ಮೈಸೂರು: ಕೋವಿಡ್ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ ಅಂಬಾರಿ ಡಬಲ್ ಡೆಕ್ಕರ್ ಬಸ್ ಪ್ರವಾಸದ ಸೇವೆಯನ್ನು ಸೆಪ್ಟೆಂಬರ್ 4 ರಿಂದ ಪುನಾರಂಭಿಸಲಾಗುತ್ತಿದ್ದು, ಬೆಳಿಗ್ಗೆ 9:30 ರಿಂದ ಸಂಜೆ 5:30 ರವರಗೆ ಅಂಬಾರಿ ವಾಹನವು ಸಂಚರಿಸುತ್ತದೆ ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾ.ಪು ಸಿದ್ಧಲಿಂಗಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಟೆಲ್ ಮಯೂರ ಹೊಯ್ಸಳ, ಡಿಸಿ ಕಛೇರಿ, ಕುಕ್ಕರಹಳ್ಳಿ ಕೆರೆ, ಮೈಸೂರು ವಿಶ್ವವಿದ್ಯಾನಿಲಯ, ರಾಮಸ್ವಾಮಿ ಸರ್ಕಲ್, ಸಂಸ್ಕೃತ ಪಾಠಶಾಲೆ, ಕೆ.ಆರ್.ಸರ್ಕಲ್, ದೊಡ್ಡ ಗಡಿಯಾರ, ಅರಮನೆ ದಕ್ಷಿಣ ದ್ವಾರ, ಹಾರ್ಡಿಂಜ್ ಸರ್ಕಲ್, ಮೃಗಾಲಯ, ಕಾರಂಜಿ ಕೆರೆ, ಗೌಮೆರ್ಂಟ್ ಗೆಸ್ಟ್ ಹೌಸ್, ಸಂತ ಫಿಲೋಮಿನಾ ಚರ್ಚ್, ಬನ್ನಿಮಂಟಪ, ಆಯುರ್ವೇದಿಕ್ ಆಸ್ಪತ್ರೆ ಸರ್ಕಲ್, ರೈಲ್ವೆ ನಿಲ್ದಾಣದಿಂದ ಹಿಂದುರಿಗಿ ಹೋಟೆಲ್ ಮಯೂರ ಹೊಯ್ಸಳಕ್ಕೆ ತಲುಪುತ್ತದೆ.
ಪ್ರಯಾಣದ ದರ ಪೂರ್ತಿ ದಿನಕ್ಕೆ 250 ರೂ. ಆಗಿದ್ದು, ಬಸ್ಸಿನಲ್ಲಿ ಸಂಚರಿಸುವಾಗ ಪ್ರತಿ ಸ್ಥಳದ ಮಾಹಿತಿಯನ್ನು ಆಡಿಯೋ ವಿಡಿಯೋ ಸಿಸ್ಟಮ್ನಿಂದ ವಿವರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2423652 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..