ಗಾಂಧಿಭವನ, ಪೊಲೀಸ್ ಪಬ್ಲಿಕ್ ಶಾಲೆ, ವಸತಿ ಗೃಹ ಉದ್ಘಾಟನೆ / ವಿಶ್ವದಲ್ಲೇ ಅತಿ ಹೆಚ್ಚು ಜನರಿಗೆ ಕೋವಿಡ್ ನಿರೋಧಕ ಲಸಿಕೆ ನೀಡಿದ ದೇಶ ಭಾರತ: ಅಮಿತ್ ಶಾ

ದಾವಣಗೆರೆ: ಮನುಕುಲಕ್ಕೆ ಸವಾಲಾಗಿರುವ ಕೊರೊನಾ ಮಹಾಮಾರಿಯ ನಿಯಂತ್ರಣಕ್ಕಾಗಿ ದೇಶದಲ್ಲಿ ಹಮ್ಮಿಕೊಳ್ಳಲಾಗಿರುವ ಲಸಿಕಾ ಅಭಿಯಾನ ವಿಶ್ವದಲ್ಲೇ ಬೃಹತ್ ಅಭಿಯಾನವಾಗಿದ್ದು, ಜಗತ್ತಿನಲ್ಲಿಯೇ ಅತಿ ಹೆಚ್ಚು ಜನರಿಗೆ ಕೋವಿಡ್ ನಿರೋಧಕ ಲಸಿಕೆ ನೀಡಿರುವ ದೇಶ ಭಾರತ. ಮುಂದಿನ ದಿನಗಳಲ್ಲಿ ರಾಷ್ಟ್ರದ ಎಲ್ಲ ಜನತೆಯ ಸಹಕಾರದಿಂದ  ನಮ್ಮ ಸರ್ಕಾರ ದಿಟ್ಟವಾಗಿ ಕರೊನಾವನ್ನು ಹಿಮ್ಮೆಟ್ಟಿಸಲು ಪಣ ತೊಟ್ಟಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೊಲೀಸ್ ಇಲಾಖೆ ಮತ್ತು ಜಿಎಂಐಟಿ ವತಿಯಿಂದ ಗುರುವಾರ ನಗರದ ಜಿಎಂಐಟಿ ಆವರಣದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಭವನ, ಪೊಲೀಸ್ ಪಬ್ಲಿಕ್ ಸ್ಕೂಲ್ ಮತ್ತು ವಸತಿಗೃಹ ಸಮುಚ್ಛಯ ಹಾಗೂ ಜಿಎಂಐಟಿ ಕೇಂದ್ರ ಗ್ರಂಥಾಲಯದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ದಾವಣಗೆರೆಯಲ್ಲಿ ಗಾಂಧಿ ಭವನ, ಪೊಲೀಸ್ ಪಬ್ಲಿಕ್ ಶಾಲೆ, ಪೊಲೀಸ್ ವಸತಿ ಗೃಹ ಸೇರಿದಂತೆ ಸುಮಾರು 50 ಕೋಟಿ ರೂ. ಗಳ ಅನುದಾನದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕೆಲಸಗಳ ಉದ್ಘಾಟನೆಯನ್ನು ಇಂದು ಸಂತಸದಿಂದ ನೆರವೇರಿಸಿದ್ದೇನೆ ಎಂದು ಮಾತು ಆರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮನುಕುಲವನ್ನೇ ತತ್ತರಿಸುವಂತೆ ಮಾಡಿರುವ ಅದರಲ್ಲೂ ಭಾರತದಂತಹ ರಾಷ್ಟ್ರಕ್ಕೆ ಅತಿ ದೊಡ್ಡ ಸವಾಲಾಗಿರುವ ಕೊರೊನಾವನ್ನು ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ಜನತೆಯ ಸಹಕಾರದಿಂದ ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯವಾಗಿದ್ದು, ಕೊರೊನಾವನ್ನು ನಿಯಂತ್ರಿಸಲು ಪ್ರಧಾನಮಂತ್ರಿ ಮೋದಿಜಿಯವರ ನೇತೃತ್ವದ ಸರ್ಕಾರ ವಿಶ್ವದಲ್ಲೇ ಅತಿ ದೊಡ್ಡ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ, ಯಶಸ್ವಿಯಾಗಿಸಿದ್ದೇವೆ.  ದೇಶಾದ್ಯಂತ ದಿನ ಒಂದಕ್ಕೆ 1.36 ಕೋಟಿ ಜನರಿಗೆ ಲಸಿಕೆ ನೀಡುವ ಮೂಲಕ ದಾಖಲೆ ಸೃಷ್ಟಿಸಿದ್ದು, ಕರ್ನಾಟಕದಲ್ಲೂ ಸಹ ಕರೊನಾ ವಿರುದ್ದ ಪರಿಣಾಮಕಾರಿಯಾಗಿ ಹೋರಾಟ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೆ 5.20 ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು, 4 ಕೋಟಿ ಜನರಿಗೆ ಮೊದಲನೆ ಡೋಸ್, 1.16 ಕೋಟಿ ಜನರಿಗೆ ಎರಡನೆ ಡೋಸ್ ಲಸಿಕೆ ನೀಡಲಾಗಿದೆ.  ಸೆಪ್ಟಂಬರ್ ಅಂತ್ಯದ ವೇಳೆಗೆ ಶೇ.90 ಪ್ರಗತಿ ಸಾಧಿಸುವ ವಿಶ್ವಾಸ ಇದೆ.

ಕರೊನಾದ ಮೊದಲನೆ ಮತ್ತು ಎರಡನೆ ಅಲೆ ಸಂದರ್ಭದಲ್ಲಿ ಘೋಷಿಸಲಾದ ಬಂದ್‍ನಿಂದ ಅತಿ ಹೆಚ್ಚಾಗಿ ತೊಂದರೆಗೀಡಾಗಿದ್ದು ಬಡವರು, ಹಿಂದುಳಿದ ವರ್ಗದವರು, ಆದಿವಾಸಿಗಳು. ಆದ ಕಾರಣ ನಮ್ಮ ಸರ್ಕಾರ ಈ ಜನತೆ ಸೇರಿದಂತೆ ಯಾರೂ ಕೂಡ ಹಸಿವಿನಿಂದ ಬಳಲಬಾರದೆಂದು ಅನೇಕ ಪ್ಯಾಕೇಜ್ ಘೋಷಿಸಿದೆ. ಬಿಪಿಎಲ್ ಕಾರ್ಡುದಾರರಿಗೆ ದೀಪಾವಳಿ ಹಬ್ಬದವರೆಗೆ ಪ್ರತಿ ವ್ಯಕ್ತಿಗೆ ಉಚಿತವಾಗಿ 5 ಕೆಜಿ ಪಡಿತರ ನೀಡುತ್ತಿದೆ. ಹಸಿವು ಮುಕ್ತ ಭಾರತ ಮಾಡಲು, ಕೊರೊನಾ ಮುಕ್ತಗೊಳಿಸಲು ಸರ್ಕಾರಗಳು ಸರ್ವ ಪ್ರಯತ್ನ ಮಾಡುತ್ತಿವೆ.ಮುಂಬರಬಹುದಾದ ಕರೊನಾ ಅಲೆಯನ್ನು ಎದುರಿಸಲು ಎಲ್ಲ ರಾಜ್ಯಗಳು, ಜಿಲ್ಲೆಗಳು, ತಾಲ್ಲೂಕುಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಸಾವಿರಾರು ಆಕ್ಸಿಜನ್ ಪ್ಲಾಂಟ್‍ಗಳನ್ನು ನಿರ್ಮಿಸಲಾಗುತ್ತಿದ್ದು, ಆಕ್ಸಿಜನ್ ಕ್ಷೇತ್ರದಲ್ಲಿ ಆತ್ಮ ನಿರ್ಭರ ಭಾರತ ಮಾಡುವ ನಿಟ್ಟಿನಲ್ಲಿ ತಯಾರಿಗಳನ್ನು ಸರ್ಕಾರ ಮಾಡುತ್ತಿದೆ.

ರಾಜ್ಯದಲ್ಲಿ ಯಡಿಯೂರಪ್ಪನವರ ಸರ್ಕಾರ ರೈತರ ವಿಕಾಸಕ್ಕೆ ಒತ್ತು ನೀಡಿ ಅನೇಕ ರೈತಪರ ಯೋಜನೆಗಳನ್ನು ಜಾರಿಗೊಳಿಸಿದೆ. ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಕೂಡ ಉತ್ತಮ ಆಡಳಿತ ನೀಡಿ ಜನರ ವಿಶ್ವಾಸ ಗಳಿಸಲಿದೆ ಎಂಬ ಆಶಯ ವ್ಯಕ್ತಪಡಿಸಿದ ಅವರು, ಕರೊನಾ ಮಹಾಮಾರಿ ಹಿಮ್ಮೆಟ್ಟಿಸಲು ಜನತೆಯ ಸಹಕಾರ ಬೇಕು. ಲಸಿಕೆ ಹಾಕಿಸುವಲ್ಲಿ ಯಾರೂ ಹಿಂಜರಿಯುವುದು ಬೇಡ. ಎಲ್ಲರೂ ಲಸಿಕೆ ಪಡೆಯುವಂತಹ ವಾತಾವರಣ ನಿರ್ಮಿಸಿ, ಶೇ.100 ಲಸಿಕಾಕರಣ ಆಗಬೇಕೆಂದರು.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿ, ಗಾಂಧಿ ಹುಟ್ಟಿದ ನಾಡಿನಿಂದ ಬಂದ ಅಮಿತ್ ಶಾ ಅವರಿಂದಲೇ ಗಾಂಧಿ ಭವನದ ಉದ್ಘಾಟನೆ ನೆರವೇರುತ್ತಿರುವುದು ನಿಜಕ್ಕೂ ಸಂತಸದಾಯಕ ಸಂಗತಿಯಾಗಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರನ್ನು ಈ ಸಂದರ್ಭದಲ್ಲಿ ಸನ್ಮಾನಿಸುತ್ತಿರುವುದು ಸ್ತುತ್ಯಾರ್ಹವಾಗಿದ್ದು, ಹೋರಾಟಗಾರರಿಗೆ ನನ್ನ ಹೃದಯಪೂರ್ವಕ ನಮನಗಳು.   ಕೇಂದ್ರ ಗೃಹ ಸಚಿವರಾದ ಅಮಿತ್ ಶಾರವರಿಗೆ ಕನ್ನಡಿಗರ ಮೇಲೆ ಅಪಾರ ಪ್ರೀತಿ ವಿಶ್ವಾಸವಿದ್ದು, ದೇಶದ ಭವಿಷ್ಯ ರೂಪಿಸುವಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ದೇಶದ ಅಖಂಡತೆ, ಐಕ್ಯತೆಗಾಗಿ ದಿಟ್ಟವಾಗಿ ಹೋರಾಡಿದ ವಲ್ಲಭಬಾಯಿ ಪಟೇಲ್‍ನ ನಂತರ ಅವರಂತೆಯೇ ದೇಶದ ಏಕತೆಗಾಗಿ ಅಮಿತ್ ಶಾರವರು ದಿಟ್ಟತನ ತೋರಿದ್ದಾರೆ. ಇಂದು ಆಫ್ಘಾನಿಸ್ಥಾನದಲ್ಲಿ ಹೆಣ್ಣುಮಕ್ಕಳು, ಮಕ್ಕಳ ವಿಷಯದಲ್ಲಿ ಭೀತಿಯ ವಾತಾವರಣ ಇದ್ದು ಅವರ ಜೀವನ ಆತಂಕದಲ್ಲಿದೆ. ಆದರೆ ನಮ್ಮ ದೇಶದಲ್ಲಿ ಜಮ್ಮು ಕಾಶ್ಮೀರದ ಏಕತೆಗೆ ದಿಟ್ಟವಾಗಿ ಹೆಜ್ಜೆ ಇಟ್ಟಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಐತಿಹಾಸಿಕ ಸಾಧನೆ ತೋರಿದ್ದಾರೆ.

ಇಂದು ದೇಶದಲ್ಲಿ ಹಲವಾರು ಸಮಸ್ಯೆಗಳಿವೆ. ರಾಜ್ಯದಲ್ಲಿಯೂ ಅನೇಕ ಸಮಸ್ಯೆ ಇವೆ. ಆದರೆ ರಾಜ್ಯದ ಆಂತರಿಕ ಸುರಕ್ಷತೆ ಬಗ್ಗೆ ಯಾವುದೇ ರಾಜಿ ಇಲ್ಲ.  ಎನ್‍ಐಎ ಜೊತೆ ಕೈಜೋಡಿಸಿ, ಉಗ್ರ ಸಂಘಟನೆಗಳ ಪತ್ತೆ ಹಚ್ಚಿ, ಭಯೋತ್ಪಾದನೆಯ ಪ್ರಯತ್ನವನ್ನು ಸೆದೆ ಬಡಿಯಲು ಉಗ್ರ ಕ್ರಮ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ.

ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ನಿಧಾನವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಅಪರಾಧ ತಡೆಯುವಲ್ಲಿ ವಿಳಂಬವಾಗುತ್ತಿದೆ ಎಂಬ ಉದ್ದೇಶದಿಂದ ಮೊಬೈಲ್ ವಿಧಿ ವಿಜ್ಞಾನ ಪ್ರಯೋಗಾಲಯ ಮಾಡುವಂತೆ ಕೇಂದ್ರ ಗೃಹ ಸಚಿವರು ಸೂಚಿಸಿದಂತೆ ಕ್ರಮ ವಹಿಸಲಾಗುತ್ತಿದೆ. ಹಾಗೂ ಅಪರಾಧ ಸ್ಥಳದಲ್ಲಿ ಅಧಿಕಾರಿಗಳು ಇರಬೇಕೆಂಬುದನ್ನೂ ಸಹ ಪಾಲಿಸಲಾಗುತ್ತಿದೆ. ಗೃಹ ಸಚಿವರ ಮಾರ್ಗದರ್ಶನ ಸದಾ ರಾಜ್ಯಕ್ಕೆ ಇರಲಿದೆ ಎಂದರು.

ಪೊಲೀಸ್ ಪಬ್ಲಿಕ್ ಸ್ಕೂಲ್: ಜಿಲ್ಲೆಯಲ್ಲಿ ಪೊಲೀಸ್ ಪಬ್ಲಿಕ್ ಶಾಲೆ ಇಂದು ಲೋಕಾರ್ಪಣೆಗೊಂಡಿದ್ದು ಮಿಲಿಟರಿ ಶಾಲೆಯ ಮಾದರಿಯಲ್ಲಿ ಇಲ್ಲಿ ಉತ್ತಮ ಮತ್ತು ಶಿಸ್ತಿನ ಶಿಕ್ಷಣ ನೀಡಲಾಗುವುದು ಎಂದರು.

ವಿಶ್ವ ಗುರು ಸ್ಥಾನಕ್ಕೆ ಪ್ರಧಾನಿ ಕರೆ: ಸ್ವಾತಂತ್ರ್ಯ ಬಂದು 75 ವರ್ಷ ಸಂದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ಪ್ರಧಾನಿಯವರು ಕರೆ ನೀಡಿದ್ದು, 100 ವರ್ಷ ತುಂಬುವುದರೊಳಗೆ ನಮ್ಮ ರಾಷ್ಟ್ರ ಇಡೀ ವಿಶ್ವದಲ್ಲೇ ಗುರು ಸ್ಥಾನ ಪಡೆಯುವಂತೆ ಸಂಕಲ್ಪ ತೊಡಬೇಕೆಂದು ಸಹ ಕರೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಅಭಿವೃದ್ದಿ ಪಥದಲ್ಲಿ ಸಾಗೋಣ. 

ಗಾಂಧಿ ಭವನ: ಗಾಂಧಿ ನಾಡಿನವರಾದ ಅಮಿತ್ ಶಾರವರು ಗಾಂಧಿ ಭವನ ಉದ್ಘಾಟಿಸಿರುವುದು ಅತ್ಯಂತ ಸಂತಸದ ವಿಷಯವಾಗಿದೆ ಎಂದರು.

ನಮ್ಮ ಸರ್ಕಾರ, ಬಡಜನತೆಗೆ, ಎಸ್‍ಸಿ, ಎಸ್‍ಟಿ, ಓಬಿಸಿ, ಅಲ್ಪಸಂಖ್ಯಾತರಿಗೆ ಕೌಶಲ್ಯ ತರಬೇತಿಗಳು ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. 750 ವಸತಿರಹಿತ ಹಳ್ಳಿಗಳಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ.

ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಪಿಯುಸಿ ಯಿಂದ ಸ್ನಾತಕೋತ್ತರ ಪದವಿವರೆಗೆ ವಿದ್ಯಾರ್ಥಿಗಳಿಗೆ ರೈತನಿಧಿ ಯೋಜನೆಯಡಿ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಇದಕ್ಕಾಗಿ 1 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದೇವೆ.  ಸೆ.5 ರಂದು ಕೇಂದ್ರ ಕೃಷಿ ಸಚಿವರು ಈ ಯೋಜನೆಗೆ ಚಾಲನೆ ನೀಡಲಿದ್ದು ಸುಮಾರು 20 ಲಕ್ಷ ರೈತ ಮಕ್ಕಳಿಗೆ ಈ ಸೌಲಭ್ಯ ತಲುಪಲಿದೆ ಎಂದರು. ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನ ಸೇರಿದಂತೆ ಮಾಸಾಶನ ಮೊತ್ತವನ್ನು ಹೆಚ್ಚಿಸಲಾಗಿದ್ದು, ಬಡವರ, ಕಾರ್ಮಿಕರ, ರೈತಪರ ಸರ್ಕಾರವಾಗಿದೆ ಎಂದರು.ಜಿಎಂಐಟಿ ಯಲ್ಲಿ ಲೋಕಾರ್ಪಣೆಯಾದ ಕೇಂದ್ರ ಗ್ರಂಥಾಲಯದಿಂದ ಅನೇಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು ಜಿ.ಎಂ.ಸಿದ್ದೇಶ್ವರ ಅವರು ಅತ್ಯಂತ ಕ್ರಿಯಾಶೀಲ ಸಂಸದರಾಗಿದ್ದಾರೆ ಎಂದರು.

ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ: 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ ಬಿ.ಎಂ.ಶಿವಲಿಂಗಸ್ವಾಮಿ, ಹೆಚ್.ಮರುಳಸಿದ್ದಪ್ಪ, ತಿಳುವಳ್ಳಿ ಶೆಟ್ರು ಸಿದ್ದರಾಮಪ್ಪ ಇವರನ್ನು ಗೌರವಿಸಿದರು.

ಕಾರ್ಯಕ್ರಮದಲ್ಲಿ ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಕೃಷಿ ಸಚಿವ ಬಿ.ಸಿ.ಪಾಟಿಲ್, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಸಂಸದ ಡಾ. ಜಿ.ಎಂ. ಸಿದ್ದೇಶ್ವರ್, ಶಾಸಕರುಗಳಾದ ಕೆ. ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ. ರಾಮಚಂದ್ರ, ಪ್ರೊ. ಎನ್. ಲಿಂಗಣ್ಣ, ಎಂ.ಪಿ. ರೇಣುಕಾಚಾರ್ಯ, ಕರುಣಾಕರ ರೆಡ್ಡಿ, ವಿಧಾನಪರಿಷತ್ ಸದಸ್ಯ ಮೋಹನ್‍ಕುಮಾರ್ ಕೊಂಡಜ್ಜಿ, ಎನ್. ರವಿಕುಮಾರ್, ಮೇಯರ್ ಎಸ್.ಟಿ.ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ  ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಜಾತಿಗಣತಿಗೆ ಮುಂದಾದ ಕೇಂದ್ರ ಸರ್ಕಾರ; ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹವೇನು ಗೊತ್ತಾ..?

ಜಾತಿಗಣತಿಗೆ ಮುಂದಾದ ಕೇಂದ್ರ ಸರ್ಕಾರ; ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹವೇನು ಗೊತ್ತಾ..?

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="105939"]
ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ: ಸಿಎಂ ಸಿದ್ದರಾಮಯ್ಯ

ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ: ಸಿಎಂ ಸಿದ್ದರಾಮಯ್ಯ

ನ್ಯಾಯ ಪಡೆಯುವುದು ಈಗ ದುಬಾರಿಯಾಗಿದ್ದು, ಅನೇಕರಿಗೆ ಹಣವಿಲ್ಲದೆ ನ್ಯಾಯ ಪಡೆಯಲು ಸಾಧ್ಯವಾಗುತ್ತಿಲ್ಲ. ಅಂಥವರಿಗೆ ಅನ್ಯಾಯವಾಗುತ್ತದೆ. ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ Cmsiddaramaiah

[ccc_my_favorite_select_button post_id="105901"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಪೊಲೀಸ್‌ ವಾಹನದಿಂದ ಜಿಗಿದು ಆರೋಪಿ ಸಾವು..!

ಪೊಲೀಸ್‌ ವಾಹನದಿಂದ ಜಿಗಿದು ಆರೋಪಿ ಸಾವು..!

ಕಳ್ಳತನ ಮತ್ತು ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳನ್ನು ಕರೆದುಕೊಂಡು ಹೋಗುವಾಗ ಪರಾರಿಯಾಗುವ ಭರದಲ್ಲಿ ವಾಹನದಿಂದ ಜಿಗಿದು ಒಬ್ಬ ಸಾವನ್ನಪ್ಪಿರುವ (dies)

[ccc_my_favorite_select_button post_id="105926"]
ದೊಡ್ಡಬಳ್ಳಾಪುರ: ಅಪರಿಚಿತ ವಾಹನ ಡಿಕ್ಕಿ ಕೂಲಿ ಕಾರ್ಮಿಕನಿಗೆ ಪೆಟ್ಟು

ದೊಡ್ಡಬಳ್ಳಾಪುರ: ಅಪರಿಚಿತ ವಾಹನ ಡಿಕ್ಕಿ ಕೂಲಿ ಕಾರ್ಮಿಕನಿಗೆ ಪೆಟ್ಟು

ಅಪರಿಚಿತ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ ಕೂಲಿ ಕಾರ್ಮಿಕ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಗರದ ಎಪಿಎಂಸಿ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="105861"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!