ದೊಡ್ಡಬಳ್ಳಾಪುರ: ನಗರ ಸಭೆಯ ಎಲ್ಲಾ 31 ವಾರ್ಡ್ಗಳಿಗೆ ಸೆಪ್ಟೆಂಬರ್ 3 ರಂದು ಬೆಳಿಗ್ಗೆ 7:00 ರಿಂದ ಸಂಜೆ 6:00 ಗಂಟೆಗೆ ಯವರೆಗೆ ಮತದಾನ ನಡೆಯಲಿದ್ದು, 119 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
ದೊಡ್ಡಬಳ್ಳಾಪುರ ನಗರದ ವ್ಯಾಪ್ತಿಯಲ್ಲಿ 63 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 13 ಸಾಮಾನ್ಯ, 37 ಸೂಕ್ಷ್ಮ ಹಾಗೂ 13 ಅತೀ ಸೂಕ್ಷ್ಮ ಮತಗಟ್ಟೆಗಳು ಎಂದು ವಿಂಗಡಿಸಲಾಗಿದೆ.ಮತದಾನವನ್ನು ಶಾಂತಿಯುತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು, 284 ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ 290 ಪೊಲೀಸ್ ಅಧಿಕಾರಿಗಳನ್ನು ಚುನಾವಣೆಯ ಮತದಾನ ಕಾರ್ಯಕ್ಕೆ ನಿಯೋಜಿಸಲಾಗಿದೆ.
ಪ್ರತಿ ಮತಗಟ್ಟೆಗೆ ಒಂದರಂತೆ ಒಟ್ಟು 63 ವಿದ್ಯುನ್ಮಾನ ಮತಯಂತ್ರಗಳನ್ನು ಮತದಾನಕ್ಕೆ ಬಳಸಲಾಗುತ್ತಿದ್ದು, ಮಸ್ಟರಿಂಗ್ ಕಾರ್ಯ ದೊಡ್ಡಬಳ್ಳಾಪುರ ನಗರದಲ್ಲಿರುವ ಶ್ರೀ ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು, ಡಿ-ಮಸ್ಟರಿಂಗ್ ಕಾರ್ಯಯು ಸಹ ಇದೇ ಕಾಲೇಜಿನಲ್ಲಿ ನಡೆಯಲಿದೆ ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..