ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಚಿಕಿತ್ಸೆಗೆ ದಾಖಲಾಗಿದ್ದ 12 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಹೊಸದಾಗಿ 15 ಕರೊನಾ ಪ್ರಕರಣಗಳು ವರದಿಯಾಗಿದ್ದರೆ, ಚಿಕಿತ್ಸೆಗೆ ಓರ್ವ ಮಹಿಳೆ ಸಾವನಪ್ಪಿದ್ದಾರೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ವರದಿಯನ್ವಯ ನೆಲಮಂಗಲ ತಾಲೂಕಿನ ಓರ್ವ ಪುರುಷ, 04 ಮಹಿಳೆಯರು ಸೇರಿ 05. ಹೊಸಕೋಟೆ ತಾಲೂಕಿನ 04 ಪುರುಷರು, ಓರ್ವ ಮಹಿಳೆ ಸೇರಿ 5, ದೇವನಹಳ್ಳಿ ತಾಲೂಕಿನ ಓರ್ವ ಪುರುಷ. ದೊಡ್ಡಬಳ್ಳಾಪುರ ತಾಲೂಕಿನ 03 ಪುರುಷರು. ಅನ್ಯ ಜಿಲ್ಲೆಯವರು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 15 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಮೃತರ ವರದಿ: ಚಿಕಿತ್ಸೆಗೆ ದಾಖಲಾಗಿದ್ದ ದೊಡ್ಡಬಳ್ಳಾಪುರ ತಾಲೂಕಿನ 48 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ 53 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 135ಕ್ಕೆ ಇಳಿಕೆಯಾಗಿದೆ. ಅಲ್ಲದೆ 2152 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಪ್ರಕಾರ 2758 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ನಾಳೆ (ಸೆ.03)ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ನಡೆಯಲಿದ್ದು, ಮತದಾರರು ಕಡ್ಡಾಯವಾಗಿ ಕೋವಿಡ್-19 ನಿಯಮ ಪಾಲಿಸಿ, ಸಂಭಾವ್ಯ ಕರೊನಾ ಮೂರನೆ ಅಲೆ ತಡೆಗಟ್ಟಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂಬುದು ಹರಿತಲೇಖನಿ ಕಳಕಳಿಯಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..