ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಶಾಂತಿಯುತ: ಶೇ.75.9ರಷ್ಟು ಮತದಾನ / ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳು

ದೊಡ್ಡಬಳ್ಳಾಪುರ: ತೀವ್ರ ಕುತೂಹಲ ಕೆರಳಿಸಿದ್ದ ನಗರಸಭೆ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಪುರುಷರು 25554, ಮಹಿಳೆಯರುವ 25505 ಒಟ್ಟು 50559 ಸೇರಿ ಶೇ.75.09 ಮತದಾನವಾಗಿದೆ. 

ಮತದಾನ ಪ್ರಕ್ರಿಯೆಯಲ್ಲಿ ಸಣ್ಣಪುಟ್ಟ ಮಾತಿನಚಕಮಕಿ ಹೊರತುಪಡಿಸಿ, ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ.

31 ವಾರ್ಡ್‌ ಗಳಗೆ 63 ಮತಗಟ್ಟೆಗಳಲ್ಲಿ ಮತದಾನ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಮತದಾನ ಯಾವುದೇ ಅಡೆತಡೆಗಳಿಲ್ಲದೆ  ಪ್ರಾರಂಭವಾಯಿತು. ಆರಂಭದಲ್ಲಿ  ನೀರಸವಾಗಿದ್ದ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿತ್ತು. ಮಧ್ಯಾಹ್ನ 1 ಗಂಟೆಯ ವೇಳೆಗೆ ಶೇ.35 ಮತದಾನವಾಗಿತ್ತು. ತುಂತುರು ಮಳೆಯಿಂದಾಗಿ ಕೆಲಕಾಲ ಮತದಾನಕ್ಕೆ ಅಡ್ಡಿಯಾಗಿತ್ತು. ಸಂಜೆ 5ರ ವೇಳೆಗೆ ಶೇ. 68 ಮತದಾನವಾಗಿತ್ತು.

ಕೊವಿಡ್-19 ಹಿನ್ನಲೆಯಲ್ಲಿ ಮತಗಟ್ಟೆಗಳಲ್ಲಿ ಆಶಾ ಕಾರ್ಯಕರ್ತೆಯರ ನೆರವಿನೊಂದಿಗೆ, ಮತದಾರರಿಗೆ ಸ್ವಾನಿಟೈಸರ್ ಹಾಕಿ ಥರ್ಮಲ್ ಸ್ಕ್ರೀನಿಂಗ್ ಮಾಡಿ ಒಳ ಬಿಡಲಾಗುತ್ತಿತ್ತು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಕೆಲವಡೆ ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರಿಂದ, ಮತದಾರರು ಗೊಂದಲಕ್ಕೊಳಗಾಗಿ ಮತ ಚಲಾಯಿಸಲು ಅಡ್ಡಿಯಾಗಿತ್ತು.

ಒಂದೇ ಕುಟುಂಬದ ಹೆಸರುಗಳು ಎರಡು ಮೂರು ವಾರ್ಡ್‌ ಗಳಿಗೆ ಹಂಚಿ ಹೋಗಿ, ಯಾವ ಮತಗಳು ಎಲ್ಲಿವೆ ಎನ್ನುವುದು ತಿಳಿಯುವುದೇ ಕಷ್ಟವಾಗಿ, ಮತದಾರರು ವ್ಯವಸ್ಥೆಯನ್ನು ಶಪಿಸುವಂತಾಯಿತು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಚುನಾವಣಾ ಆಯೋಗವೇ ವಿತರಿಸಿತ್ತು. ಆದರೆ ಈ ಬಾರಿ ಮತದಾರರಿಗೆ ಯಾವುದೇ ಗುರುತಿನ ಚೀಟಿ ಹಾಗೂ ಮತಗಟ್ಟೆಗಳ ವಿವರಗಳನ್ನೊಳಗೊಂಡ ಚೀಟಿಗಳನ್ನು ವಿತರಿಸದೇ ಇದ್ದುದರಿಂದ, ಅನಿವಾರ್ಯವಾಗಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ಮೊರೆ ಹೋಗಬೇಕಾದ ಪ್ರಸಂಗ ಎದುರಾಗಿತ್ತು. ಮತದಾರರ ಪಟ್ಟಿಯಲ್ಲಿನ ಕ್ರಮ ಸಂಖ್ಯೆ ಗೊತ್ತಿಲ್ಲದೇ ಗುರುತಿನ ಚೀಟಿ ಹಿಡಿದು ಮತಗಟ್ಟೆಗೆ ಆಗಮಿಸಿ, ಗೊಂದಲಕ್ಕೀಡಾದ ಪ್ರಸಂಗಗಳು ನಡೆದವು.

ಮತದಾರರಿಗೆ ಆಯೋಗದ ಗುರುತಿನ ಚೀಟಿ ಹಾಗೂ ಇತರೆ ಗುರುತಿನ ಚೀಟಿ ಕಡ್ಡಾಯಗೊಳಿಸಿದ್ದರಿಂದ ನಕಲಿ ಮತದಾನ ನಡೆಯಲು ಆಸ್ಪದವಿಲ್ಲದಂತಾಗಿತ್ತು. 

ಮತದಾನ ಕೇಂದ್ರದ 100 ಮೀ.ಒಳಗೆ ಪ್ರಚಾರ ಮಾಡಬಾರದು ಎನ್ನುವ ನಿಯಮವಿದ್ದರೂ ಬಹಳಷ್ಟು ಮತಗಟ್ಟೆಗಳಲ್ಲಿ ಅಭ್ಯರ್ಥಿಗಳು ಮತಗಟ್ಟೆಗಳ ಬಳಿ ಬಂದು ಮತದಾರರ ಬಳಿ ಮತ ಕೇಳುತ್ತಿದ್ದುದು ಸಾಮಾನ್ಯವಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!