ಯಲಹಂಕ: ಕ್ಷೇತ್ರ ಶಿಕ್ಷಣಾಧಿಕಾರಿಯ ಮೇಲೆ ಶಾಲಾ ಶಿಕ್ಷಕನೇ ಹಲ್ಲೆ ಮಾಡಿ ಬೆದರಿಕೆ ಹಾಕಿರುವ ಘಟನೆ ಬೆಂಗಳೂರು ಉತ್ತರ ವಲಯ-4ರಲ್ಲಿ ನಡೆದಿದೆ.
ಯಲಹಂಕ ವಿಧಾನಸಭಾ ಕ್ಷೇತ್ರದ ರಾಜಾನುಕುಂಟೆಯ ಪೊಲೀಸ್ ಠಾಣಾ ವ್ಯಾಪ್ತಿಯ ಕಡತನಮಲೆ ಗ್ರಾಮದ ನಿವಾಸಿ ಖಾಸಗಿ ಶಾಲೆಯ ಶಿಕ್ಷಕ ರಮೇಶ್ ಹಲ್ಲೆ ನಡೆಸಿರುವ ಆರೋಪಿಯಾಗಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಕಮಲಾಕರ ಸರ್ಕಾರಿ ಶಾಲೆಯ ಜಾಗ ಒತ್ತುವರಿ ತೆರವುಗೊಳಿಸುತ್ತಿರುವಾಗ ರಮೇಶ್ ಪೊಲೀಸರ ಸಮ್ಮುಖದಲ್ಲೇ ಹಲ್ಲೆನಡಸಿ, ಬೆದರಿಕೆ ಹೊಡ್ಡಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಘಟನೆ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂದಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಸರ್ಕಾರಿ ಶಾಲೆ ಜಾಗ ಒತ್ತುವರಿ; ಕಡತನೆಮಲೆ ಗ್ರಾಮದ ಸರ್ಕಾರಿ ಶಾಲಾ ಕಟ್ಟಡದ ಮುಂಭಾಗದ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದನ್ನು ಗ್ರಾಮಸ್ಥರು ದೂರಿದ್ದರು. ಈ ಬಗ್ಗೆ ದಾಖಲೆಯೊಂದಿಗೆ ಕಂದಾಯ ಅಧಿಕಾರಿಗಳ ಸಮ್ಮುಖದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಿಬ್ಬಂದಿಗಳು ಗ್ರಾಮ ಪಂಚಾಯಿತಿ ಸಿಬ್ಬಂದಿಯೊಂದಿಗೆ ಅಳತೆ ಮಾಡಿ ಜೆಸಿಬಿ ಯಂತ್ರಗಳಿಂದ ತೆರವುಗೊಳಿಸುತ್ತಿದ್ದಾಗ ಬಿಗಿ ಪೊಲೀಸರ ಬಂದೊಬಸ್ತು ಸಮ್ಮುಖದಲ್ಲೇ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿರುವ ರಮೇಶ್ ಮತ್ತು ಅವರ ಕುಟುಂಬಸ್ಥರು ಏಕಾ ಏಕಿ ಬಂದು ಬಿಇಒ ಕಮಲಾಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆಂದು ದೂರಿನಲ್ಲಿ ತಿಳಿಸಿದ್ದು, ಆರೋಪಿಯನ್ನು ಸ್ಥಳದಲ್ಲೇ ಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ.
ಖಾಸಗಿ ಶಾಲಾ ಶಿಕ್ಷಕ, ದೇವಾಲಯದ ಪೂಜಾರಿ: ರಮೇಶ್ ಬೆಂಗಳೂರು ನಗರದ ಖಾಸಗಿ ಶಾಲೆಯ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಜೊತೆಗೆ ಗ್ರಾಮದ ದುರ್ಗದಮ್ಮ ದೇವಾಲಯದಲ್ಲಿ ಈತನು ಸೇರಿದಂತೆ ಇವರ ಕುಟುಂಬಸ್ಥರು ಪೂಜೆ ಮಾಡಿಕೊಂಡು ಬರುತ್ತಿದ್ದು ಮನೆಯ ಮುಂದೆ ಇದ್ದ ಶಾಲೆಯ ಜಾಗವನ್ನು ಒತ್ತುವರಿ ತೆರವು ಕಾರ್ಯಾಚರಣೆಗೆ ನೋಟೀಸ್ ನೀಡಲಿಲ್ಲ ಎಂದು ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಗ್ರಾಮಸ್ಥರು ಹಲ್ಲೆ ಮಾಡಿರುವ ಕೃತ್ಯವನ್ನು ಖಂಡಿಸಿದ್ದಾರೆ. ಶಿಕ್ಷಕ ಸಂಘವು ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..