ದೊಡ್ಡಬಳ್ಳಾಪುರ: 6 ವರ್ಷದೊಳಗಿನ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪೋಷಣ್ ಮಾಸಾಚರಣೆ’ ಅಭಿಯಾನ ತಾಲೂಕಿನಾಧ್ಯಂತ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ವೆಂಕಟೇಶ್ ರೆಡ್ಡಿ ತಿಳಿಸಿದರು.
ನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಗು ಜನಿಸಿದ ಒಂದು ಗಂಟೆಯೊಳಗೆ ತಾಯಿಯ ಎದೆಹಾಲು ನೀಡುವುದನ್ನು ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಈ ಬಗ್ಗೆ ಎಲ್ಲರೂ ಜಾಗೃತಿ ವಹಿಸಬೇಕು. ಗರ್ಭಿಣಿಯರು, ಬಾಣಂತಿಯರು ಯಾವುದೇ ಕಾರಣಕ್ಕೂ ಅಪೌಷ್ಟಿಕತೆಯಿಂದ ಹಾಗೂ ರಕ್ತಹೀನತೆಯಿಂದ ಬಳಲದಂತೆ ಸದಾ ನಿಗಾವಹಿಸಬೇಕು ಎಂದರು.
ಸಿಡಿಪಿಒ ಅನಿತಾಲಕ್ಷ್ಮೀ ಮಾತನಾಡಿ, ಗರ್ಭಧಾರಣೆಯಿಂದ ಹಿಡಿದು ಶಿಶು ಮತ್ತು ತಾಯಂದಿರು 1000 ದಿನಗಳ ಕಾಲ ಉತ್ತಮ ಪೌಷ್ಟಿಕ ಆಹಾರ ಪಡೆದು, ಆರೋಗ್ಯವಂತರನ್ನಾಗಿಸುವ ಉದ್ದೇಶದಿಂದ ಪೋಷಣ್ ಅಭಿಯಾನ ಯೋಜನೆ ಜಾರಿಗೆ ತರಲಾಗಿದೆ.
ಈ ಯೋಜನೆಯಡಿ ಗರ್ಭಧಾರಣೆಯಿಂದ ಹಿಡಿದು ಶಿಶು ಮತ್ತು ತಾಯಂದಿರು 1000 ದಿನಗಳ ಕಾಲ ಉತ್ತಮ ಪೌಷ್ಠಿಕ ಆಹಾರ ಸೇವನೆ ಮಾಡುವುದು. ರಕ್ತ ಹೀನತೆ, ಅತಿಸಾರ ಭೇದಿ ತಡೆಗಟ್ಟುವುದು, ಪೌಷ್ಟಿಕ ಆಹಾರ ಪೂರೈಕೆ ಮಾಡುವುದರ ಮೂಲಕ ತಾಯಿ ಮತ್ತು ಶಿಶುವಿನ ಉತ್ತಮ ಆರೋಗ್ಯ ಕಾಪಾಡುವುದು ಈ ಯೋಜನೆಯ ಮುಖ್ಯ ಉದ್ದೇಶ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಸಂಯೋಜಕರಾದ ಮಂಜುನಾಥ್, ರಾಜಶೇಖರ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..