ಬೆಂ.ಗ್ರಾ.ಜಿಲ್ಲೆ: ಜಿಲ್ಲಾ ಪಂಚಾಯತಿ ಅಡಿಯಲ್ಲಿ ಬರುವ ವಿವಿಧ ಇಲಾಖೆಗಳ ಯೋಜನೆಗಳು, ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ, ತ್ವರಿತವಾಗಿ ಪೂರ್ಣಗೊಳಿಸುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಸೂಚಿಸಿದರು.
2021ರ ಆಗಸ್ಟ್ 30 ಹಾಗೂ 31 ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳ ಎರಡು ದಿನಗಳ ಕಾರ್ಯಗಾರದಲ್ಲಿ ಭಾಗವಹಿಸಿದ ನಂತರ, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಅವರು ಮಾತನಾಡಿದರು.
ಸ್ವಚ್ಛ ಭಾರತ್ ಮಿಷನ್, ಜಲಜೀವನ್ ಮಿಷನ್, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ, ಗ್ರಾಮೀಣ ನೀರು ಸರಬರಾಜು, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, ಜಲಶಕ್ತಿ ಯೋಜನೆ, ರೈತ ಬಂಧು ಅಭಿಯಾನ, ಸೌರ ವಿದ್ಯುತ್ ಅಳವಡಿಕೆ, ದೂರ ದೃಷ್ಟಿ ಯೋಜನೆಯಡಿಯಲ್ಲಿ ಸೇವಾ ಕೇಂದ್ರಗಳ ಬಲವರ್ಧನೆ, ಕೋವಿಡ್-19 ನಿರ್ವಹಣೆ ಸೇರಿದಂತೆ ಇನ್ನಿತರ ಯೋಜನೆಗಳ ಕುರಿತು ಮಾಹಿತಿ ಪಡೆದರಲ್ಲದೆ, ಎಲ್ಲಾ ಯೋಜನೆಗಳಲ್ಲೂ ಪ್ರಗತಿ ಸಾಧಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..