ದೊಡ್ಡಬಳ್ಳಾಪುರ: ಕೋವಿಡ್ ಹಿನ್ನೆಲೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸೆ.05ರಂದು ಸರಳವಾಗಿ ಆಚರಿಸಲಾಗುತ್ತಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಬಾಬು ಜಗಜೀವನ್ ರಾಮ್ ಭವನದಲ್ಲಿ ಸೆ.05ರ ಬೆಳಗ್ಗೆ 9.30 ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರಳವಾಗಿ ಆಯೋಜಿಸಲಾಗಿದೆ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..