ಬೆಂಗಳೂರು: ಕೆಲವು ದಿನಗಳಿಂದ ತೀವ್ರ ಚರ್ಚೆಯ ಕೇಂದ್ರ ಬಿಂದುವಾಗಿದ್ದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಕೊನೆಗೂ ಸರ್ಕಾರ ನಿರ್ಧಾರ ಪ್ರಕಟಿಸಿದೆ. ಇಂದು ತಜ್ಞರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ್ದಾರೆ.
ಸೆ.10ರಂದು ಗಣೇಶ ಹಬ್ಬ ನಡೆಯಲಿದೆ. ಆ.30ರಂದು ಈ ಬಗ್ಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೆ.5ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಅದರಂತೆ ಇಂದು ಸಭೆ ನಡೆಸಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, ಗಣೇಶ ಮೂರ್ತಿಯನ್ನು ಐದು ದಿನದೊಳಗೆ ವಿಸರ್ಜನೆ ಮಾಡಬೇಕು. ನಗರಗಳಲ್ಲಿ ವಾರ್ಡ್ ಗೆ ಒಂದು ಮಾತ್ರ ಗಣೇಶ ಮೂರ್ತಿ ಇಡಬಹುದು. ಹಳ್ಳಿಗಳಷ್ಟು ಸ್ಥಳಿಯಾಡಳಿತದ ಅನುಮತಿಯ ಮೇರೆಗೆ ಮೂರ್ತಿ ಪ್ರತಿಷ್ಠೆ ಮಾಡಬೇಕು ಎಂದರು.
ಕೋವಿಡ್ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇದ್ದಲ್ಲಿ ಮಾತ್ರ ಅವಕಾಶ ನೀಡಲಾಗುವುದು. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಕಡೆಗಳಲ್ಲಿ ಗಣೇಶೋತ್ಸವ ನಡೆಸಲು ಅವಕಾಶ ನೀಡುವುದಲ್ಲ. ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳಗಳಲ್ಲಿ ಕೋವಿಡ್ ಲಸಿಕಾ ಕ್ಯಾಂಪ್ ನಡೆಸಲಾಗುವುದು. 50 ಅಡಿಗಿಂತ ಹೆಚ್ಚು ಪೆಂಡಾಲ್ ಹಾಕುವಂತಿಲ್ಲ ಎಂದು ಅಶೋಕ್ ಹೇಳಿದರು. (ಸಾಂದರ್ಭಿಕ ಚಿತ್ರ ಬಳಸಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..