ಬೆಂ.ಗ್ರಾ.ಜಿಲ್ಲೆ: ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ ಯೋಜನೆಯನ್ನು 2021-22ನೇ ಆರ್ಥಿಕ ವರ್ಷದ ಸಾಲಿನಿಂದ ಜಾರಿಗೆ ತರಲಾಗಿದ್ದು, ಈ ಯೋಜನೆಗೆ ಸೆಪ್ಟೆಂಬರ್ 05 ರಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಣ್ಯರೊಂದಿಗೆ ಮುಖ್ಯಮಂತ್ರಿಗಳು ಬೆಂಗಳೂರಿನ ವಿಧಾನಸೌಧದಲ್ಲಿ ಚಾಲನೆ ನೀಡಲಿದ್ದಾರೆ.
ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 6 ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ.ಸೆಪ್ಟೆಂಬರ್ 05 ರಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ಕಾರ್ಯಕ್ರಮವನ್ನು ನೇರ ಪ್ರಸಾರದಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..