಿವಾಲಯ ಬಂದ್ ಮಾಡುವ ಎಚ್ಚರಿಕೆ…!

ಬೆಂಗಳೂರು: ಆಡಳಿತದಲ್ಲಿ ಸುಧಾರಣೆ ತರುತ್ತೇವೆ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುತ್ತೇವೆ ಎನ್ನುವ ಸರ್ಕಾರ ಮೊದಲು ಸಚಿವಾಲಯದ ನೌಕರರಿಗೆ ನ್ಯಾಯ ಒದಗಿಸಲಿ, ನಿವೃತ್ತರಾದವರನ್ನು ಪುನಃ ಅದೇ ಜಾಗಕ್ಕೆ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸುವುದನ್ನು ಬಿಡಲಿ ಎಂದು ಕರ್ನಾಟಕ ರಾಜ್ಯ ಸಚಿವಾಲಯದ ನೌಕರರ ಸಂಘ ಆಗ್ರಹಿಸಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಾಗೂ ಸಚಿವಾಲಯದ ನೌಕರರ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸದೇ ಹೋದಲ್ಲಿ ಸಚಿವಾಲಯವನ್ನು ಬಂದ್ ಮಾಡುವ ಎಚ್ಚರಿಕೆಯನ್ನೂ ಸಂಘ ನೀಡಿದೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಗುರುಸ್ವಾಮಿ ಮಾತನಾಡಿ, ಸರ್ಕಾರ ಆಡಳಿತ ಸುಧಾರಣೆಯ ನೆಪದಲ್ಲಿ ಸಚಿವಾಲಯದಲ್ಲಿ ಕಿರಿಯ ಸಹಾಯಕರ ಹುದ್ದೆಗಳನ್ನು ಕಡಿತಗೊಳಿಸಲೆತ್ನಿಸಿ ಅನ್ಯಾಯ ಮಾಡುತ್ತಿದೆ. ಈಗಾಗಲೇ ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸದೆಯೇ ಸಚಿವಾಲಯದ ನೌಕರರು ತಹಶೀಲ್ದಾರರಾಗುವ ಸೇವೆಯನ್ನು ತಪ್ಪಿಸಿದೆ. ಕೆಲವು ಸಚಿವರು ಹಾಗೂ ಕೆಎಎಸ್ ಅಧಿಕಾರಿಗಳು ತಮ್ಮ ಆಪ್ತರನ್ನು ಹೊರಗುತ್ತಿಗೆ ಮೇಲೆ ನೇಮಿಸಿಕೊಳ್ಳುವ ಮೂಲಕ ಸಚಿವಾಲಯದಲ್ಲಿ ಕೆಲವರು ಸರ್ಕಾರಿ ನೌಕರರ ಮೇಲೆ ದಬ್ಬಾಳಿಕೆ ಸರ್ವಾಧಿಕಾರ ಧೋರಣೆ ತಾಳುತ್ತಿದ್ದಾರೆ.

ಸಚಿವಾಲಯದಲ್ಲಿ ನಿವೃತ್ತರಾದವರನ್ನೇ ಮತ್ತೆ ಪುನಃ ಹೊರಗುತ್ತಿಗೆ ಮೇಲೆ ನೇಮಕ ಮಾಡಿಕೊಳ್ಳುವ ಮೂಲಕ ಬಹುತೇಕರಿಗೆ ಸರ್ಕಾರಿ ನೌಕರಿ ಸಿಗುವ ಅವಕಾಶವನ್ನು ಕಸಿದುಕೊಳ್ಳುತ್ತಿದ್ದಾರೆ.ಅನಾವಶ್ಯಕ ವೆಚ್ಚಕ್ಕೆ ಕಡಿವಾಣ ಹಾಕುತ್ತೇವೆ ಎನ್ನುವ ಸರ್ಕಾರ ಮೊದಲು ನಿವೃತ್ತರಾದವರನ್ನು ಪುನಃ ನೇಮಿಸಿಕೊಳ್ಳುವುದನ್ನು ಬಿಡಲಿ. ಅದರ ಬದಲಿಗೆ ಒಂದಿಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಕೊಡಲಿ ಎಂದರು.

ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ಮಾತನಾಡಿ, ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಬೇಕು.ಆಡಳಿತ ಸುಧಾರಣೆ ಹೆಸರಿನಲ್ಲಿ ಸಚಿವಾಲಯದ ಯಾವುದೇ ಇಲಾಖೆ, ಹುದ್ದೆಗಳಿಗೆ ಕಡಿತ ಹಾಕಬಾರದು. ತಾಂತ್ರಿಕವಾಗಿ ಸಮಸ್ಯೆ ಪರಿಹರಿಸಿ ನೈಜತೆಯನ್ನು ಅರಿತು ಆಡಳಿತಾತ್ಮಕ ಸುಧಾರಣೆ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲಿ. ಸಚಿವಾಲಯದ ವೃಂದ ಮತ್ತು ನೇಮಕಾತಿ ನಿಯಮಗಳನ್ನುಉಲ್ಲಂಘಿಸಿ ಸಚಿವಾಲಯದ ಇತರೆ ಇಲಾಖೆಗಳ ನ್ ಕೇಡರ್ ಹುದ್ದೆಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಗಮನಕ್ಕೆತಾರದೇ ನೇಮಕ ಮಾಡಕೊಳ್ಳುವುದರ ಜೊತೆಗೆ ನೇರವಾಗಿ ಆರ್ಥಿಕ ಇಲಾಖೆಯಿಂದ ಒಪ್ಪಿಗೆಯನ್ನೂ ಸಹ ಪಡೆಯುತ್ತಿರುವುದು ಕಾನೂನು ಬಾಹಿರ ಎಂದು ಖಂಡಿಸಿದರು.

ಕರ್ನಾಟಕ ಸರ್ಕಾರದ ಸಚಿವಾಲಯದ ಸುಮಾರು 34 ಇಲಾಖೆಗಳು ಕೇಂದ್ರೀಕೃತ ವ್ಯವಸ್ಥೆಯಡಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಆದರೂ ಕೆಲವು ಇಲಾಖೆಯ ವಿಭಾಗಗಳನ್ನು ಸಚಿವಾಲಯದ ಸುತ್ತಲಿನ ವಾತಾವರಣದಿಂದ ಬಹುದೂರ ಕೊಂಡೊಯ್ಯುವ ಆದೇಶಗಳನ್ನು ಹೊರಡಿಸಿ ಹೊರಗಿನ ಕ್ಷೇತ್ರ ಇಲಾಖೆಗಳಿಗೆ ಹಾಗೂ ತಾತ್ಕಾಲಿಕ ಆಯೋಗಗಳಿಗೆ ಸಚಿವಾಲಯದ ಮತ್ತು ಕಟ್ಟಡಗಳಲ್ಲಿ ಅವಕಾಶ ಒದಗಿಸುವುದರಿಂದ ಸಚಿವಾಲಯವು ಒಂದೇ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಲು ತೊಡಕುಂಟಾಗುತ್ತಿದೆ. ಹೀಗಾಗಿ ಸಚಿವಾಲಯದ ಎಲ್ಲಾ ಇಲಾಖೆಗಳನ್ನು ಒಂದೆಡೆ ತರಬೇಕೆಂದು ಸಂಘ ಆಗ್ರಹಿಸಿದೆ.

ವಿವಿಧ ಬೇಡಿಕೆಗಳಿಗಾಗಿ ಹಾಗೂ ಸರ್ಕಾರವನ್ನು ಎಚ್ಚರಿಸಲು ಆಚರಿಸಲು ಸೆ.2 ರಂದು ಬಹುಮಹಡಿಗಳ ಕಟ್ಟಡದ ಎದುರಿಗೆ ಸಾಂಕೇತಿಕ ಧರಣಿ ಹಮ್ಮಿಕೊಂಡಿದ್ದು, ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸಿ ನ್ಯಾಯ  ಒದಗಿಸದೇ ಹೋದಲ್ಲಿ ಸಚಿವಾಲಯವನ್ನು ಮುಚ್ಚಬೇಕಾಗುತ್ತದೆ ಎಂದು ಸಚಿವಾಲಯ ನೌಕರರ ಸಂಘ ಎಚ್ಚರಿಸಿದೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಬಿ.ಆರ್.ಕುಮಾರಸ್ವಾಮಿ, ಹರ್ಷಾ, ಮಂಜುಳ, ಮಾರುತಿ, ವಿದ್ಯಾಶ್ರೀ, ಕೆ.ಟಿ.ಜಗದೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Wakf Bill) ಅಂಗಿಕಾರವಾಗಿದ್ದು ಇದು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ Harithalekhani

[ccc_my_favorite_select_button post_id="105525"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿರುವ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನ (KGB) ಕಳವು Harithalekhani

[ccc_my_favorite_select_button post_id="105553"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!