ಯೋಜನೆಗಳ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಅಲ್ಪಸಂಖ್ಯಾತರಿಗಾಗಿ ವಿವಿಧ ಇಲಾಖೆಗಳಲ್ಲಿ ಜಾರಿಯಲ್ಲಿರುವ ಯೋಜನೆಗಳ ಕುರಿತು ಕರಪತ್ರಗಳು ಹಾಗೂ ಮಾಧ್ಯಮಗಳ ಮೂಲಕ ಅಗತ್ಯ ಮಾಹಿತಿಗಳನ್ನು ನೀಡುವ ಮುಖೇನ ಅಲ್ಪಸಂಖ್ಯಾತರಿಗೆ ಸೌಲಭ್ಯಗಳ ಕುರಿತು ಅರಿವು ಮೂಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್  ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿಯಲ್ಲಿ 2020-21ನೇ ಸಾಲಿನಲ್ಲಿ ಮಾರ್ಚ್ 2021ರ ಅಂತ್ಯದವರೆಗಿನ 4ನೇ ತ್ರೈಮಾಸಿಕ ಮತ್ತು 2021-22ನೇ ಸಾಲಿನ ಜೂನ್ 2021ರ ವರೆಗಿನ 1ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯೋಜನೆಗಳ ಕುರಿತು ಅಗತ್ಯ ಮಾಹಿತಿ ನೀಡಿದಾಗ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಸೌಲಭ್ಯಗಳನ್ನು ಪಡೆಯಲು ಸಾಧ್ಯ ಎಂದರು.

ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಯುವಕ-ಯುವತಿಯರ ದಾಖಲಾತಿ ಸಂಗ್ರಹಿಸಿ, ಅವರಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಕೌಶಲ್ಯವನ್ನು ವೃದ್ಧಿಸುವಂತಹ ತರಬೇತಿ ನೀಡಿ, ನಿರುದ್ಯೋಗದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಬ್ಯಾಂಕ್‍ಗಳಲ್ಲಿ ಸಲ್ಲಿಸಿರುವ ಅರ್ಜಿಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ಸಾಲ ಸೌಲಭ್ಯ ಒದಗಿಸಬೇಕು ಎಂದರಲ್ಲದೆ, ಕೃಷಿ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ರೈತರನ್ನು ಗುರುತಿಸಿ, ಅವರ ಜಮೀನಿನಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸುವ ರಸಗೊಬ್ಬರ ವಿತರಣೆ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ.ಬಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಮೈಲಾರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನರೇಂದ್ರ ಬಾಬು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭವ್ಯ, ಕೃಷಿ ಇಲಾಖೆ ಉಪ ನಿರ್ದೇಶಕಿ ವಿನುತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನಿತಾಲಕ್ಷೀ, ಪಶು ಸಂಗೋಪನಾ ಹಾಗೂ ಪಶು ವೈದ್ಯ ಸೇವಾ ಇಲಾಖೆ ಮುಖ್ಯ ವೈದ್ಯಾಧಿಕಾರಿ ಡಾ.ಅನಿಲ್‍ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!