ದೊಡ್ಡಬಳ್ಳಾಪುರ: ನಗರಸಭೆಯ 31ವಾರ್ಡ್ಗಳಿಗೆ ನಡೆಯುತ್ತಿರುವ ಮತದಾನ ಬಿರುಸು ಪಡೆದಿದ್ದು, 63 ಮತಗಟ್ಟೆಗಳಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.
11ಗಂಟೆಯ ವರದಿಯನ್ವಯ 7118 ಗಂಡು, 5720 ಹೆಣ್ಣು ಸೇರಿ ಒಟ್ಟು 12838 ಮಂದಿ ಮತ ಚಲಾಯಿಸಿದ್ದಾರೆ.
ಮತಗಟ್ಟೆಗಳ ಬಳಿ ಮುಂದೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಯಾವುದೇ ಅಹಿತರ ಘಟನೆ ನಡೆಯದಂತೆ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮತಗಟ್ಟೆಗಳಿಗೆ ಭೇಟಿ ನೀಡುತ್ತಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..