ದೊಡ್ಡಬಳ್ಳಾಪುರ: ಸಿಎಸ್ ಆರ್ ಯಾಜನೆಯ ಸುಮಾರು 10ಲಕ್ಷ ಅನುದಾನದಲ್ಲಿ ಖಾಸಗಿ ಸಂಸ್ಥೆಯೊಂದು ಸರ್ಕಾರಿ ಆಸ್ಪತ್ರೆಯ ಆವರಣವನ್ನು ಅಭಿವೃದ್ಧಿ ಕೈಗೊಂಡು ಜನರ ಪ್ರಶಂಸೆಗಳಿಸಿದೆ.
ಯಲಹಂಕದ ನಾನ್ ಗೋ ಸೀಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಈ ಪ್ರಶಂಸೆಗೆ ಪಾತ್ರವಾಗಿದ್ದು, ಸಿಎಸ್ ಆರ್ ಯೋಜನೆಯಡಿ ಹತ್ತು ಲಕ್ಷ ವೆಚ್ಚ ಮಾಡಿ ಹೊಸಹಳ್ಳಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣವನ್ನು ಅಭಿವೃದ್ಧಿ ಕಾರ್ಯಕೈಗೊಂಡು ಆಸ್ಪತ್ರೆಗೆ ಹಸ್ತಾಂತರಿಸಿದೆ.
ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಅಭಿವೃದ್ಧಿ ಕಾರ್ಯಕ್ರಮಕೈಗೊಂಡ ನಾನ್ ಗೋ ಸೀಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮುಖ್ಯ ವ್ಯವಸ್ಥಾಪಕಿ ಫಿಲೋಮಿನಾ ಅವರನ್ನು ಆಸ್ಪತ್ರೆಯ ಸಿಬ್ಬಂದಿ, ಗ್ರಾಮಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.
ಈ ವೇಳೆ ಆಸ್ಪತ್ರೆವತಿಯಿಂದ ಸಂಸ್ಥೆಗೆ ಪ್ರಶಂಸನಾ ಪತ್ರವನ್ನು ಆಡಳಿತ ವೈದ್ಯಾಧಿಕಾರಿ ಡಾ.ಶ್ವೇತ ನಾಯ್ಕ್ ನೀಡಿದರು.
ಈ ಸಂಧರ್ಭದಲ್ಲಿ ತಾಲೂಕುಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್, ಪಿಡಿಒ ನಾಗರಾಜ್, ಸಂಸ್ಥೆಯ ಸಂಯೋಜಕ ಸುರೇಂದ್ರ ಸೇರಿದಂತೆ ಗ್ರಾಮಪಂಚಾಯಿತಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..