ದೊಡ್ಡಬಳ್ಳಾಪುರ: ಸೆ.3ರಂದು ನಡೆದ 31ವಾರ್ಡ್ ಗಳ ನಗರ ಸಭೆ ಚುನಾವಣೆಯ ಫಲಿತಾಂಶ 8ಗಂಟೆಗೆ ನಗರದ ಕೊಂಗಾಡಿಯಪ್ಪ ಪ್ರೌೌಢಶಾಲೆಯಲ್ಲಿ ಆರಂಭವಾಗಲಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಮೆರವಣಿ, ಸಂಭ್ರಮಾಚರಣೆಯನ್ನು ಹಾಗೂ ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಕೊಂಡೊಯ್ಯದಂತೆ ನಿಷೇಧ ಹೇರಲಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ತಿಳಿಸಿದ್ದಾರೆ.
ಚುನಾವಣೆಯಲ್ಲಿ 33,229 ಪುರುಷರು ಹಾಗೂ 33,412 ಮಹಿಳಾ ಮತದಾರರು ಸೇರಿ ಒಟ್ಟು ಒಟ್ಟು 66,641 ಮತದಾರರಿದ್ದು, ಇದರಲ್ಲಿ 25,554 ಪುರುಷರು ಹಾಗೂ 25,005 ಮಹಿಳಾ ಮತದಾರರು ಸೇರಿ ಒಟ್ಟು ಒಟ್ಟು 50,559 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಶುಕ್ರವಾರ 31 ಸ್ಥಾನಗಳಿಗಾಗಿ ನಡೆದ ಚುನಾವಣೆಗೆ ಕಾಂಗ್ರೆಸ್-31, ಬಿಜೆಪಿ -30, ಜೆಡಿಎಸ್-28, ಸಿಪಿಐ(ಎಂ)-2, ಬಿಎಸ್‍ಪಿ-3 , ಕನ್ನಡ ಪಕ್ಷ-5, ಕೆ.ಆರ್.ಎಸ್-2, ಉತ್ತಮ ಪ್ರಜಾಕೀಯ ಪಕ್ಷ-1, ಎಸ್.ಡಿ.ಪಿ.ಐ-2, ಹಾಗೂ ಪಕ್ಷೇತರರು -15 ಸೇರಿ 119 ಮಂದಿ ಅಂತಿಮ ಕಣದಲ್ಲಿದ್ದರು.
ಚುನಾವಣಾ ಫಲಿತಾಂಶ ಸೆ.6ರಂದು ಬೆಳಿಗ್ಗೆ 8 ಗಂಟೆಗೆ ನಗರದ ಕೊಂಗಾಡಿಯಪ್ಪ ಪ್ರೌಢಶಾಲೆಯ ಚುನಾವಣಾ ಕೇಂದ್ರದಲ್ಲಿ ನಡೆಯಲಿದೆ. ಇದಕ್ಕಾಗಿ 4 ಎಣಿಕೆ ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಎಣಿಕೆ ಕೊಠಡಿಯಲ್ಲಿ 4 ಟೇಬಲ್‍ಗಳಂತೆ 16 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. 4 ಸುತ್ತುಗಳಲ್ಲಿ ಮತ ಎಣಿಕೆ ನಡೆಸಲಾಗುವುದು ಎಂದು ತಾಲೂಕು ಚುನಾವಣಾಕಾರಿ ಹಾಗೂ ತಹಸೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.
ವಿದ್ಯುನ್ಮಾನ ಮತ ಯಂತ್ರಗಳ ಮೂಲಕ ಮತದಾನ ನಡೆದಿರುವ ಹಿನ್ನಲೆಯಲ್ಲಿ ಬೆಳಿಗ್ಗೆ 10.30ರ ವೇಳೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..