ಮದ್ಯಪಾನಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ / ಹೊರರಾಜ್ಯಗಳಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್: ಸಚಿವ ಡಾ.ಕೆ ಸುಧಾಕರ್

ಚಿಕ್ಕಬಳ್ಳಾಪುರ: ಹೊರ ರಾಜ್ಯಗಳಿಂದ ರಾಜ್ಯಕ್ಕೆ ಅದರಲ್ಲೂ ವಿಶೇಷವಾಗಿ ಕೇರಳದಿಂದ ರಾಜ್ಯಕ್ಕೆ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್‌ಗಾಗಿ ಮಾರ್ಗಸೂಚಿಗಳನ್ನು ಶೀಘ್ರದಲ್ಲೆ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಕುಪ್ಪಳ್ಳಿ ಗ್ರಾಮಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಕರೊನಾ ನೆರೆರಾಜ್ಯಗಳಲ್ಲಿ ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ.  ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಗಳೂರು ಸೇರಿದಂತೆ ರಾಜ್ಯದ ಗಡಿಜಿಲ್ಲೆಗಳಿಗೆ ಕೇರಳದಿಂದ ಪ್ರತಿನಿತ್ಯ ಶಿಕ್ಷಣ , ಆರೋಗ್ಯ, ಮತ್ತು ದೈನಂದಿನ ವಹಿವಾಟುಗಳಿಗೆ  ಜನರು ಬರುತ್ತಿದ್ದಾರೆ.ಅಂತಹವರಿಗೆ ರಾಜ್ಯಕ್ಕೆ ಸಂಬಂಧಿಸಿದಂತೆ ಹೇಗಿರಬೇಕೆಂಬ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು. ವಿಮಾನನಿಲ್ದಾಣ, ರೈಲುಗಳಲ್ಲಿ ಬರುವ ಪ್ರವಾಸಿಗರಿಗೆ ಸಾಂಸ್ಥಿಕ ಕ್ವಾರಂಟೈನ್ ಗೆ ಕಡ್ಡಾಯವಾಗಿ ಒಳಪಡಿಸಲಾಗುವುದು.

ಕೆಜಿಎಫ್‌ನಲ್ಲಿ ಒಂದೇ ನರ್ಸಿಂಗ್ ಸ್ಕೂಲ್ನಲ್ಲಿ 32 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಬುಧವಾರ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು ಶಿಕ್ಷಣ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ನರ್ಸಿಂಗ್ ಸ್ಕೂಲ್‌ಗೆ ಬಂದ ವೇಳೆ ಆರ್ ಟಿ ಪಿಸಿಆರ್ ನೆಗೆಟಿವ್ ವರದಿಯನ್ನು ನೋಡಿ ಪ್ರವೇಶ ನೀಡಬೇಕಿತ್ತು, ಇದು ಶಿಕ್ಷಣ ಸಂಸ್ಥೆಯ ಹೊಣೆಗಾರಿಕೆ ಕೂಡ ಆಗಿದೆ.

ಕೇರಳದಲ್ಲಿ ಪ್ರತಿನಿತ್ಯ 30,000 ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಕರ್ನಾಟಕ ರಾಜ್ಯದಲ್ಲಿ ಪ್ರತಿನಿತ್ಯ 50,000 ಇದ್ದ ಪ್ರಕರಣಗಳನ್ನ700-800ಕ್ಕೆ ಇಳಿಸಲು ಸರ್ಕಾರ  ಸಾಕಷ್ಟು ಶ್ರಮ ವಹಿಸಿದೆ. ಸರ್ಕಾರದ ನಿಯಂತ್ರಣ ಕ್ರಮಗಳ ಜೊತೆಗೆ ಎಲ್ಲ ಕಡೆಯಿಂದಲೂ ಸಹಕಾರ ಬೇಕಿದೆ. ಹಬ್ಬ ಹರಿದಿನ  ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮುನ್ನ ಎಚ್ಚರ ವಹಿಸಬೇಕಿದೆ, ಕೋವಿಡ್ ನ ಎರಡೂ ಲಸಿಕೆಗಳನ್ನು ಪಡೆಯುವವರೆಗೆ ಕೆಲವು ತಿಂಗಳು ಕಾಲ ಮುನ್ನೆಚ್ಚರಿಕೆ ಕೈಗೊಳ್ಳ್ಳಬೇಕಾದ ಅನಿವಾರ್ಯತೆ ಇದೆ.

ಸಾರ್ವಜನಿಕ ಗಣೇಶೋತ್ಸವ ಕುರಿತಂತೆ ಇಲಾಖೆಯಿಂದ ನೀಡಬೇಕಾದ ಸಲಹೆ, ತಾಂತ್ರಿಕ ಸಲಹಾಸಮಿತಿಯ ಅಭಿಪ್ರಾಯವನ್ನು ಮುಖ್ಯಮಂತ್ರಿಯವರಿಗೆ ತಿಳಿಸಲಾಗಿದೆ.

ಕರೊನಾವನ್ನು ನಿಯಂತ್ರಿಸುವ ಒಂದೇ ದೃಷ್ಟೀಕೋನದಿಂದ ನಾವು ಸಲಹೆ ನೀಡಿದ್ದೇವೆ. ಮುಖ್ಯಮಂತ್ರಿಯವರು ಎಲ್ಲ ದೃಷ್ಟೀಕೋನಗಳಿಂದ ಪರಿಶೀಲಿಸಿ ನಿರ್ಧರಿಸಲಿದ್ದಾರೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕರ ಒಕ್ಕೂಟವನ್ನು ಕೋಚಿಮುಲ್‌ನಿಂದ ಪ್ರತ್ಯೇಕಗೊಳಿಸುವ ವಿಚಾರವು ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು ಮುಖ್ಯ ಮಂತ್ರಿಯವರು ಈಗ ಜಿಲ್ಲೆಯ ಜನರ ಬೇಡಿಕೆ ಈಡೇರಿಸಲು ಮುಂದಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಗ ಪ್ರತ್ಯೇಕ ಹಾಲು ಒಕ್ಕೂಟ ಬೇಕು ಎಂಬುದು ಜಿಲ್ಲೆಯ ನ್ಯಾಯಯುತವಾದ ಬೇಡಿಕೆಯಾಗಿದೆ ಎಂದು ಹೇಳಿದರು.

ಮದ್ಯಪಾನಕ್ಕೂ ಲಸಿಕೆಗೂ ಸಂಬಂಧವಿಲ್ಲ:  ಮದ್ಯಪಾನ ಮಾಡುವವರಿಗೆ ಕೊವಿಡ್ ಲಸಿಕೆ ಪಡೆಯುವುದರಿಂದ ಅಡ್ಡ ಪರಿಣಾಮ ಆಗುತ್ತದೆ ಎಂಬುದು ತಪ್ಪು ಕಲ್ಪನೆ. ಮದ್ಯಪಾನ ತ್ಯಜಿಸಿದರೆ ಅರೊಗ್ಯ ದೃಷ್ಠಿಯಿಂದ ಒಳಿತು. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಲಸಿಕೆ ಪಡೆದರೆ ಸಾವು, ಸಂತಾನ ಸಮಸ್ಯೆ ಎಂಬುದೆಲ್ಲ ಸುಳ್ಳು. ಈ ವದಂತಿಗಳಿಗೆ ಕಿವಿಗೊಡಬಾರದು. ಲಸಿಕೆ ತೆಗೆದುಕೊಂಡರೆ ಯಾವುದೇ  ಪ್ರತಿಕೂಲ ಪರಿಣಾಮ ಆಗುವುದಿಲ್ಲ ಎಂದವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ಅಧ್ಯಕ್ಷರಾದ ಕೆ.ವಿ.ನಾಗರಾಜು, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ನಗರಸಭಾ ಅಧ್ಯಕ್ಷರಾದ ಆನಂದರೆಡ್ಡಿ ಬಾಬು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ತಹಸಿಲ್ದಾರ್ ಗಣಪತಿಶಾಸ್ತ್ರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್, ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!