ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸೈಕಲ್ ರ‍್ಯಾಲಿಗೆ ಆರ್.ಲತಾ ಚಾಲನೆ

ಚಿಕ್ಕಬಳ್ಳಾಪುರ: ನಮ್ಮ ದೇಶಕ್ಕೆ ಸುಲಭವಾಗಿ ಆಂಗ್ಲರಿಂದ ಸ್ವಾತಂತ್ರ್ಯ ಸಿಕ್ಕಿಲ್ಲ,  ಹಲವು ಹೋರಾಟಗಳ ಹಾಗೂ ಮಹಾನ್ ಸ್ವಾಂತತ್ರ್ಯ ಹೋರಾಟಗಾರರ ಅವಿರತ ಶ್ರಮ ಮತ್ತು ತ್ಯಾಗ ಬಲಿದಾನಗಳ ಫಲವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅಭಿಪ್ರಾಯ ಪಟ್ಟರು.

ಅವರು ಶುಕ್ರವಾರ ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿ.ಆರ್.ಪಿ.ಎಫ್)   ಜೆ. ಸಿ ಬೆಟಾಲಿಯನ್   ಯೋಧರ ಸೈಕಲ್ ರ‍್ಯಾ ಲಿಗೆ ಚಾಲನೆ ನೀಡಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು 2022 ವರ್ಷಕ್ಕೆ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಭಾಗವಾಗಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯು (ಸಿ.ಆರ್.ಪಿ.ಎಫ್) ಕನ್ಯಾಕುಮಾರಿಯಿಂದ ನವದೆಹಲಿಯ ರಾಜ್ ಘಾಟ್ ವರೆಗೂ ಸೈಕಲ್   ರ‍್ಯಾಲಿಯನ್ನು ಕಳೆದ ಆಗಸ್ಟ್ 22 ರಿಂದ  ಅಕ್ಟೋಬರ್ 02ರ ವರೆಗೆ ಹಮ್ಮಿಕೊಂಡಿದೆ. 

ಈ  ಸೈಕಲ್ ರ‍್ಯಾಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮೂಲಕ ಸಾಗುವುದು ನಮ್ಮ ಅದೃಷ್ಟ ಇಂತಹ ಭಾಗ್ಯ ಕೆಲವೇ ಜಿಲ್ಲೆಗಳಿಗೆ ಸಿಗಲಿದೆ. ಆದ್ದರಿಂದ ಈ ರ‍್ಯಾಲಿಗೆ  ಚಾಲನೆ ನೀಡುವ ಕಾರ್ಯಕ್ಕೆ ನಮ್ಮ ಜಿಲ್ಲೆಗೂ ಅವಕಾಶ ಸಿಕ್ಕಿರುವುದು ನಮಗೆಲ್ಲ ಸಂತಸ ತಂದಿದೆ. ಜಿಲ್ಲೆಯಲ್ಲಿ    ಹಬ್ಬದ   ವಾತಾವರಣ  ಮೂಡಿದ್ದು ಯುವಕರಲ್ಲಿ ಸ್ಪೂರ್ತಿತುಂಬಿದೆ, ಎಲ್ಲರಲ್ಲೂ ದೇಶ ಭಕ್ತಿ ಇಮ್ಮಡಿಗೊಂಡಿದೆ ಈ ಮೂಲಕ ಸ್ವಾಂತತ್ರ್ಯ ಐತಿಹಾಸಿಕ ಮಹತ್ವವನ್ನು ನಮಗೆಲ್ಲರಿಗೂ ತಿಳಿಸಿಕೊಟ್ಟಿದೆ  ಎಂದು ರ‍್ಯಾಲಿ  ಬಗ್ಗೆ ಮೆಚ್ಚುಗೆ ವೆಕ್ತಪಡಿಸಿದರು.

ಯೋಧರ ದೇಶ ಕಾಯುವ ಸೇವೆಯು ಉಳಿದ ಎಲ್ಲಾ ಸೇವೆಗಳಿಗಿಂತ ಶ್ರೇಷ್ಠವಾದದ್ದು, ಇಂತಹ ಯೋಧರೊಂದಿಗೆ ಆಜಾದ್ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಹೆಮ್ಮೆಯ  ವಿಚಾರ.20 ಜನರ ಈ ಪಡೆ  ಪ್ರತಿ ದಿನ 80 ರಿಂದ 90 ಕಿ.ಮೀ ಸಾಗಲಿದೆ. ತಮಿಳುನಾಡು, ಕೇರಳ, ಕರ್ನಾಟಕ  ಆಂಧ್ರಪ್ರದೇಶ,  ತೆಲಂಗಾಣ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳ ಮುಖಾಂತರ   ಸು.2500 ಕಿ.ಮೀ ಸಾಗಿ ಅಕ್ಟೋಬರ್ 02ರ ಮಹಾತ್ಮ ಗಾಂಧೀಜಿ ಜಯಂತಿಯಂದು ನವದೆಹಲಿಯ ರಾಜ್ ಘಾಟ್ ನ್ನು ತಲುಪಲಿದೆ.  ಈ  ಪಡೆಗೆ  ಶುಭವಾಗಲಿ, ಯಶಸ್ವಿಯಾಗಿ ಗುರಿ ತಲುಪಿ ದೇಶದೆಲ್ಲೆಡೆ ಹಬ್ಬದ ವಾತಾವರಣವನ್ನು ಮೂಡಿಸಿ  ದೇಶ ಭಕ್ತಿಯನ್ನ  ಮೊಳಗಿಸಲಿ ಎಂದರು.

ಇದಲ್ಲದೇ ಜಿಲ್ಲೆಯಲ್ಲಿ ಅಮೃತ್ ಮಹತ್ಸೋವ ಕಾರ್ಯಕ್ರಮದ ನಿಮಿತ್ತ ಶಾಲೆಗಳಲ್ಲಿ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಆಯೋಜಿಸಲಾಗಿದೆ. ದೇಶ ಭಕ್ತಿ ಸಾರುವ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ. ಕಳೆದ ಮಾರ್ಚ್ 12 ರಂದು ವಿಧುರಾಶ್ವತ್ಥದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮವನ್ನು ಅಂದಿನ ಮಾನ್ಯ ರಾಜ್ಯಪಾಲರು ಮತ್ತು ಮಾನ್ಯ ಮುಖ್ಯಮಂತ್ರಿಗಳು ಉದ್ಘಾಟಿಸಿರುವುದನ್ನು ಮೆಲುಕು  ಹಾಕಿ ಮುಂದಿನ  ದಿನಗಳಲ್ಲಿ  ಈ  ನಿಟ್ಟಿನಲ್ಲಿ  ಹಲವು  ಕಾರ್ಯಕ್ರಮಗಳನ್ನು  ಆಯೋಜಿಸುವುದಾಗಿ  ತಿಳಿಸಿದರು.

ಈ ಸಂದರ್ಭದಲ್ಲಿ ಸಿ.ಆರ್.ಪಿ.ಎಫ್ ನ ಡೆಪ್ಯೂಟಿ ಕಮಾಂಡೆಂಟ್ ರಮೇಶ್ ಕುಮಾರ್ ರವರು ಮಾತನಾಡಿ, ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನಮ್ಮ ಪಡೆಯ ಸೈಕಲ್ ರ‍್ಯಾಲಿಗೆ  ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅಭೂತ ಪೂರ್ವ ಸ್ವಾಗತ ನೀಡಿ ಒಂದು ದಿನ ಇಲ್ಲಿ ತಂಗಲು ಸಕಲ ವ್ಯವಸ್ಥೆ ಕಲ್ಪಿಸಿ  ಸತ್ಕರಿಸಿದ್ದಕ್ಕೆ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಈ  ವೇಳೆ ಸಂಪನ್ಮೂಲ ವ್ಯಕ್ತಿಯಾಗಿ ಡಾ|| ಚಿನ್ನಕೈವಾರಮಯ್ಯ ಅವರು ಮಾತನಾಡಿ, ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸಿ.ಆರ್.ಪಿ.ಎಫ್ ಪಡೆಯ  ಒಂದು ತಂಡ ಕನ್ಯಾಕುಮಾರಿಯಿಂದ ನವದೆಹಲಿಯ ರಾಜ್ ಘಾಟ್ ವರೆಗೆ, ಮತ್ತೋಂದು ತಂಡ ಕಾಶ್ಮೀರದಿಂದ ರಾಜ್ ಘಾಟ್ ವರೆಗೆ, ಇನ್ನೋಂದು ತಂಡ ಗುಜರಾತ್ ನಿಂದ ರಾಜ್ ಘಾಟ್ ವರೆಗೆ ಮತ್ತು  ಅಸ್ಸಾಂ ನಿಂದ ರಾಜ್ ಘಾಟ್ ವರೆಗೆ  ಮತ್ತೋಂದು ತಂಡ ಸೈಕಲ್ ರ‍್ಯಾಲಿಯನ್ನು ನಡೆಸಿ  ಅ. 2ರಂದು  ರಾಜ್ ಘಾಟ್  ತಲುಪಲಿದೆ.  ಹೀಗೆ 4 ದಿಕ್ಕುಗಳಿಂದ 4 ತಂಡಗಳು  ಸೈಕಲ್ ರ‍್ಯಾಲಿ ಮೂಲಕ ದೇಶದ ಉದ್ದಗಲಕ್ಕೂ ಸಂಚರಿಸಿ ಸ್ವಾತಂತ್ರ್ಯ ಸಂಗ್ರಾಮದ ಮಹತ್ವವನ್ನು ಸಾರಲಿವೆ  ಎಂದು ತಿಳಿಸಿ ಸ್ವಾತಂತ್ರ್ಯಗಳಿಸಿದ ಹಿನ್ನೆಲೆಯ ಇತಿಹಾಸದ ವಿವಿಧ ಘಟನೆಗಳ ಬಗ್ಗೆ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಸಿ.ಆರ್.ಪಿ.ಎಫ್ ನ ಅಸಿಸ್ಟೆಂಟ್ ಕಮ್ಯಾಂಡೆಂಟ್  ಕಾರ್ತಿಕ್, ವಿನಾಯಕ, ಸಮನ್ವಯ ಅಧಿಕಾರಿ ತ್ರೀಲೋಚನಾ ಪ್ರಸಾದ್, ಉಪ ಪೊಲೀಸ್ ವರಿಷ್ಠಾಧಿಕಾರಿ ವಾಸುದೇವ್, ತಹಸೀಲ್ದಾರ್ ದಿವಾಕರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಸ್ವಾಮಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

ಸೈಕಲ್ ರ‍್ಯಾಲಿಯ  ಚಾಲನೆಗೂ ಮುನ್ನ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಭರತ ನಾಟ್ಯ, ದೇಶ ಭಕ್ತಿ ಗೀತೆ ಗಾಯನ, ಜಾನಪದ ನೃತ್ಯಗಳು ಯೋಧರ  ಹಾಗೂ ನೆರೆದಿದ್ದವರ ಗಮನ ಸೆಳೆದವು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

"ಧರ್ಮಸ್ಥಳ ಸತ್ಯ ಯಾತ್ರೆಗೆ" (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

[ccc_my_favorite_select_button post_id="113258"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನ: Cmsiddaramaiah

[ccc_my_favorite_select_button post_id="113214"]
ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ!| Video ನೋಡಿ

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿ ನುಗ್ಗಿರುವ ಘಟನೆ ನಗರದ ಹೊರವಲಯದಲ್ಲಿನ Doddaballapura ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

[ccc_my_favorite_select_button post_id="113161"]
ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit & Run) ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ

[ccc_my_favorite_select_button post_id="113236"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!