ದೊಡ್ಡಬಳ್ಳಾಪುರ: ರೈತರ ಮಕ್ಕಳಿಗೆ ಸರ್ಕಾರ ನೀಡುತ್ತಿರುವ ವಿದ್ಯಾರ್ಥಿ ವೇತನ, ರೈತರ ಮಕ್ಕಳು ಶಿಕ್ಷಣ ಪಡೆದು ಮುನ್ನಡೆ ಸಾಧಿಸಲು ಅನುಕೂಲವಾಗಲಿದ್ದು, ರೈತರ ಮಕ್ಕಳು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಎನ್.ಸುಶೀಲಮ್ಮ ತಿಳಿಸಿದರು.
ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಮುಖ್ಯಮಂತ್ರಿಗಳ ರೈತ ವಿದ್ಯಾನಿ ಕಾರ್ಯಕ್ರಮದ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಿಯುಸಿ ನಂತರದ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿಕೆ ಆರಂಭವಾಗಲಿದ್ದು, ರೈತ ಮಕ್ಕಳು ಎನ್ನುವುದಕ್ಕೆ ಅಗತ್ಯ ದಾಖಲೆ ನೀಡಬೇಕು. ಈ ಯೋಜನೆಯಡಿ ಪಿಯುಸಿ, ಐಟಿಐ, ಡಿಪ್ಲಮಾ ವಿದ್ಯಾರ್ಥಿಗಳಿಗೆ 2.5 ಸಾವಿರ ರೂ. ಮತ್ತು ವಿದ್ಯಾರ್ಥಿನಿಯರಿಗೆ 3 ಸಾವಿರ ರೂ, ಪದವೀಧರ ವಿದ್ಯಾರ್ಥಿಗಳಿಗೆ 5 ಸಾವಿರ ರೂ, ವಿದ್ಯಾರ್ಥಿನಿಯರಿಗೆ 5.5ಸಾವಿರ ರೂ, ಎಲ್ ಎಲ್ ಬಿ, ಪ್ಯಾರಾಮೆಡಿಕಲ್, ಬಿ ಫಾರ್ಮ, ನರ್ಸಿಂಗ್, ವೃತ್ತಿಪರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ 7.5ಸಾವಿರ ರೂ, ನೀಡಿದರೆ, ವಿದ್ಯಾರ್ಥಿನಿಯರಿಗೆ 8 ಸಾವಿರ ರೂ ಬಿಇ, ಬಿ.ಟೆಕ್, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 10 ಸಾವಿರ ಹಾಗೂ ವಿದ್ಯಾರ್ಥಿನಿಯರಿಗೆ 11 ಸಾವಿರ ರೂ. ಹಣವನ್ನು ಸರ್ಕಾರ ನೀಡಲಿದೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ಸಹಾಯಕ ಅಧಿಕಾರಿಗಳಾದ ಹರೀಶ್, ಸಿದ್ದಲಿಂಗಯ್ಯ, ಲಿಂಗಯ್ಯ, ಗೀತಾ, ಶಶಿಧರ್ ಮತ್ತಿತರರು ಭಾಗವಹಿಸಿದ್ದರು.
ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲೂಕಿನಿಂದ ವಿದ್ಯಾರ್ಥಿಗಳಾದ ಜ್ಯೋತಿ, ಅರುಣ್ ಕುಮಾರ್, ದೀಪಕ್, ಚೈತ್ರಾ ಭಾಗವಹಿಸಿದ್ದರು. ವಿದ್ಯಾರ್ಥಿನಿ ಜ್ಯೋತಿ, ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ ಯೋಜನೆಯಿಂದ ನನ್ನ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಉಪಯೋಗವಾಗಲಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..