ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗೂಳ್ಯ ಗ್ರಾಮದ ಹಾರ್ಮೋನಿಯಂ ಮಾಸ್ಟರ್ ಕೃಷ್ಣರಾವ್ (70 ವರ್ಷ) ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಡಿ.ಕ್ರಾಸ್ ಸಮೀಪದ ಪೆಟ್ರೋಲ್ ಬಂಕ್ ಮುಂಬಾಗದಲ್ಲಿ ಘಟನೆ ಸಂಭವಿಸಿದ್ದು, ಮೃತರು ಇಂದು ಬೆಳಗ್ಗೆ ಗೂಳ್ಯದಿಂದ ನಗರಕ್ಕೆ ದ್ವಿಚಕ್ರ ವಾಹನದಲ್ಲಿ ಬರುವಾಗ ಹಿಂಬಾಗದಿಂದ ಬಂದ ರಾಜಸ್ಥಾನದ ನೊಂದಣಿಯ ಟ್ರಕ್ ಡಿಕ್ಕಿ ಒಡೆದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ಘಟನೆ ನಡೆದ ಸ್ಥಳದಿಂದ ಟ್ರಕ್ ಚಾಲಕ ಪರಾರಿಯಾಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..