ಬೆಂ.ಗ್ರಾ.ಜಿಲ್ಲಾ ಗೋಶಾಲೆ ಸ್ಥಾಪನೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್

ಬೆಂ.ಗ್ರಾ.ಜಿಲ್ಲೆ: ಪ್ರತಿ ಜಿಲ್ಲೆಯಲ್ಲಿ ಸರ್ಕಾರದಿಂದ ನೂತನವಾಗಿ ಗೋಶಾಲೆ ಸ್ಥಾಪಿಸಲು ನಿರ್ಧರಿಸಿರುವುದರಿಂದ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಗೋಶಾಲೆ ಸ್ಥಾಪನೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ನಡೆದ ನೂತನವಾಗಿ ಗೋಶಾಲೆ ಸ್ಥಾಪಿಸುವ ಕುರಿತ ರೂಪುರೇಷೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಹೊಸ ಗೋಶಾಲೆಯನ್ನು ಸ್ಥಾಪಿಸಲು ಅಥವಾ ಈಗಾಗಲೇ ಅಸ್ತಿತ್ವದಲ್ಲಿದ್ದು, ಟ್ರಸ್ಟ್ ಮೂಲಕ ನಡೆಸುತ್ತಿರುವ ಗೋಶಾಲೆಗಳನ್ನು ವಿಸ್ತರಿಸಲು ಕ್ರಮ ಕೈಗೊಳ್ಳಬೇಕು ಎಂದರು. 

ಜಿಲ್ಲೆಯಲ್ಲಿ 1,80,000 ಜಾನುವಾರುಗಳಿದ್ದು, ಗೋಶಾಲೆಗಳು ಸರ್ಕಾರದ ಮಾರ್ಗಸೂಚಿ ಅನ್ವಯ ಗರಿಷ್ಟ 1,400 ರಾಸುಗಳನ್ನು ಆರೈಕೆ ಮಾಡುವಷ್ಟು ಮೂಲಭೂತ ಸೌಕರ್ಯಗಳನ್ನು ಹೊಂದಿರಬೇಕು ಎಂದರಲ್ಲದೆ, ಜಿಲ್ಲೆಯಲ್ಲಿರುವ ಗೋಶಾಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಇತ್ತೀಚಿನ ದಿನಗಳಲ್ಲಿ ಜಾನುವಾರುಗಳಲ್ಲಿ ಕಂದುರೋಗ(ಬ್ರುಸೆಲ್ಲೊಸಿಸ್ ರೋಗ) ಹೆಚ್ಚಾಗಿದ್ದು, ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದರಿಂದ ಜಿಲ್ಲೆಯಲ್ಲಿ ಕಂದುರೋಗ ನಿಯಂತ್ರಣ ಲಸಿಕಾ ಅಭಿಯಾನ ಕೈಗೊಳ್ಳಲಾಗಿದ್ದು, ಈ ಕುರಿತು ಗ್ರಾಮ ಪಂಚಾಯಿತಿ, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಪಶು ವೈದ್ಯ ಸೇವಾ ಚಿಕಿತ್ಸಾಲಯಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಹಾಗೂ ಪ್ರಾಣಿದಯಾ ಸಂಘಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಗೋಶಾಲೆಗಳು, ಪ್ರಾಣಿದಯಾ ಸಂಘದ ನಡುವೆ ಸಂಪರ್ಕ ಕೊಂಡಿಯಾಗಿ ಕಾರ್ಯ ನಿರ್ವಹಿಸಲು, ಜಿಲ್ಲಾ ಪ್ರಾಣಿದಯಾ ಸಂಘದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿರುವ ಒಬ್ಬ ಸ್ವಯಂ ಸೇವಕರನ್ನು ಗುರುತಿಸಿ, ಪ್ರಾಣಿ ಕಲ್ಯಾಣಾಧಿಕಾರಿಯಾಗಿ ಆಯ್ಕೆ ಮಾಡಬೇಕು ಎಂದರು. 

ಸಭೆಯಲ್ಲಿ ರಾಷ್ಟ್ರೀಯ ಕಂದುರೋಗ ನಿಯಂತ್ರಣ ಲಸಿಕಾ ಅಭಿಯಾನದ ಮಾಹಿತಿ ಕುರಿತ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿ ಕೃಷ್ಣಪ್ಪ, ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಜಿ.ಎಂ.ನಾಗರಾಜ್, ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಕಚೇರಿಯ ಮುಖ್ಯ ಆಡಳಿತಾಧಿಕಾರಿ ಡಾ.ಅನಿಲ್‌ಕುಮಾರ್, ದೊಡ್ಡಬಳ್ಳಾಪುರ ಉಪ ವಲಯ ಅರಣ್ಯಾಧಿಕಾರಿ ಸುಬ್ಬಾರಾವ್, ಡಿಸಿಆರ್‌ಬಿ ಡಿವೈಎಸ್ಪಿ ದೀಪಕ್, ನೆಲಮಂಗಲ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸಿದ್ದಪ್ಪ, ಶ್ರೀ ಸ್ವರ್ಣಾಂಭ ವಿದ್ಯಾ ಗುರುಕುಲ ಗೋಶಾಲೆಯ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಜೀವದಯಾ ಗೋಶಾಲೆಯ ದೀಪಕ್ ಜೈನ್, ಓಂಕಾರ ಗೋಶಾಲೆಯ ಶಿವಯೋಗಿ, ರಾಷ್ಟ್ರೋತ್ಥಾನ ಗೋಶಾಲೆಯ ಸುನೀಲ್, ಗೋಕುಲ ಗೋಶಾಲೆಯ ಉಮೇಶ್ ಸೇರಿದಂತೆ ವಿವಿಧ ಗೋಶಾಲೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜೆಡಿಎಸ್ (JDS) ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ (ಜೂನ್‌ 16) ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ಆರಂಭ..

[ccc_my_favorite_select_button post_id="109279"]
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಪತ್ರ

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ

IPL ಕಪ್ ಗೆದ್ದ RCB ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು ತುರ್ತು ಮಧ್ಯಸ್ಥಿಕೆ

[ccc_my_favorite_select_button post_id="109057"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಹೆತ್ತ ತಾಯಿ ಬದುಕಿರುವಾಗಲೇ ಸುಳ್ಳು ಅರ್ಜಿ ನೀಡಿ ಮರಣ ಪ್ರಮಾಣಪತ್ರ (Death certificate) ಪಡೆದು ಆಸ್ತಿ ಕಬಳಿಸಲು ಪ್ರಯತ್ನಿಸಿದ ಪುತ್ರನ ಪೊಲೀಸರು ಬಂಧಿಸಿರುವ ಘಟನೆ

[ccc_my_favorite_select_button post_id="109202"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ರಸ್ತೆ ಬದಿ ಸಾಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಟ್ರಂಚ್‌ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ (Accident)

[ccc_my_favorite_select_button post_id="109282"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]